Noida: ರ‍್ಯಾಂಪ್​ವಾಕ್​ ಮಾಡುವಾಗ ಕಬ್ಬಿಣದ ಪಿಲ್ಲರ್​ ಬಿದ್ದು ಮಾಡೆಲ್ ಸಾವು

|

Updated on: Jun 12, 2023 | 7:40 AM

ನೋಯ್ಡಾದಲ್ಲಿ ನಡೆಯುತ್ತಿದ್ದ ಫ್ಯಾಷನ್​ ರನ್​ವೇನಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಮಾಡೆಲ್ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Noida: ರ‍್ಯಾಂಪ್​ವಾಕ್​ ಮಾಡುವಾಗ ಕಬ್ಬಿಣದ ಪಿಲ್ಲರ್​ ಬಿದ್ದು ಮಾಡೆಲ್ ಸಾವು
ಪೊಲೀಸರು
Image Credit source: NDTV
Follow us on

ನೋಯ್ಡಾದಲ್ಲಿ ನಡೆಯುತ್ತಿದ್ದ ಫ್ಯಾಷನ್​ ರನ್​ವೇನಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಮಾಡೆಲ್ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಹಿಳೆಯನ್ನು ವಂಶಿಕಾ ಚೋಪ್ರಾ ಎಂದು ಗುರುತಿಸಲಾಗಿದೆ. ನೋಯ್ಡಾದ ಸೆಕ್ಟರ್ 16 ಎ ನಲ್ಲಿರುವ ಫಿಲ್ಮ್ ಸಿಟಿಯ ಲಕ್ಷ್ಮಿ ಸುಡಿಯೋದಲ್ಲಿ ಅಪಘಾತ ಸಂಭವಿಸಿದೆ.
ಬೆಳಕಿನ ಉದ್ದೇಶಕ್ಕಾಗಿ ಕಬ್ಬಿಣದ ಕಂಬವನ್ನು ನಿರ್ಮಿಸಲಾಗಿದೆ ಆದರೆ ಅದು ವೇದಿಕೆಯ ಮೇಲೆ ಬಿದ್ದು ಮಾಡೆಲ್ ತಕ್ಷಣವೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಬಾಬಿ ರಾಜ್ ಎಂಬ ವ್ಯಕ್ತಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫ್ಯಾಷನ್ ಶೋ ಆಯೋಜಕರು ಮತ್ತು ಇತರ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ನಟ, ಮಾಡೆಲ್ ಆದಿತ್ಯ ಸಿಂಗ್ ಅನುಮಾನಾಸ್ಪದ ಸಾವು

ವಂಶಿಕಾ ಅವರ ಸಾವಿನ ಬಗ್ಗೆ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಂಬಂಧ ಪೊಲೀಸರು ಫ್ಯಾಷನ್ ಶೋ ಆಯೋಜಕ ಮತ್ತು ಲೈಟಿಂಗ್ ಕೆಲಸದಲ್ಲಿ ತೊಡಗಿದ್ದ 4 ಜನರನ್ನು ಬಂಧಿಸಿದ್ದಾರೆ ಎಂದು ನೋಯ್ಡಾದ ಹೆಚ್ಚುವರಿ ಡಿಸಿಪಿ ಮೋಹನ್ ಅವಸ್ತಿ ತಿಳಿಸಿದ್ದಾರೆ. ಫ್ಯಾಷನ್ ಶೋಗೆ ಅನುಮತಿ ನೀಡಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:40 am, Mon, 12 June 23