ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಮೈತ್ರಿಯ ಪ್ರಶ್ನೆಯೇ ಇಲ್ಲ; ಫಡ್ನವಿಸ್ ಹೇಳಿಕೆ ಬೆನ್ನಲ್ಲೇ ಶರದ್ ಪವಾರ್ ಸ್ಪಷ್ಟನೆ

2024ರ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಹೋರಾಟದ ಬಗ್ಗೆ ಮಾತನಾಡಿದ ಶರದ್ ಪವಾರ್, ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಾರದು. ಮಹಾರಾಷ್ಟ್ರದಲ್ಲಿ ಇಂದೇ ವಿಧಾನಸಭೆ ಚುನಾವಣೆ ನಡೆದರೂ ಎನ್‌ಸಿಪಿ, ಕಾಂಗ್ರೆಸ್, ಉದ್ಧವ್ ಠಾಕ್ರೆ ಅವರ ಶಿವಸೇನೆಯನ್ನು ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ಸರ್ಕಾರವು ರಾಜ್ಯ ಸರ್ಕಾರವನ್ನು ರಚಿಸಲಿದೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಮೈತ್ರಿಯ ಪ್ರಶ್ನೆಯೇ ಇಲ್ಲ; ಫಡ್ನವಿಸ್ ಹೇಳಿಕೆ ಬೆನ್ನಲ್ಲೇ ಶರದ್ ಪವಾರ್ ಸ್ಪಷ್ಟನೆ
ಶರದ್ ಪವಾರ್
Follow us
|

Updated on: Oct 04, 2023 | 10:12 PM

ಮುಂಬೈ: ಮಹಾರಾಷ್ಟ್ರದಲ್ಲಿ ನಮ್ಮ ಪಕ್ಷ ಬಿಜೆಪಿ ಜೊತೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. ದೇವೇಂದ್ರ ಫಡ್ನವಿಸ್ ಅವರ ಹೇಳಿಕೆಯಿಂದ ನಮ್ಮ ಪಕ್ಷದ ಕಾರ್ಯಕರ್ತರು ಗೊಂದಲಕ್ಕೊಳಗಾಗಿದ್ದಾರೆ ಎಂದು ನನಗೆ ಅನಿಸುವುದಿಲ್ಲ ಎಂದು ಶರದ್ ಪವಾರ್ ಹೇಳಿದ್ದಾರೆ.

2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ ಶರದ್ ಪವಾರ್ ಬಿಜೆಪಿಯನ್ನು ಸಂಪರ್ಕ ಮಾಡಿದ್ದರು. ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಎನ್​ಸಿಪಿ ಮತ್ತು ಬಿಜೆಪಿ ನಡುವೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾತನಾಡಿದ್ದರು. ಆ ವೇಳೆ 2019ರಲ್ಲಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಶರದ್ ಪವಾರ್ ಸಲಹೆ ನೀಡಿದ್ದರು. ಆದರೆ, ಕೊನೆಗೆ ಅವರೇ ಆ ಮೈತ್ರಿಯ ನಿರ್ಧಾರದಿಂದ ಹಿಂದೆ ಸರಿದರು ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಮಾತಾಡುವೆ: ‘ಇಂಡಿಯಾ’ದಲ್ಲಿನ ಭಿನ್ನಾಭಿಪ್ರಾಯ ಬಗ್ಗೆ ಶರದ್ ಪವಾರ್

ಆಪ್‌ನ ಇಂಡಿಯಾ ಬ್ಲಾಕ್ ಮತ್ತು 2024ರ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಹೋರಾಟದ ಬಗ್ಗೆ ಮಾತನಾಡಿದ ಶರದ್ ಪವಾರ್, ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಾರದು ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಇಂದೇ ವಿಧಾನಸಭೆ ಚುನಾವಣೆ ನಡೆದರೂ ಎನ್‌ಸಿಪಿ, ಕಾಂಗ್ರೆಸ್, ಉದ್ಧವ್ ಠಾಕ್ರೆ ಅವರ ಶಿವಸೇನೆಯನ್ನು ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ಸರ್ಕಾರವು ರಾಜ್ಯ ಸರ್ಕಾರವನ್ನು ರಚಿಸಲಿದೆ ಎಂದು ಶರದ್ ಪವಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮುಯ್ಯಿಗೆ ಮುಯ್ಯಿ: ಶರದ್ ಪವಾರ್ ಬಣದ ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸಿದ ಅಜಿತ್ ಪವಾರ್ ಬಣ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಎಎಪಿ ಸಂಸದರ ವಿರುದ್ಧ ಇಡಿ ಕ್ರಮದ ಕುರಿತು ಮಾತನಾಡಿದ ಶರದ್ ಪವಾರ್, ಇದು ಅವರ ವಿರುದ್ಧ ಮತ್ತು ಪರೋಕ್ಷವಾಗಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಸೇಡಿನ ರಾಜಕೀಯವಾಗಿದೆ ಎಂದಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ