AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಮಂಗಗಳ ಕಡಿತದಿಂದ ಸಾವಿಗೀಡಾದವರ ಬಗ್ಗೆ ಯಾವುದೇ ದಾಖಲೆಗಳಿಲ್ಲ: ಕೇಂದ್ರ ಸರ್ಕಾರ

2015 ರಲ್ಲಿ 1,900 ಕ್ಕೂ ಹೆಚ್ಚು ಮಂಗ ಕಡಿತದ ಪ್ರಕರಣಗಳು ವರದಿಯಾಗಿವೆ ಎಂದು ಲೋಕಸಭೆಗೆ ಈ ಹಿಂದೆ ತಿಳಿಸಲಾಯಿತು, ಇದು ಹಿಂದಿನ ವರ್ಷಕ್ಕಿಂತ 400 ಕ್ಕೂ ಹೆಚ್ಚು ಪ್ರಕರಣಗಳು ಹೆಚ್ಚಾಗಿದೆ.

ದೇಶದಲ್ಲಿ ಮಂಗಗಳ ಕಡಿತದಿಂದ ಸಾವಿಗೀಡಾದವರ ಬಗ್ಗೆ ಯಾವುದೇ ದಾಖಲೆಗಳಿಲ್ಲ: ಕೇಂದ್ರ ಸರ್ಕಾರ
ಮಂಗ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
|

Updated on:Mar 14, 2023 | 1:43 PM

Share

ದೇಶದಲ್ಲಿ ಮಂಗಗಳ ಕಡಿತದಿಂದ (Monkey bite) ಗಾಯಗೊಂಡು ಸಾವಿಗೀಡಾದವರ ಸಂಖ್ಯೆಯ ಬಗ್ಗೆ ತನ್ನ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಸೋಮವಾರ ಸಂಸತ್​​ಗೆ (Loksabha) ತಿಳಿಸಿದೆ. ಬಿಜೆಪಿ(BJP) ಸಂಸದ ರಾಜ್ ಕುಮಾರ್ ಚಹರ್ ಅವರು ವಿವಿಧ ರಾಜ್ಯಗಳಲ್ಲಿ ಆಗಾಗ್ಗೆ ಕೋತಿಗಳ ಹಾವಳಿಯ ಪ್ರಕರಣಗಳ ಬಗ್ಗೆ ಸಂಸತ್ತಿನಲ್ಲಿ ಕಳವಳ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಪರಿಹಾರದ ಮೊತ್ತದ ಬಗ್ಗೆ ಸ್ಪಷ್ಟೀಕರಣವನ್ನು ಕೋರಿದರು.

“ಕೇಂದ್ರ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ ಪಾವತಿಸಬೇಕಾದ ಪರಿಹಾರದ ಮೊತ್ತದ ಮರುಪಾವತಿಯನ್ನು ಹಣದ ಲಭ್ಯತೆಗೆ ಒಳಪಟ್ಟಿರುವ ವರ್ಧಿತ ದರಗಳ ಪ್ರಕಾರ ರಾಜ್ಯಗಳು ಮಾಡಬಹುದು ಎಂದು ಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ” ಎಂದು ಸಚಿವಾಲಯವು ಹೇಳಿದ್ದು ಮಂಗಗಳ ದಾಳಿಯಿಂದ ಉಂಟಾದ ಸಾವುಗಳು ಮತ್ತು ಗಾಯಗಳ ವಿವರಗಳ ಬಗ್ಗೆ ಯಾವುದೇ ದಾಖಲೆಯನ್ನು ಹೊಂದಿಲ್ಲ ಎಂದು ಹೇಳಿದೆ. 2015 ರಲ್ಲಿ 1,900 ಕ್ಕೂ ಹೆಚ್ಚು ಮಂಗ ಕಡಿತದ ಪ್ರಕರಣಗಳು ವರದಿಯಾಗಿವೆ ಎಂದು ಲೋಕಸಭೆಗೆ ಈ ಹಿಂದೆ ತಿಳಿಸಲಾಯಿತು, ಇದು ಹಿಂದಿನ ವರ್ಷಕ್ಕಿಂತ 400 ಕ್ಕೂ ಹೆಚ್ಚು ಪ್ರಕರಣಗಳು ಹೆಚ್ಚಾಗಿದೆ.

2015 ರಲ್ಲಿ ದೆಹಲಿಯಲ್ಲಿ ಪ್ರತಿದಿನ ಕನಿಷ್ಠ ಐದು ಕೋತಿ ಕಡಿತದ ಪ್ರಕರಣಗಳು ವರದಿಯಾಗಿವೆ.

ಕಾಡು ಪ್ರಾಣಿಗಳಿಂದ ಉಂಟಾಗುವ ದಾಳಿ, ಗಾಯಗಳು ಮತ್ತು ಆಸ್ತಿ ಮತ್ತು ಜೀವ ಹಾನಿಗಳಿಗೆ ಪರಿಹಾರವನ್ನು ಕೇಂದ್ರ ಪ್ರಾಯೋಜಿತ ಯೋಜನೆಯಡಿ ಒಳಪಡಿಸಲಾಗಿದೆ ಎಂದು 2018 ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:Bhopal gas tragedy: ಭೋಪಾಲ್ ಅನಿಲ ದುರಂತ, ಕೇಂದ್ರದ ಹೆಚ್ಚಿನ ಪರಿಹಾರ ಮನವಿ ವಜಾಗೊಳಿಸಿದ ಸುಪ್ರೀಂ

ಸೋಮವಾರ ಸರ್ಕಾರ ನೀಡಿದ ಉತ್ತರದಲ್ಲಿ ಅಂಥಾ ದಾಳಿಯ ಸಂತ್ರಸ್ತರಿಗೆ ಪಾವತಿಸುವ ಪರಿಹಾರ ಮೊತ್ತವನ್ನು ಸಹ ಹೆಚ್ಚಿಸಲಾಗಿದೆ ಎಂದು ಹೇಳಿದೆ, ರಾಜ್ಯಗಳಲ್ಲಿ ಲಭ್ಯವಿರುವ ಹಣವನ್ನು ಅವಲಂಬಿಸಿ ಪಾವತಿಸಬೇಕಾದ ಪರಿಹಾರದ ಮರುಪಾವತಿಯನ್ನು ಮಾಡಲಾಗುತ್ತದೆ ಎಂದು ಅದು ಸ್ಪಷ್ಟಪಡಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:49 pm, Tue, 14 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!