ಶೇಖ್ ಹಸೀನಾ ಹಸ್ತಾಂತರದ ಬಗ್ಗೆ ಬಾಂಗ್ಲಾದೇಶಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ; ಸಂಸತ್ಗೆ ಸರ್ಕಾರ ಮಾಹಿತಿ
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಭಾರತದಲ್ಲಿನ ಚಟುವಟಿಕೆಗಳ ಬಗ್ಗೆ ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ ನವದೆಹಲಿಗೆ ತೀವ್ರ ಪ್ರತಿಭಟನೆ ಸಲ್ಲಿಸಿದೆ. ಭಾರತದಲ್ಲಿದ್ದಾಗ ಶೇಖ್ ಹಸೀನಾ ಅವರು ಸುಳ್ಳು ಮತ್ತು ಕಟ್ಟುಕಥೆಗಳನ್ನು ಹೇಳಿದ್ದಾರೆ ಎಂದು ಬಾಂಗ್ಲಾದೇಶ ಆರೋಪಿಸಿದೆ. ಇದರ ನಡುವೆ ಶೇಖ್ ಹಸೀನಾ ಹಸ್ತಾಂತರದ ಬಗ್ಗೆ ಬಾಂಗ್ಲಾದೇಶಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ಗೆ ಮಾಹಿತಿ ನೀಡಿದೆ.

ನವದೆಹಲಿ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಹಸ್ತಾಂತರಿಸಲು ಭಾರತಕ್ಕೆ ಕೋರಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಹೇಳಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಆಗಸ್ಟ್ 2023ರಲ್ಲಿ ಭಾರತಕ್ಕೆ ಪಲಾಯನ ಮಾಡುವ ಮೊದಲು ಎಸಗಿದ್ದಾರೆ ಎನ್ನಲಾದ ಅಪರಾಧಗಳಿಗಾಗಿ ಅವರನ್ನು ಗಡೀಪಾರು ಮಾಡುವಂತೆ ಬಾಂಗ್ಲಾದೇಶ ಸರ್ಕಾರ ಮಾಡಿದ ಮನವಿಗೆ ಭಾರತ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಎಂದಿದ್ದಾರೆ.
ಕೇರಳ ಸಿಪಿಐಎಂ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಕೇಳಿದ ಪ್ರಶ್ನೆಗೆ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಉತ್ತರಿಸಿದ್ದಾರೆ. “ಬಾಂಗ್ಲಾದೇಶ ಸರ್ಕಾರವು 2024ರ ಆಗಸ್ಟ್ 5ರಂದು ಭಾರತಕ್ಕೆ ಬರುವ ಮೊದಲು ಮಾಡಿದ ಅಪರಾಧಗಳಿಗಾಗಿ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಹಸ್ತಾಂತರಿಸುವಂತೆ ಕೋರಿದೆ. ಬಾಂಗ್ಲಾದೇಶ ಸರ್ಕಾರಕ್ಕೆ ನಮ್ಮ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ” ಎಂದು ಕೀರ್ತಿ ವರ್ಧನ್ ಸಿಂಗ್ ಉತ್ತರಿಸಿದ್ದಾರೆ.
ಇದನ್ನೂ ಓದಿ: ಶೇಖ್ ಹಸೀನಾ ಹಸ್ತಾಂತರ ಕೋರಿ ಭಾರತಕ್ಕೆ ಬಾಂಗ್ಲಾದೇಶದಿಂದ ಪತ್ರ ರವಾನೆ
ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ನೇತೃತ್ವದಲ್ಲಿ ಅಧಿಕಾರ ವಹಿಸಿಕೊಂಡ ಮಧ್ಯಂತರ ಅಧಿಕಾರಿಗಳ ಪ್ರಕಾರ, ಆಗಸ್ಟ್ 5ರಂದು ಶೇಖ್ ಹಸೀನಾ ಅವರ ಸರ್ಕಾರವನ್ನು ಪದಚ್ಯುತಗೊಳಿಸುವಲ್ಲಿ ಕೊನೆಗೊಂಡ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಯಲ್ಲಿ 800ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಶೇಖ್ ಹಸೀನಾ ಅವರ ಪಕ್ಷವಾದ ಅವಾಮಿ ಲೀಗ್‌ನ ಕೋಟಾ ವ್ಯವಸ್ಥೆಯ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟಿಸಿದರು. ಆದರೆ ಆ ಪ್ರತಿಭಟನೆಗಳು ಕ್ರಮೇಣ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸುವ ಚಳುವಳಿಯಾಗಿ ಬೆಳೆಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




