AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ದೇವಾಲಯದ ಆವರಣದಲ್ಲಿ ಆರ್‌ಎಸ್‌ಎಸ್ ಶಾಖೆಗೆ ಅವಕಾಶ ನೀಡಬಾರದು: ತಿರುವಾಂಕೂರು ದೇವಸ್ವಂ ಸುತ್ತೋಲೆ

ದೇವಾಲಯದ ಸಂಕೀರ್ಣಗಳಲ್ಲಿ ಶಸ್ತ್ರಾಸ್ತ್ರ ತರಬೇತಿಯನ್ನು ನಿರ್ಬಂಧಿಸಲು ಟಿಬಿಡಿ ಕ್ರಮಗಳನ್ನು ಕೈಗೊಂಡಿರುವುದು ಇದೇ ಮೊದಲಲ್ಲ. 2016 ರಲ್ಲಿ, ಮಂಡಳಿಯು ಆರ್‌ಎಸ್‌ಎಸ್ ನೀಡುವ ಎಲ್ಲಾ ರೀತಿಯ ಶಸ್ತ್ರಾಸ್ತ್ರ ತರಬೇತಿಯನ್ನು ನಿಷೇಧಿಸುವ ಸುತ್ತೋಲೆಯನ್ನು ಹೊರಡಿಸಿತ್ತು

ಕೇರಳ: ದೇವಾಲಯದ ಆವರಣದಲ್ಲಿ ಆರ್‌ಎಸ್‌ಎಸ್ ಶಾಖೆಗೆ ಅವಕಾಶ ನೀಡಬಾರದು: ತಿರುವಾಂಕೂರು ದೇವಸ್ವಂ ಸುತ್ತೋಲೆ
ಆರ್​​ಎಸ್​​ಎಸ್ ಶಾಖೆ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 23, 2023 | 8:17 PM

Share

ಮುಖ್ಯಾಂಶಗಳು

  • ಟಿಬಿಡಿ ದಕ್ಷಿಣ ಭಾರತದಲ್ಲಿ ಸುಮಾರು 1,200 ದೇವಾಲಯಗಳನ್ನು ನಿರ್ವಹಿಸುವ ಸಂಸ್ಥೆಯಾಗಿದೆ.
  • ಟಿಡಿಬಿಯ ಹೊಸ ಸುತ್ತೋಲೆಯಲ್ಲಿ ನಿಷೇಧವನ್ನು ಅನುಸರಿಸಲು ವಿಫಲರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
  • ದೇವಾಲಯದ ಆವರಣವನ್ನು ದೇವಾಲಯದ ಆಚರಣೆಗಳು ಮತ್ತು ಉತ್ಸವಗಳಿಗೆ ಹೊರತುಪಡಿಸಿ ಬೇರೆ ಯಾವುದೇ ಉದ್ದೇಶಕ್ಕಾಗಿ ಬಳಸಬಾರದು ಎಂದ ದೇವಸ್ವಂ

ದೇವಾಲಯದ ಆವರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಆಯೋಜಿಸುವ ಸಾಮೂಹಿಕ ಕಸರತ್ತು ಮತ್ತು ಇತರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ತಿರುವಾಂಕೂರು ದೇವಸ್ವಂ ಮಂಡಳಿ (Travancore Devaswom Board -TBD) ತನ್ನ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಿಗೆ ಹೊಸ ಸುತ್ತೋಲೆ ಹೊರಡಿಸಿದೆ. ಟಿಬಿಡಿ ದಕ್ಷಿಣ ಭಾರತದಲ್ಲಿ ಸುಮಾರು 1,200 ದೇವಾಲಯಗಳನ್ನು ನಿರ್ವಹಿಸುವ ಸಂಸ್ಥೆಯಾಗಿದೆ.  ಆರ್‌ಎಸ್‌ಎಸ್ ‘ಶಾಖೆ’ ಅಥವಾ ಕೇರಳದಲ್ಲಿ (Kerala)  ತನ್ನ ನಿರ್ವಹಣೆಯಲ್ಲಿರುವ ದೇವಾಲಯಗಳಲ್ಲಿ ಸಾಮೂಹಿಕ ಕಸರತ್ತುಗಳ ಮೇಲೆ ತನ್ನ ನಿಷೇಧವನ್ನು ಪುನರುಚ್ಚರಿಸಿದ ಟಿಬಿಡಿ ದೇವಸ್ಥಾನಗಳು ತನ್ನ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೇಳಿಕೊಂಡಿದೆ.

ದೇವಾಲಯದ ಸಂಕೀರ್ಣಗಳಲ್ಲಿ ಶಸ್ತ್ರಾಸ್ತ್ರ ತರಬೇತಿಯನ್ನು ನಿರ್ಬಂಧಿಸಲು ಟಿಬಿಡಿ ಕ್ರಮಗಳನ್ನು ಕೈಗೊಂಡಿರುವುದು ಇದೇ ಮೊದಲಲ್ಲ. 2016 ರಲ್ಲಿ, ಮಂಡಳಿಯು ಆರ್‌ಎಸ್‌ಎಸ್ ನೀಡುವ ಎಲ್ಲಾ ರೀತಿಯ ಶಸ್ತ್ರಾಸ್ತ್ರ ತರಬೇತಿಯನ್ನು ನಿಷೇಧಿಸುವ ಸುತ್ತೋಲೆಯನ್ನು ಹೊರಡಿಸಿತ್ತು.

ತಿರುವಾಂಕೂರು ದೇವಸ್ವಂ ಮಂಡಳಿಯು ಮಾರ್ಚ್ 30, 2021 ರಂದು ಆದೇಶವನ್ನು ಮತ್ತೊಮ್ಮೆ ಹೊರಡಿಸಿದ್ದು, ದೇವಾಲಯದ ಆವರಣವನ್ನು ದೇವಾಲಯದ ಆಚರಣೆಗಳು ಮತ್ತು ಉತ್ಸವಗಳಿಗೆ ಹೊರತುಪಡಿಸಿ ಬೇರೆ ಯಾವುದೇ ಉದ್ದೇಶಕ್ಕಾಗಿ ಬಳಸಬಾರದು ಎಂದು ಹೇಳಿದೆ.

ಟಿಡಿಬಿಯ ಹೊಸ ಸುತ್ತೋಲೆಯಲ್ಲಿ ನಿಷೇಧವನ್ನು ಅನುಸರಿಸಲು ವಿಫಲರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಹಲವು ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಶಾಖೆಗಳು ಕಾರ್ಯನಿರ್ವಹಿಸುತ್ತಿವೆ, ಕಸರತ್ತು ನಡೆಸುತ್ತಿವೆ ಮತ್ತು ಇಂತಹ ಚಟುವಟಿಕೆಗಳು ನಡೆಯುತ್ತಿವೆ. ಆದ್ದರಿಂದಲೇ ಇಂತಹ ಸುತ್ತೋಲೆ ಹೊರಡಿಸಲಾಗಿದೆ. ದೇವಾಲಯಗಳಲ್ಲಿ ಭಕ್ತರಿಗೆ, ಭಕ್ತರ ಪೂಜೆಗೆ ಯಾವುದೇ ತೊಂದರೆಯಾಗಬಾರದು. ದೇವಸ್ವಂ ಮಂಡಳಿಯ ನಿಲುವು ಅಧಿಕಾರಿಗಳ ಗಮನಕ್ಕೆ ತರಲು ಮತ್ತೊಮ್ಮೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಟಿಡಿಬಿ ಅಧ್ಯಕ್ಷ ಅನಂತಗೋಪನ್ ಹೇಳಿದ್ದಾರೆ.

ದೇವಸ್ಥಾನಗಳಲ್ಲಿ  ಕೆಲವು ರಾಜಕೀಯ ನಾಯಕರ ಫೋಟೋಗಳನ್ನು ಪ್ರದರ್ಶಿಸಲಾಗಿದೆ. ಇಂತಹ ಕ್ರಮಗಳು ದೇವಾಲಯಗಳ ಪಾವಿತ್ರ್ಯವ ನ್ನು ಹಾಳುಮಾಡುತ್ತದೆ. ಅಧಿಕಾರಿಗಳು ಶಾಂತಿಯುತವಾಗಿ ಸಂಬಂಧಪಟ್ಟ ಜನರೊಂದಿಗೆ ಸಭೆಗಳನ್ನು ಆಯೋಜಿಸುತ್ತಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: UPSC 2022 toppers from Karnataka: KSRTC ಬಸ್ ಚಾಲಕನ ಮಗ ಸೇರಿದಂತೆ 25 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆ

ಏತನ್ಮಧ್ಯೆ ಸುತ್ತೋಲೆ ಹೊರಡಿಸಿರುವುದರ ಹಿಂದೆ ಯಾವುದೇ ರಾಜಕೀಯ ಒತ್ತಡವಿಲ್ಲ ಎಂದು ಅನಂತಗೋಪನ್ ಸ್ಪಷ್ಟಪಡಿಸಿದ್ದಾರೆ. ಜನವರಿಯಿಂದ, ಹಬ್ಬ ಹರಿದಿನಗಳಲ್ಲಿ, ಇದಕ್ಕೆ ಸಂಬಂಧಿಸಿದ ಕೆಲವು ವಿಷಯಗಳು ವರದಿಯಾಗಿವೆ. ಕನಿಷ್ಠ ಕೆಲವು ಸ್ಥಳಗಳಲ್ಲಿ ಈ ಸಂಸ್ಥೆಗಳು ದೇವಾಲಯದ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡಿದ ಉದಾಹರಣೆಗಳಿವೆ ಎಂದು ಟಿಡಿಬಿ ಅಧ್ಯಕ್ಷರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ