‘ಗುಂಡಿನ ದಾಳಿ ನಡೆದಿಲ್ಲ, ಅಶ್ರುವಾಯು ಮಾತ್ರ ಬಳಸಲಾಗಿದೆ’; ರಾಹುಲ್ ಗಾಂಧಿ ಆರೋಪಕ್ಕೆ ಸರ್ಕಾರ ಸ್ಪಷ್ಟನೆ

ಕೇಂದ್ರ ಗೃಹ ಸಚಿವರ ಆದೇಶದಿಂದಲೇ ದೆಹಲಿಯ ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಗುಂಡಿನ ದಾಳಿ ನಡೆಸಲಾಗಿತ್ತು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಸಂಸತ್​​ನಲ್ಲಿ ಆರೋಪ ಮಾಡಿದ್ದರು. ಇದಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಕೇಂದ್ರದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, "ಯಾವುದೇ ಗುಂಡಿನ ದಾಳಿ ನಡೆದಿಲ್ಲ, ಅಶ್ರುವಾಯು ಮಾತ್ರ ಬಳಸಲಾಗಿದೆ ಎಂದು ಪದೇ ಪದೇ ಸ್ಪಷ್ಟಪಡಿಸಲಾಗಿದೆ. ಇಂತಹ ಆದೇಶವನ್ನು ನೀಡುವ ಅಧಿಕಾರ ಮ್ಯಾಜಿಸ್ಟ್ರೇಟ್‌ಗೆ ಇರುತ್ತದೆಯೇ ಹೊರತು ಸಚಿವರಿಗಲ್ಲ" ಎಂದು ಹೇಳಿದ್ದಾರೆ.

‘ಗುಂಡಿನ ದಾಳಿ ನಡೆದಿಲ್ಲ, ಅಶ್ರುವಾಯು ಮಾತ್ರ ಬಳಸಲಾಗಿದೆ’; ರಾಹುಲ್ ಗಾಂಧಿ ಆರೋಪಕ್ಕೆ ಸರ್ಕಾರ ಸ್ಪಷ್ಟನೆ
Jitendra Singh
Image Credit source: PTI

Updated on: Jul 29, 2026 | 6:24 PM

ನವದೆಹಲಿ, ಜುಲೈ 29: ಜುಲೈ 20ರಂದು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಹೋರಾಟದ ವೇಳೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಯಾವುದೇ ಗುಂಡಿನ ದಾಳಿ ನಡೆಸಲಾಗಿಲ್ಲ, ಕೇವಲ ಅಶ್ರುವಾಯುವನ್ನು ಮಾತ್ರ ಬಳಸಲಾಗಿದೆ ಎಂದು ಕೇಂದ್ರ ಸರ್ಕಾರ ಇಂದು ಲೋಕಸಭೆಗೆ ತಿಳಿಸಿದೆ. ಪರೀಕ್ಷಾ ಅಕ್ರಮ ತಡೆ ವಿಧೇಯಕದ ಮೇಲಿನ ಚರ್ಚೆಯ ವೇಳೆ ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅನುಮೋದನೆ ನೀಡಿದ್ದಾರೆ ಎಂಬ ರಾಹುಲ್ ಗಾಂಧಿಯ (Rahul Gandhi) ಆರೋಪಗಳನ್ನು ನಿರಾಕರಿಸಿದರು. ಇಂತಹ ಆದೇಶವನ್ನು ನೀಡುವ ಅಧಿಕಾರ ಮ್ಯಾಜಿಸ್ಟ್ರೇಟ್‌ಗೆ ಇರುತ್ತದೆಯೇ ಹೊರತು ಸಚಿವರಿಗಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

“ಪ್ರತಿಭಟನಾಕಾರರ ಮೇಲೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ, ಅಶ್ರುವಾಯುವನ್ನು ಬಳಸಲಾಗಿದೆ ಎಂದು ಪದೇ ಪದೇ ಸ್ಪಷ್ಟಪಡಿಸಲಾಗಿದೆ. ಗುಂಡಿನ ದಾಳಿಯೇ ನಡೆಯದಿರುವಾಗ, ಆದೇಶ ಹೊರಡಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇಂತಹ ಆದೇಶವನ್ನು ನೀಡುವ ಅಧಿಕಾರ ಮ್ಯಾಜಿಸ್ಟ್ರೇಟ್‌ಗೆ ಇರುತ್ತದೆಯೇ ಹೊರತು ಸಚಿವರಿಗಲ್ಲ” ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.


ಇದನ್ನೂ ಓದಿ: ‘ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿಗೆ ಅಮಿತ್ ಶಾ ಆದೇಶ’; ರಾಹುಲ್ ಗಾಂಧಿ ಆರೋಪಕ್ಕೆ ರಣರಂಗವಾದ ಸಂಸತ್

ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ, 2026ರ ಮೇಲಿನ ಚರ್ಚೆಯ ವೇಳೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಳಸಿದ ಅಸಂಸದೀಯ ಭಾಷೆಯನ್ನು ಕೂಡ ಸಚಿವ ಜಿತೇಂದ್ರ ಸಿಂಗ್ ತೀವ್ರವಾಗಿ ಖಂಡಿಸಿದರು. “ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಇಂತಹ ಅಸಂಸದೀಯ ಭಾಷೆಯನ್ನು ಬಳಸಿರುವುದನ್ನು ಕಂಡು ನಿಜಕ್ಕೂ ಆಘಾತವಾಗಿದೆ. ಈ ದೇಶದ ಯುವಜನತೆಯನ್ನು ಮೂರ್ಖರು (Idiots) ಎಂದು ಕರೆಯುವುದಕ್ಕಿಂತ ದುರದೃಷ್ಟಕರ ಸಂಗತಿ ಇನ್ನೇನಿರಲು ಸಾಧ್ಯ?” ಎಂದು ಅವರು ಪ್ರಶ್ನಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:22 pm, Wed, 29 July 26

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Loading...
Unable to load recommendations.
Follow Us