AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಯ್ಡಾ: ಕಾರಿನಲ್ಲಿ ₹2 ಕೋಟಿಗಿಂತಲೂ ನಗದು ಪತ್ತೆ, 8 ಮಂದಿ ಬಂಧನ

ಪೊಲೀಸರು ವಶಪಡಿಸಿಕೊಂಡ ನಗದು ಮತ್ತು ತಲೆಮರೆಸಿಕೊಂಡ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ತನಿಖೆ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೋಯ್ಡಾ: ಕಾರಿನಲ್ಲಿ ₹2 ಕೋಟಿಗಿಂತಲೂ ನಗದು ಪತ್ತೆ, 8 ಮಂದಿ ಬಂಧನ
ಕಾರಿನಲ್ಲಿ ನಗದು ಪತ್ತೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 11, 2022 | 2:32 PM

Share

ನೋಯ್ಡಾ: ಸೆಕ್ಟರ್ 58 ಪ್ರದೇಶದಲ್ಲಿ ಗುರುವಾರ ಸಂಜೆ ಕಾರಿನಲ್ಲಿ ₹ 2 ಕೋಟಿಗೂ ಹೆಚ್ಚು ನಗದು ವಶಪಡಿಸಿಕೊಂಡಿದ್ದು, ಎಂಟು ಜನರನ್ನು ನೋಯ್ಡಾ ಪೊಲೀಸರು (Noida Police) ಬಂಧಿಸಿದ್ದಾರೆ. ನಗದು ಹವಾಲಾ ದಂಧೆಗೆ (Hawala Network)ಸಂಬಂಧಿಸಿದೆ ಎಂದು ಶಂಕಿಸಲಾಗಿದ್ದು, ವಶಪಡಿಸಿಕೊಂಡ ನಗದನ್ನು ಇನ್ನೂ ಎಣಿಕೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಬಂಧಿತರನ್ನು ಅಹಮದಾಬಾದ್‌ನ ಜಯಂತಿ ಭಾಯ್, ದೆಹಲಿಯ ಸಂದೀಪ್ ಶರ್ಮಾ, ದೆಹಲಿಯ ವಿನಯ್ ಕುಮಾರ್, ವಾಯುವ್ಯ ಬಂಗಾಳದ ಅಭಿಜೀತ್ ಹಜ್ರಾ, ನೋಯ್ಡಾ ಸೆಕ್ಟರ್ -56 ರ ರೋಹಿತ್ ಜೈನ್, ದೆಹಲಿಯ ವಿಪುಲ್, ಮುಂಬೈನ ಮಿನೇಶ್ ಶಾ ಮತ್ತು ಇಂದೋರ್‌ನ ಅನುಜ್ ಎಂದು ಗುರುತಿಸಲಾಗಿದೆ.ಪೊಲೀಸರು ವಶಪಡಿಸಿಕೊಂಡ ಕೂಡಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ‘ಹವಾಲಾ ಜಾಲಕ್ಕಾಗಿ ₹ 2 ಕೋಟಿ ಹಣ ತೆಗೆದಿರಬಹುದೆಂದು ನಿರೀಕ್ಷಿಸಲಾಗಿದ್ದು, ಬಂಧಿತರೆಲ್ಲರ ವಿಚಾರಣೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಕ್ಟರ್ 55ರಲ್ಲಿ ಹವಾಲಾ ದಂಧೆ ನಡೆದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. “ಹವಾಲಾ ದಂಧೆ ನಡೆಸುತ್ತಿರುವ ಕೆಲವರು ಸೆಕ್ಟರ್ -55 ರಲ್ಲಿ ಸಾಕಷ್ಟು ನಗದು ಹೊಂದಿರುವವರು ಡೀಲ್ ಮಾಡಲು ಬರುತ್ತಿದ್ದಾರೆ ಎಂದು ಪೊಲೀಸ್ ಠಾಣೆ ಸೆಕ್ಟರ್ 58 ಗೆ ಮಾಹಿತಿ ಸಿಕ್ಕಿತು. ನೋಯ್ಡಾದ ಸೆಕ್ಟರ್ 55 ರ ಪೊಲೀಸ್ ತಂಡವು ಮಾಹಿತಿಯ ಮೇರೆಗೆ ತ್ವರಿತ ಕ್ರಮ ಕೈಗೊಂಡು ಎಂಟು ಜನರನ್ನು ಬಂಧಿಸಿತು. ಎಂದು ಪೊಲೀಸರು ಹೇಳಿದರು. ವಿಚಾರಣೆಯ ನಂತರ ಆದಾಯ ತೆರಿಗೆ ಇಲಾಖೆಯಿಂದ ವಶ ಪಡಿಸಿಕೊಂಡಿರುವ ನಗದು ಎಣಿಕೆಯನ್ನು ಮಾಡಲಾಗುತ್ತದೆ.

ಪೊಲೀಸರು ವಶಪಡಿಸಿಕೊಂಡ ನಗದು ಮತ್ತು ತಲೆಮರೆಸಿಕೊಂಡ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ತನಿಖೆ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Follow Us
TV9 Web
TV9 Web

TV9 Kannada

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ