ನೋಯ್ಡಾ: ಪೊಲೀಸ್ ಠಾಣೆಯಲ್ಲೇ ನೇಣಿಗೆ ಶರಣಾದ ಅತ್ಯಾಚಾರ ಆರೋಪಿ
ಪೊಲೀಸ್ ಠಾಣೆಯಲ್ಲೇ ಅತ್ಯಾಚಾರ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.ಗೌತಮ್ ಬುದ್ಧ ನಗರ ಜಿಲ್ಲೆಯ ಬಿಸ್ರಖ್ ಪೊಲೀಸ್ ಠಾಣೆ ವ್ಯಾಪ್ತಿಯ ಚಿಪಿಯಾನಾ ಬುಜುರ್ಗ್ ಪೋಸ್ಟ್‌ನಲ್ಲಿ ಈ ಘಟನೆ ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಅತ್ಯಾಚಾರ ಆರೋಪಿಯೊಬ್ಬ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಅತ್ಯಾಚಾರ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌತಮ್ ಬುದ್ಧ ನಗರ ಜಿಲ್ಲೆಯ ಬಿಸ್ರಖ್ ಪೊಲೀಸ್ ಠಾಣೆ ವ್ಯಾಪ್ತಿಯ ಚಿಪಿಯಾನಾ ಬುಜುರ್ಗ್ ಪೋಸ್ಟ್‌ನಲ್ಲಿ ಈ ಘಟನೆ ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಠಾಣೆಯ ಪ್ರಭಾರಿ ಮತ್ತು ಸಹಾಯಕ ಪೊಲೀಸ್ ಆಯುಕ್ತರ ವಿರುದ್ಧವೂ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು. ವೈದ್ಯರ ಸಮಿತಿಯು ಮರಣೋತ್ತರ ಪರೀಕ್ಷೆಯನ್ನು ನಡೆಸಿತು ಮತ್ತು ಅದನ್ನು ವೀಡಿಯೊಗ್ರಾಫ್ ಮಾಡಲಾಗಿದೆ ಎಂದು ಸುನಿತಿ ಹೇಳಿದರು.
ಚಿಪಿಯಾನ ಗ್ರಾಮದ ಬಳಿಯಿರುವ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಈ ವ್ಯಕ್ತಿ ಮೇಲೆ ಅತ್ಯಾಚಾರ ಆರೋಪ ಮಾಡಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ. ಈ ಸಂಬಂಧ ಅವರು ಪೊಲೀಸ್ ಸೂಪರಿಂಟೆಂಡೆಂಟ್ (ಲಕ್ನೋ) ಗೆ ದೂರು ನೀಡಿದ್ದರು ಎಂದು ಸುನಿತಿ ಹೇಳಿದ್ದಾರೆ.
ಮತ್ತಷ್ಟು ಓದಿ:ತುಮಕೂರು: ಕುಡಿದ ಅಮಲಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಸ್ಥಳೀಯರಿಂದ ಬಾಲಕಿಯ ರಕ್ಷಣೆ
ತನಿಖಾ ತಂಡವು ಲಕ್ನೋದಿಂದ ನೋಯ್ಡಾಕ್ಕೆ ಬಂದಿದ್ದು, ಅದರ ತನಿಖೆಯ ಭಾಗವಾಗಿ, ಗುರುವಾರ ಬೆಳಗ್ಗೆ ಆರೋಪಿಯನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದಿತ್ತು ಎಂದು ಅಧಿಕಾರಿ ಹೇಳಿದರು.
ಈ ವೇಳೆ ವ್ಯಕ್ತಿ ಠಾಣೆಯ ಒಳಗೆ ಹೋಗಿ ಕೋಣೆಯೊಂದರ ಬಾಗಿಲು ಮುಚ್ಚಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಡಿಸಿಪಿ ತಿಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.
ಪೊಲೀಸರು ಥಳಿಸುತ್ತಾರೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿ ವಿರುದ್ಧ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ. ಮೃತರ ಕುಟುಂಬದಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಡಿಸಿಪಿ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:06 am, Fri, 17 May 24