AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

70 ಸಾವಿರ ರೂ. ಕೊಟ್ಟು ಅಪ್ರಾಪ್ತೆಯನ್ನು ಖರೀದಿಸಿ ಮದುವೆಯಾಗಿದ್ದ 55 ವರ್ಷದ ವ್ಯಕ್ತಿಗೆ 10 ವರ್ಷಗಳ ಜೈಲು ಶಿಕ್ಷೆ

2021ರಲ್ಲಿ ಬಾದಲ್‌ಪುರದಿಂದ ಅಪಹರಣಕ್ಕೊಳಗಾಗಿದ್ದ ಅಪ್ರಾಪ್ತ ಬಾಲಕಿಯನ್ನು 70 ಸಾವಿರ ರೂ.ಗೆ ಖರೀದಿಸಿ ಹರಿಯಾಣದ ಸೋನಿಪತ್‌ನಲ್ಲಿ ವಿವಾಹವಾಗಿದ್ದ ಜಸ್ವೀರ್ ಸೇರಿದಂತೆ ಎಂಟು ಮಂದಿ ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಸಂತ್ರಸ್ತೆಯನ್ನು ಬಲವಂತವಾಗಿ ಮದುವೆಯಾಗುವ ಮೂಲಕ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ತಪ್ಪಿತಸ್ಥನಾಗಿದ್ದ ಸೋನಿಪತ್‌ನ ಮಹಾರಾ ಗ್ರಾಮದ ಜಸ್ವೀರ್ (55) ಎಂಬುವವರಿಗೆ ಹೆಚ್ಚುವರಿ ಸೆಷನ್ಸ್ ವಿಶೇಷ ನ್ಯಾಯಾಧೀಶ ಪೋಕ್ಸೊ ಕಾಯ್ದೆಯಡಿಯಲ್ಲಿ ಶಿಕ್ಷೆ ವಿಧಿಸಿದೆ.

70 ಸಾವಿರ ರೂ. ಕೊಟ್ಟು ಅಪ್ರಾಪ್ತೆಯನ್ನು ಖರೀದಿಸಿ  ಮದುವೆಯಾಗಿದ್ದ 55 ವರ್ಷದ ವ್ಯಕ್ತಿಗೆ 10 ವರ್ಷಗಳ ಜೈಲು ಶಿಕ್ಷೆ
ಜೈಲುImage Credit source: Prison Fellowship
ನಯನಾ ರಾಜೀವ್
|

Updated on: Dec 10, 2023 | 9:25 AM

Share

ನೋಯ್ಡಾ, ಡಿಸೆಂಬರ್ 10:   2021ರಲ್ಲಿ ಬಾದಲ್‌ಪುರದಿಂದ ಅಪಹರಣಕ್ಕೊಳಗಾಗಿದ್ದ ಅಪ್ರಾಪ್ತ ಬಾಲಕಿಯನ್ನು 70 ಸಾವಿರ ರೂ.ಗೆ ಖರೀದಿಸಿ ಹರಿಯಾಣದ ಸೋನಿಪತ್‌ನಲ್ಲಿ ವಿವಾಹವಾಗಿದ್ದ ಜಸ್ವೀರ್ ಸೇರಿದಂತೆ ಎಂಟು ಮಂದಿ ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಸಂತ್ರಸ್ತೆಯನ್ನು ಬಲವಂತವಾಗಿ ಮದುವೆಯಾಗುವ ಮೂಲಕ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ತಪ್ಪಿತಸ್ಥನಾಗಿದ್ದ ಸೋನಿಪತ್‌ನ ಮಹಾರಾ ಗ್ರಾಮದ ಜಸ್ವೀರ್ (55) ಎಂಬುವವರಿಗೆ ಹೆಚ್ಚುವರಿ ಸೆಷನ್ಸ್ ವಿಶೇಷ ನ್ಯಾಯಾಧೀಶ ಪೋಕ್ಸೊ ಕಾಯ್ದೆಯಡಿಯಲ್ಲಿ ಶಿಕ್ಷೆ ವಿಧಿಸಿದೆ.

ಸಂತ್ರಸ್ತೆಗೆ ಆಮಿಷವೊಡ್ಡುವ, ಅಪಹರಿಸಿ ಮಾರಾಟ ಮಾಡುವ ಸಂಚಿನಲ್ಲಿ ಭಾಗಿಯಾಗಿದ್ದ ಇತರ ಏಳು ಆರೋಪಿಗಳಿಗೆ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಎಲ್ಲ ತಪ್ಪಿತಸ್ಥರಿಗೆ ದಂಡ ವಿಧಿಸಲಾಗಿದೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಚವಾನ್ ಭಾಟಿ ಅವರು ಡಿಸೆಂಬರ್ 26, 2021 ರಂದು ಬಾದಲ್‌ಪುರ ಪ್ರದೇಶದ ಹಳ್ಳಿಯೊಂದರಲ್ಲಿ ವಾಸಿಸುತ್ತಿದ್ದ ಅಪ್ರಾಪ್ತ ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಳು. ಈ ಸಂದರ್ಭದಲ್ಲಿ ಪಕ್ಕದ ಮನೆಯಲ್ಲಿ ವಾಸವಿದ್ದ ಹಾಪುರ ನಿವಾಸಿ ನೌಶಾದ್‌ನ ಪತ್ನಿ ಗುಡಿಯಾ ಅಲಿಯಾಸ್ ನಜ್ರೀನ್ ಎಂಬಾಕೆ ಬಂದು ಮೊದಲು ಗಾಜಿಯಾಬಾದ್‌ಗೆ ಮತ್ತು ನಂತರ ಹರಿಯಾಣದ ಸೋನಿಪತ್‌ಗೆ ಆಕೆಯನ್ನು ಕರೆದೊಯ್ದಿದ್ದಾರೆ.

ಮತ್ತಷ್ಟು ಓದಿ: ರಾಂಚಿ: ಅಪ್ರಾಪ್ತ ಬಾಲಕಿ ಮೇಲೆ ವರ್ಷಗಳ ಕಾಲ ಅತ್ಯಾಚಾರವೆಸಗಿದ್ದ ಪೊಲೀಸ್​ ಅಧಿಕಾರಿಯ ಬಂಧನ

ಈ ವಿಷಯವನ್ನು ಬಹಿರಂಗಪಡಿಸಿದ ಪೊಲೀಸರು, ನಜ್ರೀನ್ ತನ್ನ ಗ್ಯಾಂಗ್‌ನೊಂದಿಗೆ ಹೆಣ್ಣುಮಕ್ಕಳ ಮಾರಾಟದ ಅಕ್ರಮ ದಂಧೆ ನಡೆಸುತ್ತಿದ್ದಾಳೆ ಎಂದು ಮಾಹಿತಿ ನೀಡಿದ್ದರು. ಇತರ ಆರೋಪಿಗಳ ಸಹಾಯದಿಂದ ಸಂತ್ರಸ್ತೆಯನ್ನು ಮಹಿಳೆ ಸೋನಿಪತ್‌ಗೆ ಕರೆದೊಯ್ದು ಜಸ್ವೀರ್‌ಗೆ 70 ಸಾವಿರ ರೂ.ಗೆ ಮಾರಾಟ ಮಾಡಿದ್ದಾಳೆ. ಈ ವೇಳೆ ಪೊಲೀಸರು ಸಂತ್ರಸ್ತೆಯನ್ನು ಬಿಡುಗಡೆಗೊಳಿಸಿ ಘಟನೆಯನ್ನು ಬಹಿರಂಗಪಡಿಸಿದ್ದಾರೆ.

ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ಹಾಗೂ ಹೇಳಿಕೆಯಿಂದ ಇಡೀ ಪ್ರಕರಣ ಬಯಲಾಗಿದೆ. ಈ ಪ್ರಕರಣದಲ್ಲಿ ಸಂಭಾಲ್‌ನ ಗುನ್ನೌರ್‌ ನಿವಾಸಿ ಪೂಜಾ, ಆಕೆಯ ಪತಿ ರೂಪ್‌ ಕಿಶೋರ್‌, ಗೊಹಾನಾ, ಸೋನಿಪತ್‌ನ ಕಿರಣ್‌, ಮತನ್‌ ಗ್ರಾಮದ ಸುನೀಲ್‌, ಹರಿಯಾಣದ ರೋಹ್‌ಟಕ್‌ನ ಲಖನ್‌ ಮಜ್ರಾ, ಧರಂರಾಜ್‌, ಕಾಬೂಲ್‌ನ ಖಿದ್ವಾಲಿ, ರೋಹ್ಟಕ್‌ನ ಭೂಪೇಂದ್ರ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಎಂಟು ಸಾಕ್ಷಿಗಳು ನ್ಯಾಯಾಲಯದಲ್ಲಿ ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದಾರೆ.

ಪ್ರಕರಣದ ವಿಚಾರಣೆ ನಡೆಯುತ್ತಿರುವಾಗಲೇ ಆರೋಪಿ ಭೂಪೇಂದ್ರ ಮೃತಪಟ್ಟಿದ್ದಾನೆ. ಉಳಿದ ಎಂಟು ಅಪರಾಧಿಗಳಿಗೆ ನ್ಯಾಯಾಲಯವು ಅವರ ಅಪರಾಧದ ನಂತರ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಜಸ್ವಿರ್‌ಗೆ 35 ಸಾವಿರ ದಂಡ ಹಾಗೂ ಇತರ ಅಪರಾಧಿಗಳಿಗೆ ತಲಾ 5 ಸಾವಿರ ದಂಡ ವಿಧಿಸಲಾಗಿದೆ. ದಂಡವನ್ನು ಠೇವಣಿ ಮಾಡಲು ವಿಫಲವಾದರೆ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಎಚ್ಚರಿಕೆ ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​