ಪಕ್ಷ ಒಡೆಯುವುದು ಬೇಡ, ಆದರೆ ಗಾಂಧಿ ಕುಟುಂಬ ನಿಷ್ಠರ ಪದಚ್ಯುತಿಯಾಗಲಿ: ಕಾಂಗ್ರೆಸ್ ಬಂಡಾಯ ನಾಯಕರ ಒತ್ತಾಯ

ಈ ಸ್ಥಿತಿಯಲ್ಲಿ ಪಕ್ಷ ಇಬ್ಭಾಗವಾದರೆ ಅಸ್ತಿತ್ವವೇ ಉಳಿಯುವುದಿಲ್ಲ. ಆದರೆ ಪಕ್ಷದ ಸುಧಾರಣೆ ಪ್ರಕ್ರಿಯೆಗಳು ಶೀಘ್ರ ಆರಂಭವಾಗಬೇಕಿವೆ ಎಂದು ಹಲವು ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಪಕ್ಷ ಒಡೆಯುವುದು ಬೇಡ, ಆದರೆ ಗಾಂಧಿ ಕುಟುಂಬ ನಿಷ್ಠರ ಪದಚ್ಯುತಿಯಾಗಲಿ: ಕಾಂಗ್ರೆಸ್ ಬಂಡಾಯ ನಾಯಕರ ಒತ್ತಾಯ
ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಮತ್ತು ಅಧ್ಯಕ್ಷೆ ಸೋನಿಯಾ ಗಾಂಧಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 17, 2022 | 11:42 AM

ದೆಹಲಿ: ಕಾಂಗ್ರೆಸ್ ಪಕ್ಷ ಒಂದಾಗಿಯೇ ಇರಬೇಕು. ಪಕ್ಷ ಒಡೆಯುವ ಮಾತೇ ಇಲ್ಲ. ಆದರೆ ಗಾಂಧಿ ಕುಟುಂಬದ ನಿಷ್ಠರನ್ನು ಪಕ್ಷದ ಆಯಕಟ್ಟಿನ ಸ್ಥಾನಗಳಿಂದ ಹೊರಗೆ ಹಾಕಬೇಕು ಎಂದು ಕಾಂಗ್ರೆಸ್ ಪಕ್ಷದ ಸುಧಾರಣೆಗೆ ಒತ್ತಾಯಿಸುತ್ತಿರುವ G-23 ಗುಂಪಿನ ನಾಯಕರು ಆಗ್ರಹಿಸಿದ್ದಾರೆ. ಹೀಗೆ ಮಾಡಿದರೆ ಮಾತ್ರ ಪಕ್ಷದ ಪುನರುತ್ಥಾನ ಸಾಧ್ಯವೆಂದು ಅವರು ಬಲವಾಗಿ ಪ್ರತಿಪಾದಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಸುಧಾರಣೆಗೆ ಆಗ್ರಹಿಸುತ್ತಿರುವ ಪ್ರಮುಖ G-23 ಬಣದ ನಾಯಕ ಗುಲಾಂ ನಬಿ ಆಜಾದ್ ಅವರ ಮನೆಯಲ್ಲಿ ಸಭೆ ಸೇರಿದ್ದ ನಾಯಕರು ಪಕ್ಷದಲ್ಲಿ ಸುಧಾರಣೆ ಪ್ರಕ್ರಿಯೆ ಶೀಘ್ರ ಆರಂಭವಾಗಬೇಕಿದೆ ಎಂದು ಆಗ್ರಹಿಸಿದರು. ‘ಈ ಸ್ಥಿತಿಯಲ್ಲಿ ಪಕ್ಷ ಇಬ್ಭಾಗವಾದರೆ ಅಸ್ತಿತ್ವವೇ ಉಳಿಯುವುದಿಲ್ಲ’ ಎಂದು ಹಲವು ನಾಯಕರು ಅಭಿಪ್ರಾಯಪಟ್ಟರು. ಎರಡು ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸುಧಾರಣೆಗೆ ಆಗ್ರಹಿಸಿ ಸೋನಿಯಾ ಗಾಂಧಿ ಅವರಿಗೆ ಬರೆದಿದ್ದ ಪತ್ರಕ್ಕೆ ಸಹಿಹಾಕಿದ್ದ 23 ನಾಯಕರನ್ನು G-23 ನಾಯಕರು ಎಂದೇ ಗುರುತಿಸುವುದು ವಾಡಿಕೆಯಾಗಿದೆ.

G-23 ಗುಂಪಿನ ನಾಯಕ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಶೀಘ್ರ ಭೇಟಿಯಾಗಿ ಬಂಡಾಯ ನಾಯಕರ ಅಭಿಪ್ರಾಯವನ್ನು ಮನವರಿಕೆ ಮಾಡಿಕೊಡಲು ಯತ್ನಿಸಲಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸಹ ಉಪಸ್ಥಿತರಿರುತ್ತಾರೆ ಎನ್ನಲಾಗಿದೆ.

ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸೋನಿಯಾ ಗಾಂಧಿ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕಾ ಸಹ ರಾಜೀನಾಮೆ ನೀಡುತ್ತಾರೆ ಎಂದು ಹೇಳಿದ್ದರು. ಆದರೆ ಪಕ್ಷದ ಉನ್ನತ ನಾಯಕರು ಈ ಪ್ರಸ್ತಾವವನ್ನು ಸಾರಾಸಗಟಾಗಿ ತಳ್ಳಿ ಹಾಕಿದ್ದರು. ಐದು ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ನಾಯಕರಿಗೆ ರಾಜೀನಾಮೆ ನೀಡುವಂತೆ ಸೋನಿಯಾ ಗಾಂಧಿ ಈ ಸಭೆಯಲ್ಲಿ ಸೂಚನೆ ನೀಡಿದ್ದರು.

ಕಾಂಗ್ರೆಸ್ ಪಕ್ಷದ ಉನ್ನತ ನಾಯಕರು ಸೋನಿಯಾ ಗಾಂಧಿ ಅವರ ನಾಯಕತ್ವದಲ್ಲಿ ನಂಬಿಕೆಯಿದೆ ಎಂದು ಒಕ್ಕೊರಲಿನಿಂದ ಹೇಳಿದ್ದರು. ಪಕ್ಷದ ಸಂಘಟನೆಯಲ್ಲಿ ಸುಧಾರಣೆ ತರುವ ದೃಷ್ಟಿಯಿಂದ ಅಗತ್ಯ ಬದಲಾವಣೆಗಳನ್ನು ಮಾಡುವಂತೆ ಸಲಹೆ ಮಾಡಿದ್ದರು. ಪಕ್ಷದಲ್ಲಿ ಆಗಬೇಕಿರುವ ಬದಲಾವಣೆಗಳ ಬಗ್ಗೆ ಸಲಹೆ ಮಾಡುವಂತೆ ಸೋನಿಯಾ ಅವರು ತಮ್ಮ ಆಪ್ತರಾದ ಜೈರಾಮ್ ರಮೇಶ್, ಅಜಯ್ ಮಕೆನ್, ಅವಿನಾಶ್ ಪಾಂಡೆ ಮತ್ತು ಜಿತೇಂದ್ರ ಸಿಂಗ್ ಅವರ ಸಲಹಾ ಸಮಿತಿ ರಚಿಸಿದರು.

ಈ ಸಮಿತಿಗೂ ಬಂಡಾಯ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಸೋನಿಯಾ ತಮ್ಮ ಕುಟುಂಬಕ್ಕೆ ನಿಷ್ಠರಾದವರ ಸಮಿತಿ ರಚಿಸಿದ್ದರು. ಈ ನಾಯಕರು ಪಕ್ಷಕ್ಕಾಗಿ ಹೆಚ್ಚೇನೂ ಮಾಡಿಲ್ಲ. ಬದಲಾಗಿ ಸೋನಿಯಾ ಕುಟುಂಬವನ್ನು ಟೀಕೆಗಳಿಂದ ಕಾಪಾಡಲು ಯತ್ನಿಸುತ್ತಿದ್ದಾರೆ. ಇಂಥವರಿಗೆ ಹೆಚ್ಚೇನೂ ಪ್ರಯೋಜನವಾಗುವುದಿಲ್ಲ ಎಂದು ಬಂಡಾಯ ನಾಯಕರು ದೂರಿದ್ದರು.

ಇದನ್ನೂ ಓದಿ: G-23 meeting ಗುಲಾಂ ನಬಿ ಆಜಾದ್​ರ ನಿವಾಸದಲ್ಲಿ ಸಭೆ ಸೇರಿದ ಜಿ-23 ನಾಯಕರು; ಶಶಿ ತರೂರ್ ಭಾಗಿ

ಇದನ್ನೂ ಓದಿ: ಸೋನಿಯಾ ಗಾಂಧಿಯನ್ನು ಯಾರೂ ದುರ್ಬಲಗೊಳಿಸಲು ಸಾಧ್ಯವಿಲ್ಲ; ಕಪಿಲ್ ಸಿಬಲ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

Published On - 11:41 am, Thu, 17 March 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್