Noida: ರ‍್ಯಾಂಪ್​ವಾಕ್​ ಮಾಡುವಾಗ ಕಬ್ಬಿಣದ ಪಿಲ್ಲರ್​ ಬಿದ್ದು ಮಾಡೆಲ್ ಸಾವು

ನೋಯ್ಡಾದಲ್ಲಿ ನಡೆಯುತ್ತಿದ್ದ ಫ್ಯಾಷನ್​ ರನ್​ವೇನಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಮಾಡೆಲ್ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Noida: ರ‍್ಯಾಂಪ್​ವಾಕ್​ ಮಾಡುವಾಗ ಕಬ್ಬಿಣದ ಪಿಲ್ಲರ್​ ಬಿದ್ದು ಮಾಡೆಲ್ ಸಾವು
ಪೊಲೀಸರುImage Credit source: NDTV
Follow us
ನಯನಾ ರಾಜೀವ್
|

Updated on:Jun 12, 2023 | 7:40 AM

ನೋಯ್ಡಾದಲ್ಲಿ ನಡೆಯುತ್ತಿದ್ದ ಫ್ಯಾಷನ್​ ರನ್​ವೇನಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಮಾಡೆಲ್ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಹಿಳೆಯನ್ನು ವಂಶಿಕಾ ಚೋಪ್ರಾ ಎಂದು ಗುರುತಿಸಲಾಗಿದೆ. ನೋಯ್ಡಾದ ಸೆಕ್ಟರ್ 16 ಎ ನಲ್ಲಿರುವ ಫಿಲ್ಮ್ ಸಿಟಿಯ ಲಕ್ಷ್ಮಿ ಸುಡಿಯೋದಲ್ಲಿ ಅಪಘಾತ ಸಂಭವಿಸಿದೆ. ಬೆಳಕಿನ ಉದ್ದೇಶಕ್ಕಾಗಿ ಕಬ್ಬಿಣದ ಕಂಬವನ್ನು ನಿರ್ಮಿಸಲಾಗಿದೆ ಆದರೆ ಅದು ವೇದಿಕೆಯ ಮೇಲೆ ಬಿದ್ದು ಮಾಡೆಲ್ ತಕ್ಷಣವೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಬಾಬಿ ರಾಜ್ ಎಂಬ ವ್ಯಕ್ತಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫ್ಯಾಷನ್ ಶೋ ಆಯೋಜಕರು ಮತ್ತು ಇತರ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ನಟ, ಮಾಡೆಲ್ ಆದಿತ್ಯ ಸಿಂಗ್ ಅನುಮಾನಾಸ್ಪದ ಸಾವು

ವಂಶಿಕಾ ಅವರ ಸಾವಿನ ಬಗ್ಗೆ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಂಬಂಧ ಪೊಲೀಸರು ಫ್ಯಾಷನ್ ಶೋ ಆಯೋಜಕ ಮತ್ತು ಲೈಟಿಂಗ್ ಕೆಲಸದಲ್ಲಿ ತೊಡಗಿದ್ದ 4 ಜನರನ್ನು ಬಂಧಿಸಿದ್ದಾರೆ ಎಂದು ನೋಯ್ಡಾದ ಹೆಚ್ಚುವರಿ ಡಿಸಿಪಿ ಮೋಹನ್ ಅವಸ್ತಿ ತಿಳಿಸಿದ್ದಾರೆ. ಫ್ಯಾಷನ್ ಶೋಗೆ ಅನುಮತಿ ನೀಡಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:40 am, Mon, 12 June 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್