AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಅನುಮತಿಯಿಲ್ಲದೆ ಯಾರೂ ಬಂದ್​ ಮಾಡುವಂತಿಲ್ಲ; ಪಿಎಫ್​ಐಗೆ ಕೇರಳ ಹೈಕೋರ್ಟ್ ತರಾಟೆ

ಯಾರೂ ಅನುಮತಿಯಿಲ್ಲದೆ ರಾಜ್ಯದಲ್ಲಿ ಬಂದ್‌ಗೆ ಕರೆ ನೀಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಪಿಎಫ್​ಐ ಸಂಘಟನೆಯನ್ನು ತರಾಟೆಗೆ ತೆಗೆದುಕೊಂಡಿದೆ.

Breaking News: ಅನುಮತಿಯಿಲ್ಲದೆ ಯಾರೂ ಬಂದ್​ ಮಾಡುವಂತಿಲ್ಲ; ಪಿಎಫ್​ಐಗೆ ಕೇರಳ ಹೈಕೋರ್ಟ್ ತರಾಟೆ
ಪಿಎಫ್​ಐ ಸಂಘಟನೆಯ ಪ್ರತಿಭಟನೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 23, 2022 | 12:15 PM

Share

ತಿರುವನಂತಪುರಂ: ಪಿಎಫ್​ಐ (Popular Front of India) ಕಚೇರಿಗಳ ಮೇಲೆ ಎನ್​ಐಎ (NIA) ದಾಳಿಯನ್ನು ಖಂಡಿಸಿ ದೇಶದ ನಾನಾ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ಕೇರಳದಲ್ಲಿ ಬಂದ್​ಗೆ (Kerala Bandh) ಕೂಡ ಕರೆ ನೀಡಲಾಗಿದೆ. ಬಂದ್​ಗೆ ಕರೆ ನೀಡಿರುವ ಪಿಎಫ್​ಐ (PFI) ವರ್ತನೆಯ ಬಗ್ಗೆ ಕೇರಳ ಹೈಕೋರ್ಟ್ ಇಂದು (ಶುಕ್ರವಾರ) ಸುಯೊ ಮೋಟೋ ದಾಖಲಿಸಿಕೊಂಡಿದೆ. 12 ಗಂಟೆಗಳ ಪ್ರತಿಭಟನೆಯ ಮಧ್ಯೆ ಬಂದ್​ಗೆ ಕರೆ ನೀಡಲಾಗಿದೆ. ಯಾರೂ ಅನುಮತಿಯಿಲ್ಲದೆ ರಾಜ್ಯದಲ್ಲಿ ಬಂದ್‌ಗೆ ಕರೆ ನೀಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಪಿಎಫ್​ಐ ಸಂಘಟನೆಯನ್ನು ತರಾಟೆಗೆ ತೆಗೆದುಕೊಂಡಿದೆ.

ಪಿಎಫ್​​ಐ ಕಚೇರಿ ಮೇಲೆ ಎನ್​ಐಎ ದಾಳಿ ಖಂಡಿಸಿ ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಕೇರಳ ಪೊಲೀಸರಿಗೆ ಹೈಕೋರ್ಟ್​​ ಸೂಚನೆ ನೀಡಿದೆ. ಅಲ್ಲದೆ, ಅಂಥವರ ವಿರುದ್ಧ ಸ್ವಯಂಪ್ರೇರಿತ ಕೇಸ್​ ದಾಖಲಿಸುವಂತೆ ಹೈಕೋರ್ಟ್​​ ಸೂಚನೆ ನೀಡಿದೆ. ಕೇರಳ ಬಂದ್​ಗೆ ಪಾಪ್ಯುಲರ್​ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಿಎಫ್​ಐ ನಾಯಕರ ವಿರುದ್ಧ ಕ್ರಮಕ್ಕೆ ಕೋರ್ಟ್​ ಸೂಚನೆ ನೀಡಿದೆ.

ಕೇರಳ ರಾಜ್ಯ ಪೊಲೀಸರು “ಸರ್ಕಾರ ಮತ್ತು ಮುಷ್ಕರಕ್ಕಾಗಿ ಕರೆಯನ್ನು ಬೆಂಬಲಿಸದ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಯಾವುದೇ ಹಾನಿ ಅಥವಾ ವಿನಾಶವಾಗದಂತೆ ತಡೆಗಟ್ಟಲು ಕಠಿಣ ಕ್ರಮಗಳನ್ನು ಜಾರಿಗೆ ತರಬೇಕು” ಎಂದು ಹೈಕೋರ್ಟ್ ಹೇಳಿದೆ. ಇಂದು ಬಂದ್ ಪ್ರಾರಂಭವಾಗುತ್ತಿದ್ದಂತೆ ಕೇರಳ ರಾಜ್ಯ ನಡೆಸುವ ಬಸ್ಸುಗಳ ಮೇಲೆ ಕಲ್ಲು ತೂರಾಟ ಮತ್ತು ದಾಳಿಯ ಘಟನೆಗಳು ವರದಿಯಾಗಿವೆ.  15 ರಾಜ್ಯಗಳು ಮತ್ತು 102 ಸ್ಥಳಗಳಲ್ಲಿ ಗುರುವಾರ ದಾಳಿ ನಡೆಸಲಾಯಿತು.

ಇದನ್ನೂ ಓದಿ: NIA Raids PFI SDPI: ಮಂಗಳೂರಿನಲ್ಲಿ NIA Go Back ಪ್ರತಿಭಟನೆ, 60 ಪಿಎಫ್​ಐ ಕಾರ್ಯಕರ್ತರ ಬಂಧನ; ಬೆಂಗಳೂರು, ಚೆನ್ನೈನಲ್ಲಿಯೂ ದಾಳಿ 

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಎಸ್​ಡಿಪಿಐ ಸಂಘಟನೆಗಳ ಪದಾಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಕಲೆ ಹಾಕಿದ್ದಾರೆ. ಎನ್​ಐಎ, ಜಾರಿ ನಿರ್ದೇಶನಾಲಯ ಮತ್ತು ಗುಪ್ತದಳದಿಂದ ಸಾಕಷ್ಟು ಮಾಹಿತಿ ಕಲೆಹಾಕಿದ ನಂತರವೇ ಪಿಎಫ್​ಐ ಮೇಲೆ ಕೇಂದ್ರ ಸರ್ಕಾರದ ಏಜೆನ್ಸಿಗಳು ದಾಳಿ ನಡೆಸಿದ್ದವು. ವಿವಿಧ ರಾಜ್ಯಗಳ ಪೊಲೀಸರ ನೆರವನ್ನೂ ದಾಳಿಯ ವೇಳೆ ಪಡೆಯಲಾಯಿತು.

ಉದಯ್​ಪುರ ಮತ್ತು ಅಮರಾವತಿ ನಗರಗಳಲ್ಲಿ ನಡೆದ ಶಿರಚ್ಛೇದ ಪ್ರಕರಣಗಳ ಅಪರಾಧಿಗಳಿಗೆ ಪಿಎಫ್​ಐ ನಂಟು ಇರುವುದು ಬೆಳಕಿಗೆ ಬಂದ ನಂತರ ಕೇಂದ್ರ ಸರ್ಕಾರವು ಪಿಎಫ್​ಐ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ದೇಶಾದ್ಯಂತ ನಡೆದ ದಾಳಿಯಲ್ಲಿ ನೂರಾರು ಮಂದಿ ಪಿಎಫ್​ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಕೇರಳ, ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಅಸ್ಸಾಂ, ದೆಹಲಿ, ಮಧ್ಯಪ್ರದೇಶ, ಪುದುಚೇರಿ, ತಮಿಳುನಾಡು, ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ಪಿಎಫ್​ಐ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Kerala: ಎನ್​​ಐಎ ದಾಳಿ ಖಂಡಿಸಿ ಕೇರಳದಲ್ಲಿ ಪಿಎಫ್​ಐ ಪ್ರತಿಭಟನೆ, ಬಸ್​​ ಮೇಲೆ ಕಲ್ಲು ತೂರಾಟ ನಡೆಸಿದ ಕಾರ್ಯಕರ್ತರು

ಭಯೋತ್ಪಾದಕ ಕೃತ್ಯಗಳಿಗೆ ಹಣ ಒದಗಿಸುವುದು, ತರಬೇತಿ ಶಿಬಿರಗಳನ್ನು ಆಯೋಜಿಸುವುದು ಸೇರಿದಂತೆ ಹಲವು ಆರೋಪಗಳು ಪಿಎಫ್​ಐ ವಿರುದ್ಧ ಕೇಳಿ ಬಂದಿವೆ. ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸಿದ ಆರೋಪದ ಮೇಲೆ 11 ರಾಜ್ಯಗಳಲ್ಲಿ ಪಿಎಫ್‌ಐನ 106 ಕಾರ್ಯಕರ್ತರನ್ನು ಬಂಧಿಸಲಾಗಿದೆ. ಅಧಿಕಾರಿಗಳ ಪ್ರಕಾರ ಇದು ದೇಶದ ಅತಿ ದೊಡ್ಡ ದಾಳಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

Published On - 11:37 am, Fri, 23 September 22

Follow Us
TV9 Web
TV9 Web

TV9 Kannada

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?