ಥರ್ಮಲ್ ಸ್ಕ್ರೀನಿಂಗ್ ಇಲ್ಲ, ಮಾಸ್ಕ್ ಇಲ್ಲ; ಹರಿದ್ವಾರದ ಕುಂಭ ಮೇಳದಲ್ಲಿ ಭಾಗವಹಿಸಿದ 102 ಮಂದಿಗೆ ಕೊವಿಡ್

Kumbh Mela 2021: ಹರಿದ್ವಾರದಿಂದ ಹರ್ ಕೀ ಪೌರಿ ಮತ್ತು ಘಾಟ್ ಪ್ರದೇಶಗಳಲ್ಲಿ ಸುಮಾರು 10 ಕಿಮಿ ಸಂಚರಿಸಿದರೂ ಅಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಇರಲಿಲ್ಲ. ಮಾಸ್ಕ್ ಧರಿಸದೇ ಇದ್ದವರನ್ನು ಪತ್ತೆ ಹಚ್ಚಲು ಕೃತಕ ಬುದ್ಧಿಮತ್ತೆ (AI) ಕ್ಯಾಮೆರಾಗಳನ್ನು ಇರಿಸಿದ್ದರೂ, ಮಾಸ್ಕ್ ಧರಿಸದವರ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿದ್ದದ್ದು ಕಂಡು ಬರಲಿಲ್ಲ

ಥರ್ಮಲ್ ಸ್ಕ್ರೀನಿಂಗ್ ಇಲ್ಲ, ಮಾಸ್ಕ್ ಇಲ್ಲ; ಹರಿದ್ವಾರದ ಕುಂಭ ಮೇಳದಲ್ಲಿ ಭಾಗವಹಿಸಿದ 102 ಮಂದಿಗೆ ಕೊವಿಡ್
ಕುಂಭ ಮೇಳದಲ್ಲಿ ಸಾಧುಗಳು
Follow us
ರಶ್ಮಿ ಕಲ್ಲಕಟ್ಟ
|

Updated on:Apr 13, 2021 | 12:24 PM

ಹರಿದ್ವಾರ: ದೇಶದಲ್ಲಿ ಕೊವಿಡ್ ಪ್ರಕರಣಗಳು ಏರಿಕೆಯಾಗುತ್ತಲೇ ಇರುವ ಹೊತ್ತಿನಲ್ಲಿ ಉತ್ತರಾಖಂಡದ ಹರಿದ್ವಾರದಲ್ಲಿ ಕುಂಭ ಮೇಳ ನಡೆದಿದ್ದು, ಸೋಮವಾರ ಇಲ್ಲಿ ಭಾಗವಹಿಸಿದ 102 ಮಂದಿಗೆ ಕೊವಿಡ್ ದೃಢಪಟ್ಟಿದೆ. ಕುಂಭ ಮೇಳದ ಪವಿತ್ರ ಸ್ನಾನಕ್ಕಾಗಿ  ಲಕ್ಷಗಟ್ಟಲೆ ಜನ ಹರಿದ್ವಾರಕ್ಕೆ ಆಗಮಿಸಿದ್ದು, ಸಾಮಾಜಿಕ ಅಂತರವಾಗಲೀ, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಇಲ್ಲಿರಲಿಲ್ಲ. ಕೆಲವೇ ಕೆಲವು ಮಂದಿ ಮಾತ್ರ ಮಾಸ್ಕ್ ಧರಿಸಿದ್ದರು. ಇಷ್ಟೊಂದು ಸಂಖ್ಯೆಯಲ್ಲಿ ಜನ ಸೇರಿರುವಾಗ ಸಾಮಾಜಿಕ ಅಂತರ ಕಾಪಾಡುವಂತೆ ಹೇಳುವುದು ಕಷ್ಟ ಎಂದು ಅಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸರು ಹೇಳಿದ್ದಾರೆ.

ಸೋಮವಾರ ಸಂಜೆ ಗಂಗಾ ನದಿಯಲ್ಲಿ ಎರಡನೇ ಶಾಹೀ ಸ್ನಾನ (ಪವಿತ್ರ ಸ್ನಾನ) ಮಾಡಲು ಸುಮಾರು 28 ಲಕ್ಷಕ್ಕಿಂತಲೂ ಹೆಚ್ಚು ಭಕ್ತರು ಹರಿದ್ವಾರದಲ್ಲಿ ಸೇರಿದ್ದರು. ಇಲ್ಲಿನ ವೈದ್ಯಕೀಯ ಇಲಾಖೆ ಅಧಿಕಾರಿಗಳ ಪ್ರಕಾರ ಭಾನುವಾರ ರಾತ್ರಿ 11.30 ರಿಂದ ಸೋಮವಾರ ಸಂಜೆ 5 ಗಂಟೆವರೆಗಿನ ಅವಧಿಯಲ್ಲಿ 18,169ಕ್ಕಿಂತ ಹೆಚ್ಚು ಭಕ್ತರನ್ನು ಕೊರೊನಾ ಪರೀಕ್ಷೆಗೊಳಪಡಿಸಿದ್ದು ಈ ಪೈಕಿ 102 ಮಂದಿಗೆ ಕೊವಿಡ್ ದೃಢಪಟ್ಟಿದೆ.

ಹರಿದ್ವಾರದಿಂದ ಹರ್ ಕೀ ಪೌರಿ ಮತ್ತು ಘಾಟ್ ಪ್ರದೇಶಗಳಲ್ಲಿ ಸುಮಾರು 10 ಕಿಮಿ ಸಂಚರಿಸಿದರೂ ಅಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಇರಲಿಲ್ಲ. ಮಾಸ್ಕ್ ಧರಿಸದೇ ಇದ್ದವರನ್ನು ಪತ್ತೆ ಹಚ್ಚಲು ಕೃತಕ ಬುದ್ಧಿಮತ್ತೆ (AI) ಕ್ಯಾಮೆರಾಗಳನ್ನು ಇರಿಸಿದ್ದರೂ, ಮಾಸ್ಕ್ ಧರಿಸದವರ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿದ್ದದ್ದು ಕಂಡು ಬರಲಿಲ್ಲ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಇಲ್ಲಿಗೆ ಬರುವವರು ಆರ್​ಟಿ- ಪಿಸಿಆರ್ ನೆಗೆಟಿವ್ ಪರೀಕ್ಷೆ ವರದಿಯೊಂದಿಗೆ ಬರಬೇಕು ಎಂದು ನಿರ್ದೇಶನ ನೀಡಲಾಗಿತ್ತು. ಸುಮಾರು 50ಕ್ಕಿಂತಲೂ ಹೆಚ್ಚು ಮಂದಿ ಭಕ್ತರಲ್ಲಿ ನೆಗೆಟಿವ್ ಸರ್ಟಿಫಿಕೇಟ್ ಕೇಳಲಾಗಿತ್ತು. ಈ ಪೈಕಿ 15 ಮಂದಿಯಲ್ಲಿ ಪರೀಕ್ಷಾ ವರದಿ ಇರಲಿಲ್ಲ. ಆದರೂ ಅವರನ್ನು ಒಳಗೆ ಬಿಡಲಾಗಿದೆ ಎಂದು ರಿಯಾಲಿಟಿ ಚೆಕ್ ಮಾಡಿದ ಇಂಡಿಯನ್ ಎಕ್ಸ್​ಪ್ರೆಸ್ ಹೇಳಿದೆ.

ಉತ್ತರ ಪ್ರದೇಶದ ಗಡಿ ಭಾಗದ ನರ್ಸನ್ ಚೆಕ್​ಪೋಸ್ಟ್ ತಲುಪಿದಾಗ ಆರ್​ಟಿ-ಪಿಸಿಆರ್ ಪರೀಕ್ಷೆ ವರದಿಯನ್ನು ನಮ್ಮಲ್ಲಿ ಕೇಳಿದ್ದರು. ಆದರೆ ಮೇಳಕ್ಕೆ ಬಂದಾಗ ಯಾರೂ ಕೇಳಲಿಲ್ಲ. ಥರ್ಮಲ್ ಸ್ಕ್ರೀನಿಂಗ್ ಕೂಡಾ ಮಾಡಿಲ್ಲ ಎಂದು ಮೇಳಕ್ಕೆ ಆಗಮಿಸಿದ ಮಧ್ಯಪ್ರದೇಶದ ಭಿಂಡ್ ಮೂಲದ ಸರ್ಕಾರಿ ಶಿಕ್ಷಕ ರಾಜ್ ಪ್ರತಾಪ್ ಸಿಂಗ್ ಹೇಳಿದ್ದಾರೆ.

ನಾನು ಆರ್​ಟಿ-ಪಿಸಿಆರ್ ವರದಿ ಇಲ್ಲದೆಯೇ ಸೋಮವಾರ ಜಮ್ಮುವಿನಿಂದ ಇಲ್ಲಿ ತಲುಪಿದೆ. ಹರಿದ್ವಾರಕ್ಕೆ ಆಗಮಿಸುವ ಭಕ್ತರು ಮೂರು ಕಿಮಿ ದೂರದಲ್ಲಿರುವ ಜ್ವಾಲಾಪುರ್ ರೈಲ್ವೆ ನಿಲ್ದಾಣದಲ್ಲಿ ಬಂದಿಳಿಯುವಂತೆ ಹೇಳಲಾಗುತ್ತು. ಅಲ್ಲಿ ಸಾವಿರಾರು ಪ್ರಯಾಣಿಕರು ಬಂದಿಳಿಯುತ್ತಿದ್ದರೂ ಆರ್​ಟಿಪಿಸಿಆರ್ ವರದಿ ಕೇಳಲಿಲ್ಲ. ಆಮೇಲೆ ನಾವು ಗೌ ಘಾಟ್ ನಲ್ಲಿ ಗಂಗಾ ಸ್ನಾನ ಮಾಡಿದೆವು. ಅಲ್ಲಿ ಎಲ್ಲಿಯೂ ಥರ್ಮಲ್ ಸ್ಕ್ರೀನಿಂಗ್ ಇರಲಿಲ್ಲ ಎಂದು ಪ್ರಮೋದ್ ಶರ್ಮಾ ಎಂಬ ಉದ್ಯಮಿ ಹೇಳಿದ್ದಾರೆ.

ರಾಜ್ಯದ ಗಡಿಭಾಗದಲ್ಲಿ, ರೈಲ್ವೆ ನಿಲ್ದಾಣಗಳಲ್ಲಿ ಮತ್ತು ಘಾಟ್‌ ಪ್ರದೇಶಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಮತ್ತು ಆ್ಯಂಟಿಜೆನ್ ಪರೀಕ್ಷೆ ಮಾಡಲಾಗಿತ್ತು. ಇವತ್ತು ಬೆಳಗ್ಗೆ ಅಖಾರಗಳಿಗಾಗಿ ಘಾಟ್ ಮೀಸಲಿರಿಸಲಾಗಿದೆ. ಹಾಗಾಗಿಯೇ ಇಲ್ಲಿ ಸ್ಕ್ರೀನಿಂಗ್ ಮಾಡಿಲ್ಲ. ಅಖಾರಗಳ ಸ್ನಾನದ ನಂತರ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಮೇಳದ ಕೊವಿಡ್ ಉಸ್ತುವಾರಿ ಡಾ.ಅವಿನಾಶ್ ಖನ್ನಾ ಹೇಳಿದ್ದಾರೆ.

ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಜನರು ಗುಂಪು ಸೇರುವುದನ್ನು ತಡೆಯಲು ಮಾಸ್ಕ್ ಧರಿಸದೇ ಇದ್ದವರಿಗೆ ದಂಡ ವಿಧಿಸುವುದು, ಥರ್ಮಲ್ ಸ್ಕ್ರೀನಿಂಗ್ ಮಾಡುವುದನ್ನು ನಿಲ್ಲಿಸಲಾಗಿದೆ ಎಂದು ಕುಂಭ ಮೇಳದ ಕರ್ತವ್ಯದಲ್ಲಿರುವ ಐಜಿ ಸಂಜಯ್ ಗುಂಜ್ಯಾಲ್ ಹೇಳಿದ್ದಾರೆ. ನಾವು ಇವತ್ತು ಜನರು ಗುಂಪು ಸೇರುವುದನ್ನು ನಿಯಂತ್ರಿಸುತ್ತಿದ್ದೇವೆ. ಹಾಗಾಗಿಯೇ ಘಾಟ್ ಬಳಿ ಥರ್ಮಲ್ ಸ್ಕ್ರೀನಿಂಗ್ ಮತ್ತು ಆರ್​ಟಿ- ಪಿಸಿಆರ್ ವರದಿ ಪರಿಶೀಲಿಸುವುದನ್ನು ನಿಲ್ಲಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Kumbh Mela: ಕೊವಿಡ್ 2ನೇ ಅಲೆ ನಡುವೆಯೇ ಹರಿದ್ವಾರದಲ್ಲಿ ಕುಂಭ ಮೇಳಕ್ಕೆ ಜನಸಾಗರ ; ಜನರ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

Kumbh Mela 2021: ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭ ಮೇಳದ ದೃಶ್ಯಗಳು

Published On - 12:22 pm, Tue, 13 April 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್