AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಪರದಾಟ, ಡೋಲಿಯಲ್ಲೇ ಹೊತ್ತೊಯ್ಯುವಾಗ ಮಾರ್ಗ ಮಧ್ಯೆ ಹೆರಿಗೆ

ಹೈದರಾಬಾದ್: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಪಾರ್ಲು ಗ್ರಾಮದಲ್ಲಿ ತುಂಬು ಗರ್ಭಿಣಿಯೊಬ್ಬಳಿಗೆ ನಿನ್ನೆ ದಿಢೀರ್ ಅಂತ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಆಕೆಯನ್ನ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ಮುಂದಾಗಿದ್ದಾರೆ. ದುರದೃಷ್ಟ ಅಂದ್ರೆ ಊರಿಗೆ ಸರಿಯಾದ ರಸ್ತೆಯೇ ಇಲ್ಲ. ಹೀಗಾಗಿ, ಕುಟುಂಬಸ್ಥರು ಮತ್ತು ಗ್ರಾಮಸ್ಥರು ಸೇರಿ ಡೋಲಿ ತಯಾರಿಸಿದ್ದಾರೆ. ಬಳಿಕ ಅದರಲ್ಲಿ ಮಹಿಳೆಯನ್ನ ಕೂರಿಸಿ 8ರಿಂದ 10 ಕಿಲೋ ಮೀಟರ್ ನಡೆದುಕೊಂಡೇ ಸಾಗಿದ್ದಾರೆ. ಇಬ್ಬರು ಡೋಲಿಗೆ ಹೆಗಲು ಕೊಟ್ರೆ, ಒಂದಷ್ಟು ಜನ ಬಟ್ಟೆ ಸಾಮಗ್ರಿ ತೆಗೆದುಕೊಂಡು ಹಿಂದೆ ಬಂದಿದ್ದಾರೆ. ಮತ್ತೆ […]

ಗರ್ಭಿಣಿ ಪರದಾಟ, ಡೋಲಿಯಲ್ಲೇ ಹೊತ್ತೊಯ್ಯುವಾಗ ಮಾರ್ಗ ಮಧ್ಯೆ ಹೆರಿಗೆ
ಸಾಧು ಶ್ರೀನಾಥ್​
|

Updated on:Jan 02, 2020 | 10:47 AM

Share

ಹೈದರಾಬಾದ್: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಪಾರ್ಲು ಗ್ರಾಮದಲ್ಲಿ ತುಂಬು ಗರ್ಭಿಣಿಯೊಬ್ಬಳಿಗೆ ನಿನ್ನೆ ದಿಢೀರ್ ಅಂತ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಆಕೆಯನ್ನ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ಮುಂದಾಗಿದ್ದಾರೆ. ದುರದೃಷ್ಟ ಅಂದ್ರೆ ಊರಿಗೆ ಸರಿಯಾದ ರಸ್ತೆಯೇ ಇಲ್ಲ. ಹೀಗಾಗಿ, ಕುಟುಂಬಸ್ಥರು ಮತ್ತು ಗ್ರಾಮಸ್ಥರು ಸೇರಿ ಡೋಲಿ ತಯಾರಿಸಿದ್ದಾರೆ. ಬಳಿಕ ಅದರಲ್ಲಿ ಮಹಿಳೆಯನ್ನ ಕೂರಿಸಿ 8ರಿಂದ 10 ಕಿಲೋ ಮೀಟರ್ ನಡೆದುಕೊಂಡೇ ಸಾಗಿದ್ದಾರೆ. ಇಬ್ಬರು ಡೋಲಿಗೆ ಹೆಗಲು ಕೊಟ್ರೆ, ಒಂದಷ್ಟು ಜನ ಬಟ್ಟೆ ಸಾಮಗ್ರಿ ತೆಗೆದುಕೊಂಡು ಹಿಂದೆ ಬಂದಿದ್ದಾರೆ. ಮತ್ತೆ ಕೆಲವರು ಕಾಡಿನ ದಾರಿಯಲ್ಲಿ ಯಾವುದೇ ತೊಂದರೆಯಾಗದಂತೆ ಮಾರ್ಗ ಸರಿ ಮಾಡುತ್ತಾ ಸಾಗಿದ್ದಾರೆ.

ಮಾರ್ಗ ಮಧ್ಯೆಯೇ ಮುದ್ದಾದ ಮಗುವಿಗೆ ಜನ್ಮಕೊಟ್ಟ ತಾಯಿ: ಹೌದು ತಗ್ಗು ಅಂಕು ಡೊಂಕಾದ ರಸ್ತೇಲಿ ಮಹಿಳೆಗೆ ಹೆರಿಗೆ ನೋವು ಜಾಸ್ತಿಯಾಗಿದೆ. ಌಂಬುಲೆನ್ಸ್​ಗೆ ಫೋನ್ ಮಾಡಿದ್ರೂ, ಮಹಿಳೆಯಿದ್ದ ಸ್ಥಳಕ್ಕೆ ಌಂಬುಲೆನ್ಸ್ ಬರಲು ಸಾಧ್ಯವಾಗಿಲ್ಲ. ಕೊನೆಗೆ ಕಾಡಿನ ದಾರಿಯಲ್ಲೇ ಮಹಾತಾಯಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಟ್ನಲ್ಲಿ, ಅದೆಷ್ಟೇ ಸರ್ಕಾರ ಬಂದು ಹೋದ್ರೂ, ರಾಜಕಾರಣಿಗಳು ಉದ್ದುದ್ದ ಭಾಷಣ ಬೀಗಿದ್ರೂ ಗ್ರಾಮೀಣ ಪ್ರದೇಶದಲ್ಲಿ ಜನ ಇನ್ನೂ ನರಕದಲ್ಲೇ ದಿನ ದೂಡುತ್ತಿದ್ದಾರೆ.

Published On - 10:27 am, Thu, 2 January 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!