AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಕ್ಸೋ ಪ್ರಕರಣದ ಆರೋಪಿಗೆ ಶಿಕ್ಷೆ ನೀಡಲು ಸುಪ್ರೀಂಕೋರ್ಟ್​ ನಕಾರ, ಕಾರಣವೇನು?

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ(ಪೋಕ್ಸೋ)ಯಡಿ ಆರೋಪಿಗೆ ಶಿಕ್ಷೆ ನೀಡಲು ಸುಪ್ರೀಂಕೋರ್ಟ್​ ನಿರಾಕರಿಸಿದೆ. ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಈ ತೀರ್ಪು ಪ್ರಕಟಿಸಿದೆ.ಅಪರಾಧದ ಸಮಯದಲ್ಲಿ ಯುವಕ 24 ವರ್ಷದವನಾಗಿದ್ದ, ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಕ್ಕಾಗಿ ಶಿಕ್ಷೆಗೊಳಗಾಗಿದ್ದ. ಆದರೆ ಆಕೆ ಪ್ರೌಢಾವಸ್ಥೆಗೆ ಬಂದ ಬಳಿಕ ಆಕೆಯನ್ನು ಮದುವೆಯಾಗಿ, ಈಗ ಒಂದು ಮಗು ಕೂಡ ಇದೆ.

ಪೋಕ್ಸೋ ಪ್ರಕರಣದ ಆರೋಪಿಗೆ ಶಿಕ್ಷೆ ನೀಡಲು ಸುಪ್ರೀಂಕೋರ್ಟ್​ ನಕಾರ, ಕಾರಣವೇನು?
ಸುಪ್ರೀಂಕೋರ್ಟ್​ Image Credit source: Live Law
ನಯನಾ ರಾಜೀವ್
|

Updated on:May 23, 2025 | 2:49 PM

Share

ನವದೆಹಲಿ, ಮೇ 23: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ(ಪೋಕ್ಸೋ)ಯಡಿ ಆರೋಪಿಗೆ ಶಿಕ್ಷೆ ನೀಡಲು ಸುಪ್ರೀಂಕೋರ್ಟ್​ ನಿರಾಕರಿಸಿದೆ. ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಈ ತೀರ್ಪು ಪ್ರಕಟಿಸಿದೆ.

ಅಪರಾಧದ ಸಮಯದಲ್ಲಿ ಯುವಕ 24 ವರ್ಷದವನಾಗಿದ್ದ, ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಕ್ಕಾಗಿ ಶಿಕ್ಷೆಗೊಳಗಾಗಿದ್ದ. ಆದರೆ ಆಕೆ ಪ್ರೌಢಾವಸ್ಥೆಗೆ ಬಂದ ಬಳಿಕ ಆಕೆಯನ್ನು ಮದುವೆಯಾಗಿ, ಈಗ ಒಂದು ಮಗು ಕೂಡ ಇದೆ.

ಯುವತಿ ತನ್ನನ್ನು ಸಂತ್ರಸ್ತೆ ಎಂದು ಎಂದೂ ಪರಿಗಣಿಸಿಯೇ ಇಲ್ಲ, ಅವರಿಬ್ಬರಿಗೂ ಮಗು ಇದ್ದು,ಜೀವನ ಸಾಗಿಸುತ್ತಿದ್ದಾರೆ ಎಂದು ತೀರ್ಪಿನಲ್ಲಿ ಹೇಳಲಾಗಿದೆ.ಹಾಗೆಯೇ ಹದಿಹರೆಯದ ಹೆಣ್ಣುಮಕ್ಕಳು ತಮ್ಮ ಲೈಂಗಿಕ ಆಸಕ್ತಿಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಎಂದು ಬುದ್ಧಿವಾದವನ್ನು ಕೋರ್ಟ್​ ಹೇಳಿದೆ.

ಮತ್ತಷ್ಟು ಓದಿ: ಕರ್ನಾಟಕದಲ್ಲಿ ದಿನಕ್ಕೆ 10 ಪೋಕ್ಸೋ ಕೇಸ್ ದಾಖಲು: ಮಕ್ಕಳ ಮೇಲಿನ ಅಪರಾಧ ಕೃತ್ಯಗಳಲ್ಲಿ ಭಾರಿ ಹೆಚ್ಚಳ

ಮತ್ತೊಂದು ಪ್ರಕರಣ, ಅಕ್ಟೋಬರ್ 18, 2023 ರಂದು, ಕೋಲ್ಕತ್ತಾ ಹೈಕೋರ್ಟ್ ಅಪ್ರಾಪ್ತ ವಯಸ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀರ್ಪು ನೀಡಿತ್ತು. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯುವಕನನ್ನು ಹೈಕೋರ್ಟ್ ನ್ಯಾಯಮೂರ್ತಿಗಳಾದ ಚಿತ್ತರಂಜನ್ ದಾಸ್ ಮತ್ತು ಪಾರ್ಥಸಾರಥಿ ಸೇನ್ ದೋಷಮುಕ್ತಗೊಳಿಸಿದ್ದರು.

ಇಬ್ಬರ ನಡುವಿನ ಸಂಬಂಧವು ಒಮ್ಮತದಿಂದ ಕೂಡಿದೆ ಎಂಬ ಆಧಾರದ ಮೇಲೆ ನ್ಯಾಯಮೂರ್ತಿಗಳು ಈ ತೀರ್ಪು ನೀಡಿದ್ದರು. ಆದರೆ ಈ ತೀರ್ಪಿನಲ್ಲಿ ನ್ಯಾಯಾಧೀಶರು ಯುವಕರಿಗೆ ಬಹಳಷ್ಟು ಸಲಹೆಗಳನ್ನು ನೀಡಿದ್ದರು. ಈ ಬಗ್ಗೆ ಸಾಕಷ್ಟು ವಿವಾದಗಳು ನಡೆದಿದ್ದವು.

ಬಾಲಕಿ ಆರೋಪಿಯನ್ನು ಮದುವೆಯಾಗಿದ್ದಾಳೆ, ಆಕೆ ತನ್ನ ಗಂಡನನ್ನು ಪ್ರೀತಿಸುತ್ತಾಳೆ. ಆಕೆ ತನ್ನ ಚಿಕ್ಕ ಕುಟುಂಬವನ್ನು ಉಳಿಸಲು ಬಯಸುತ್ತಾಳೆ. ಈ ಪ್ರಕರಣದಲ್ಲಿ, ಅಪರಾಧಿಯನ್ನು ಜೈಲಿನಲ್ಲಿ ಇಡುವುದು ನ್ಯಾಯದ ಹಿತದೃಷ್ಟಿಯಿಂದ ಸರಿಯಲ್ಲ ಎಂದು ಕೋರ್ಟ್​ ಅಭಿಪ್ರಾಯಪಟ್ಟಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:48 pm, Fri, 23 May 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ