NEET 2021 ಪರೀಕ್ಷೆ ರದ್ದಾಗುವುದಿಲ್ಲ; ಕೇಂದ್ರ ಸರ್ಕಾರದ ಸ್ಪಷ್ಟನೆ
JEE 2020 ಪರೀಕ್ಷೆಯನ್ನು ಆನ್ಲೈನ್ನಲ್ಲೇ ನಡೆಸಲಾಗಿತ್ತು. ನೀಟ್ ಪರೀಕ್ಷೆಯನ್ನು ಲಿಖಿತ ರೂಪದಲ್ಲಿ ನಡೆಸಲಾಗಿತ್ತು. ಈ ಮಧ್ಯೆ ಎಲ್ಲ ಪರೀಕ್ಷೆಗಳನ್ನು ಆನ್ಲೈನ್ನಲ್ಲೇ ನಡೆಸಿ ಎನ್ನುವ ಆಗ್ರಹ ಕೇಳಿ ಬಂದಿತ್ತು.
ನವದೆಹಲಿ: ಮುಂದಿನ ವರ್ಷ ನಡೆಯಲಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಕೇಂದ್ರ ಸರ್ಕಾರ ರದ್ದು ಮಾಡಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ನೀಟ್ ಪರೀಕ್ಷೆ ರದ್ದು ಮಾಡುವ ಯಾವುದೇ ಆಲೋಚನೆ ಇಲ್ಲ ಎಂದು ಹೇಳಿದೆ.
ವಿದ್ಯಾರ್ಥಿಗಳ ಜೊತೆ ಆನ್ಲೈನ್ ಸಂವಾದ ನಡೆಸಿದ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. 2021ರ ನೀಟ್ ಪರೀಕ್ಷೆ ರದ್ದಾಗಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಸರ್ಕಾರ ಆ ರೀತಿ ನಿರ್ಧಾರ ಕೈಗೊಳ್ಳುತ್ತಿಲ್ಲ. ಮುಂದಿನ ವರ್ಷ ನೀಟ್ ಪರೀಕ್ಷೆ ನಡೆಯುತ್ತದೆ. ಇದನ್ನು ರದ್ದು ಮಾಡಿದರೆ ವಿದ್ಯಾರ್ಥಿ ಸಮುದಾಯ ಹಾಗೂ ದೇಶಕ್ಕೆ ಭಾರೀ ನಷ್ಟ ಉಂಟಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
JEE 2020 ಪರೀಕ್ಷೆಯನ್ನು ಆನ್ಲೈನ್ನಲ್ಲೇ ನಡೆಸಲಾಗಿತ್ತು. ನೀಟ್ ಪರೀಕ್ಷೆಯನ್ನು ಲಿಖಿತ ರೂಪದಲ್ಲಿ ನಡೆಸಲಾಗಿತ್ತು. ಈ ಮಧ್ಯೆ ಎಲ್ಲ ಪರೀಕ್ಷೆಗಳನ್ನು ಆನ್ಲೈನ್ನಲ್ಲೇ ನಡೆಸಿ ಎನ್ನುವ ಆಗ್ರಹ ಕೇಳಿ ಬಂದಿತ್ತು. ಈ ಬಗ್ಗೆ ಮಾತನಾಡಿರುವ ಅವರು, ಮುಂದಿನ ದಿನಗಳಲ್ಲಿ ಪರೀಕ್ಷೆಗಳನ್ನು ಆನ್ಲೈನ್ನಲ್ಲೇ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಲಿದೆ ಎಂದರು.
ಪಠ್ಯಕ್ರಮದಲ್ಲಿ ಬದಲಾವಣೆ?
JEE ಹಾಗೂ ನೀಟ್ ಪಠ್ಯಕ್ರಮ ಮತ್ತು ಪರೀಕ್ಷಾ ವಿಧಾನದಲ್ಲಿ ಬದಲಾವಣೆ ಅಗತ್ಯವಿದೆ ಎಂದು ಕಂಡು ಬಂದರೆ ನಾವದನ್ನು ಮಾಡುತ್ತೇವೆ. 2021ರ ಸಿಬಿಎಸ್ಇ ಪರೀಕ್ಷಾ ದಿನಾಂಕವನ್ನು ನಿಗದಿಗಿಂತಲೂ ಮೊದಲೇ ಘೋಷಣೆ ಮಾಡುತ್ತೇವೆ ಎಂದು ರಮೇಶ್ ಪೋಕ್ರಿಯಾಲ್ ತಿಳಿಸಿದರು.
Interacting with teachers, parents and students on upcoming competitive/board exams. #EducationMinisterGoesLive @EduMinOfIndia @SanjayDhotreMP @PIB_India @MIB_India @DDNewslive https://t.co/qOsUBJ2J30
— Dr. Ramesh Pokhriyal Nishank (@DrRPNishank) December 10, 2020
ಕೊರೊನಾ ಕರಾಳತೆ, ನೀಟ್ಗೆ ಅಡ್ಡಿ: ವಿದ್ಯಾರ್ಥಿನಿಗೆ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವರ ನೆರವು