ನೋಯ್ಡಾ: ಲಿವ್​-ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿ ಆತ್ಮಹತ್ಯೆ

ಇತ್ತೀಚೆಗಷ್ಟೇ ಹೆಂಡತಿಯ ಕಾಟದಿಂದ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು ಇದರ ಬೆನ್ನಲ್ಲೇ ಮತ್ತೊಂದು ಘಟನೆ ನೋಯ್ಡಾದಲ್ಲಿ ನಡೆದಿದೆ. ಲಿವ್​-ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಟೆಕ್ಕಿಗೆ ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದರು. ಇದೇ ವಿಚಾರವಾಗಿ ಪದೇ ಪದೇ ಗೆಳತಿ ಕೊಂಕು ಮಾತನಾಡುತ್ತಿದ್ದಳು, ಅದನ್ನು ಕೇಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Follow us
ನಯನಾ ರಾಜೀವ್
|

Updated on: Dec 15, 2024 | 9:50 AM

ಇತ್ತೀಚೆಗಷ್ಟೇ ಹೆಂಡತಿಯ ಕಾಟದಿಂದ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು ಇದರ ಬೆನ್ನಲ್ಲೇ ಮತ್ತೊಂದು ಘಟನೆ ನೋಯ್ಡಾದಲ್ಲಿ ನಡೆದಿದೆ. ಲಿವ್​-ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಟೆಕ್ಕಿಗೆ ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದರು. ಇದೇ ವಿಚಾರವಾಗಿ ಪದೇ ಪದೇ ಗೆಳತಿ ಕೊಂಕು ಮಾತನಾಡುತ್ತಿದ್ದಳು, ಅದನ್ನು ಕೇಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಯಾಂಕ್ ಚಂದೇಲ್ ಎಂದು ಗುರುತಿಸಲಾದ ಮೃತ ಇಂಜಿನಿಯರ್​ಗೆ ಕೆಲಸವಿಲ್ಲದ ಕಾರಣ ಮಾನಸಿಕ ಒತ್ತಡದಲ್ಲಿದ್ದರು, ಜತೆಗೆ ತನ್ನ ಸಂಗಾತಿಯ ಕುಹಕ ಮಾತುಗಳನ್ನು ಕೇಳಿ ಮತ್ತಷ್ಟು ಡಿಪ್ರೆಶನ್​ಗೆ ಹೋಗಿದ್ದರು. ಉತ್ತರ ಪ್ರದೇಶದ ಜಲಾಲಾಬಾದ್‌ನವರಾದ ಚಂದೇಲ್, ಬಂಡಾ ಮೂಲದ ಮಹಿಳೆಯೊಂದಿಗೆ ಸುಮಾರು ಏಳು ವರ್ಷಗಳಿಂದ ಸಂಬಂಧ ಹೊಂದಿದ್ದರು. ನೋಯ್ಡಾದ ಸೆಕ್ಟರ್ 73 ರಲ್ಲಿ ನಾಲ್ಕು ವರ್ಷಗಳಿಂದ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದರು.

ಡೆತ್​ನೋಟ್​ನಲ್ಲಿ ಏನೂ ಕೆಲಸವಿಲ್ಲ, ಇಡೀ ದಿನ ಮನೆಯಲ್ಲಿ ಕೂತು ತಿನ್ನೋದೊಂದೇ ಕೆಲಸ ಎನ್ನುವ ಮಾತು ತೀರಾ ಮನಸ್ಸು ಹಾಳುಮಾಡಿತ್ತು. ಈ ಎಲ್ಲಾ ಕಾರಣಗಳಿಂದಾಗಿ ತಾನು ಸಾಯುವ ನಿರ್ಧಾರ ಮಾಡಿದ್ದೇನೆ ಎಂದು ಬರೆದಿದ್ದರು. ಶುಕ್ರವಾರ ಸಂಜೆ ಕೆಲಸ ಮುಗಿಸಿ ಬಂದ ಬಳಿಕ ಆಕೆಗೆ ಮಯಾಂಕ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

ಮತ್ತಷ್ಟು ಓದಿ:  ಹೆಂಡತಿ ಕಾಟದಿಂದ ಬೆಂಗಳೂರಿನ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ; ಟ್ವಿಟ್ಟರ್​ನಲ್ಲಿ ಟ್ರೆಂಡ್ ಆಯ್ತು ಮೆನ್​ಟೂ ಹ್ಯಾಶ್​ಟ್ಯಾಗ್

ಪೊಲೀಸ್ ತಂಡ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಸುತ್ತಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ರಾಷ್ಟ್ರವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ ಈ ಘಟನೆ ನಡೆದಿದೆ.

ವಿಚ್ಛೇದನಕ್ಕೆ ಸಂಬಂಧಿಸಿ ಪತ್ನಿ ನಿಕಿತಾ ಸಿಂಘಾನಿಯಾ ತನಗೆ 3 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾಗಿ ಡೆತ್​ನೋಟ್​ನಲ್ಲಿ ಬರೆದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ