ನಿಮ್ಮಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ; ಅತ್ಯಾಚಾರ ಪ್ರಕರಣಗಳ ಕುರಿತು ಪ್ರಧಾನಿ ಮೋದಿಗೆ ಮತ್ತೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಈ ತಿಂಗಳ ಆರಂಭದಲ್ಲಿ ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ.

ನಿಮ್ಮಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ; ಅತ್ಯಾಚಾರ ಪ್ರಕರಣಗಳ ಕುರಿತು ಪ್ರಧಾನಿ ಮೋದಿಗೆ ಮತ್ತೆ ಪತ್ರ ಬರೆದ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Follow us
ಸುಷ್ಮಾ ಚಕ್ರೆ
|

Updated on: Aug 30, 2024 | 3:15 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಅತ್ಯಾಚಾರ ಎಸಗಿದ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುವ ಕೇಂದ್ರ ಕಾನೂನನ್ನು ತರಲು ಒತ್ತಾಯಿಸಿದ್ದಾರೆ. ಇಂತಹ ಸೂಕ್ಷ್ಮ ವಿಷಯದ ಕುರಿತು ಇನ್ನೂ ನಿಮ್ಮಿಂದ ಯಾವುದೇ ಉತ್ತರ ಬಂದಿಲ್ಲ. ಆದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಂದ ಮಾತ್ರ ಉತ್ತರವನ್ನು ಸ್ವೀಕರಿಸಲಾಗಿದೆ ಎಂದಿದ್ದಾರೆ.

7 ದಿನಗಳ ಹಿಂದೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. “ಈ ಪ್ರವೃತ್ತಿಯನ್ನು ನೋಡುವುದು ಭಯಾನಕವಾಗಿದೆ. ಇದು ಸಮಾಜದ ಮತ್ತು ರಾಷ್ಟ್ರದ ಆತ್ಮವಿಶ್ವಾಸ ಮತ್ತು ಆತ್ಮಸಾಕ್ಷಿಯನ್ನು ಅಲುಗಾಡಿಸುತ್ತದೆ. ಮಹಿಳೆಯರು ಸುರಕ್ಷಿತ ಭಾವನೆಯನ್ನು ಹೊಂದಲು ಅದನ್ನು ಕೊನೆಗೊಳಿಸುವುದು ನಮ್ಮ ಬದ್ಧ ಕರ್ತವ್ಯವಾಗಿದೆ. ಇಂತಹ ಗಂಭೀರ ಮತ್ತು ಸೂಕ್ಷ್ಮ ಸಮಸ್ಯೆಯನ್ನು ಈ ಘೋರ ಅಪರಾಧಗಳಲ್ಲಿ ಭಾಗಿಯಾದವರಿಗೆ ಅನುಕರಣೀಯ ಶಿಕ್ಷೆಯನ್ನು ಸೂಚಿಸುವ ಕಟ್ಟುನಿಟ್ಟಾದ ಕೇಂದ್ರ ಕಾನೂನಿನ ಮೂಲಕ ಸಮಗ್ರವಾಗಿ ಪರಿಹರಿಸಬೇಕಾಗಿದೆ ಎಂದು ಪತ್ರದಲ್ಲಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ; ಸಂಜಯ್ ರಾಯ್ ಮತ್ತು ಇತರ 6 ಜನರ ಪಾಲಿಗ್ರಾಫ್ ಪರೀಕ್ಷೆ ಆರಂಭ

ಈ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ತ್ವರಿತಗತಿಯ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಮಮತಾ ಬ್ಯಾನರ್ಜಿ ಪ್ರಸ್ತಾಪಿಸಿದ್ದಾರೆ. “ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು, ವಿಚಾರಣೆಗಳನ್ನು 15 ದಿನಗಳಲ್ಲಿ ಪೂರ್ಣಗೊಳಿಸಬೇಕು” ಎಂದು ಮಮತಾ ಬ್ಯಾನರ್ಜಿ ಸಲಹೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್