AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Greta Thunberg Toolkit | ಗ್ರೇಟಾ ಥನ್​ಬರ್ಗ್ ಟೂಲ್​ಕಿಟ್ ಪ್ರಕರಣ; ವಕೀಲೆ ನಿಖಿತಾ ಜಾಕೋಬ್​ಗೆ ಜಾಮೀನುರಹಿತ ವಾರೆಂಟ್ ಜಾರಿಗೊಳಿಸಿದ ಕೋರ್ಟ್

Greta Thunberg Toolkit | ಫೆಬ್ರವರಿ 11ರಂದು ದೆಹಲಿ ಪೊಲೀಸರ ತಂಡ ನಿಕಿತಾ ಜಾಕೋಬ್ ಮನೆಗೆ ತೆರಳಿ ಪರಿಶೀಲಿಸಿತ್ತು. ಅಂದು ತನಿಖೆಗೆ ಸಹಕರಿಸುವುದಾಗಿ ಹೇಳಿದ್ದ ವಕೀಲೆಯೂ ಆಗಿರುವ ನಿಕಿತಾ ಜಾಕೋಬ್ ನಂತರ ಭೂಗತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Greta Thunberg Toolkit | ಗ್ರೇಟಾ ಥನ್​ಬರ್ಗ್ ಟೂಲ್​ಕಿಟ್ ಪ್ರಕರಣ; ವಕೀಲೆ ನಿಖಿತಾ ಜಾಕೋಬ್​ಗೆ ಜಾಮೀನುರಹಿತ ವಾರೆಂಟ್ ಜಾರಿಗೊಳಿಸಿದ ಕೋರ್ಟ್
ನಿಕಿತಾ ಜೇಕಬ್
guruganesh bhat
| Edited By: |

Updated on: Feb 15, 2021 | 12:26 PM

Share

ದೆಹಲಿ: ಗ್ರೇಟಾ ಥನ್​ಬರ್ಗ್ ಟೂಲ್​ಕಿಟ್ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ನ್ಯಾಯಾಲಯ ವಕೀಲೆ- ಕಾರ್ಯಕರ್ತೆ ನಿಖಿತಾ ಜಾಕೋಬ್​ಗೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದ್ದಾರೆ. ಗ್ರೇಟಾ ಥನ್​ಬರ್ಗ್ ಟೂಲ್​ಕಿಟ್ ಪ್ರಕರಣ ಬೆಳಕಿಗೆ ಬಂದ ನಂತರ ನಿಖಿತಾ ಜಾಕೋಬ್ ಕಣ್ಮರೆಯಾಗಿದ್ದಾರೆ ಎಂದು ವಾದಿಸಿರುವ ದೆಹಲಿ ಪೊಲೀಸರ ಮನವಿ ಮೇರೆಗೆ ಈ ವಾರಂಟ್ ಜಾರಿಗೊಳಿಸಲಾಗಿದೆ.

ಈಗಾಗಲೇ ಫೆಬ್ರವರಿ 11ರಂದು ದೆಹಲಿ ಪೊಲೀಸರ ತಂಡ ನಿಖಿತಾ ಜಾಕೋಬ್ ಮನೆಗೆ ತೆರಳಿ ಪರಿಶೀಲಿಸಿತ್ತು. ಅಂದು ತನಿಖೆಗೆ ಸಹಕರಿಸುವುದಾಗಿ ಹೇಳಿದ್ದ ವಕೀಲೆಯೂ ಆಗಿರುವ ನಿಖಿತಾ ಜಾಕೋಬ್ ನಂತರ ಭೂಗತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟೂಲ್​ಕಿಟ್ ಪ್ರಕರಣದ ಬೆನ್ನು ಬಿದ್ದಿರುವ ಪೊಲೀಸರು ದೇಶದ್ರೋಹಿ ಚಟುವಟಿಕೆಗಳಲ್ಲಿ ನೇರವಾಗಿ ತೊಡಗಿಸಿಕೊಂಡ ಆರೋಪದ ಮೇಲೆ ಬೆಂಗಳೂರು ಮೂಲದ 21 ವರ್ಷದ ದಿಶಾ ರವಿಯನ್ನು ಬಂಧಿಸಿದ್ದರು.

ಜಾಗತಿಕವಾಗಿ ದೆಹಲಿ ಚಲೋ ಚಳುವಳಿಯನ್ನು ಆಯೋಜಿಸಲು ಯೋಜನೆ ರೂಪಿಸಿ, ದೇಶದಲ್ಲಿ ಸರ್ಕಾರಿ ವಿರೋಧಿ ಅಲೆ ಮೂಡಿಸುವ ಟೂಲ್​ಕಿಟ್ ಅರ್ಥಾತ್ ಫೈಲ್ ಒಂದನ್ನು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್​ಬರ್ಗ್ ಹಂಚಿಕೊಂಡಿದ್ದರು. ಈ ಟೂಲ್​ಕಿಟ್​ನ್ನು ಬೆಂಗಳೂರು ಮೂಲದ ದಿಶಾ ರವಿ ತಯಾರಿಸಿದ್ದಾರೆ ಎಂದು ಆರೋಪಿಸಿರುವ ದೆಹಲಿ ಪೊಲೀಸರು ಈಗಾಗಲೇ ದಿಶಾ ರವಿಯನ್ನು ಬಂಧಿಸಿ, 5 ದಿನಗಳ ತನಿಖೆ ನಡೆಸುತ್ತಿದ್ದಾರೆ. ಟೂಲ್​ಕಿಟ್ ಮೂಲಕ ದೇಶದಲ್ಲಿ ಅಶಾಂತಿ, ಗಲಭೆ ಸೃಷ್ಟಿಸುವ ಉದ್ದೇಶದೊಂದಿಗೆ ಖಲಿಸ್ತಾನ ಪರ ಒಲವು ಮೂಡಿಸುವ ಉದ್ದೇಶ ಹೊಂದಿದ್ದರು ಎಂಬುದು ದೆಹಲಿ ಪೊಲೀಸರ ವಾದವಾಗಿದೆ.

ಏನಿದು ಟೂಲ್​ ಕಿಟ್​ ಪ್ರಕರಣ? ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧಿಸಿ ಟೂಲ್​ಕಿಟ್​ ಒಂದನ್ನು ಗ್ರೇಟಾ ಟ್ವಿಟ್​ರ್​ನಲ್ಲಿ ಹಂಚಿಕೊಂಡಿದ್ದರು. ಟೂಲ್​​ಕಿಟ್​ ಎಂದರೆ, ಒಂದು ಪ್ರತಿಭಟನೆ ಅಥವಾ ಒಂದು ಕಾರ್ಯಕ್ರಮದ ಸಂಪೂರ್ಣ ರೂಪುರೇಷೆ ಹೇಗೆ ನಡೆಯಬೇಕು ಎನ್ನುವ ಮಾಹಿತಿ ಇದರಲ್ಲಿ ಇರುತ್ತದೆ. ಗ್ರೇಟಾ ಹಂಚಿಕೊಂಡಿದ್ದ ಟೂಲ್​ಕಿಟ್​ನಲ್ಲಿ , ಪ್ರತಿಭಟನೆಯಲ್ಲಿ ರೈತರು ಭಾಗವಹಿಸಬೇಕು, ವಿದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿ ಎದುರು ಪ್ರತಿಭಟನೆ ಮಾಡಬೇಕು, ಸ್ಥಳೀಯ ಸರ್ಕಾರಿ ಕಚೇರಿ ಅಥವಾ ಅದಾನಿ-ಅಂಬಾನಿಯಂಥ ದೊಡ್ಡ ದೊಡ್ಡ ಉದ್ಯಮಿಗಳ ಕಚೇರಿ ಎದುರು ಪ್ರತಿಭಟನೆ ಮಾಡಬೇಕು, ಗಣರಾಜ್ಯೋತ್ಸವ ದಿನದಂದು ರೈತರು ಟ್ರ್ಯಾಕ್ಟರ್​ ಜಾಥಾದಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳಬೇಕು ಎನ್ನುವುದಕ್ಕೆ ಸ್ಫೂರ್ತಿದಾಯಕವಾಗಿತ್ತು ಈ ಟೂಲ್​ಕಿಟ್​. ಆದರೆ, ಈ ಪ್ರತಿಭಟನೆ ಹಿಂಸಾಚಾರದೊಂದಿಗೆ ಅಂತ್ಯವಾಗಿತ್ತು. ಗ್ರೇಟಾ ಹಂಚಿಕೊಂಡ ಟೂಲ್​ಕಿಟ್​ ಅನ್ನು ದಿಶಾ ಪ್ರಸಾರ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ, ದೆಹಲಿ ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಹವಾಮಾನ ಬದಲಾವಣೆ ಕುರಿತು 2018ರಲ್ಲಿ ದೊಡ್ಡ ಹೋರಾಟವನ್ನು ಹುಟ್ಟು ಹಾಕಿತ್ತು ಫ್ರೈಡೇ ಫಾರ್ ಫ್ಯೂಚರ್ ಸಂಸ್ಥೆ. ದಿಶಾ ಈ ಸಂಸ್ಥೆಯ ಸಹ ಸಂಸ್ಥಾಪಕಿ. ಹವಾಮಾನ ವೈಪರಿತ್ಯದ ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಅಂದು ಬೆಂಗಳೂರಲ್ಲಿ ಚಾಲನೆ ನೀಡಿದ್ದು ಇದೇ ಗ್ರೇಟಾ ಥನ್​ಬರ್ಗ್. ಹೀಗಾಗಿ, ಇಬ್ಬರ ನಡುವೆ ನಿಕಟ ಸಂಪರ್ಕವಿದೆ. ಹೀಗಾಗಿ, ಗ್ರೇಟಾ ಹಂಚಿಕೊಂಡಿದ್ದ ಟೂಲ್​​ ಕಿಟ್​ ಅನ್ನು ದಿಶಾ ಎಲ್ಲರಿಗೂ ಪ್ರಸಾರ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Greta Thunberg  Toolkit Case | ಬೆಂಗಳೂರಿನ ಯುವ ಹವಾಮಾನ ಹೋರಾಟಗಾರ್ತಿ ಬಂಧನ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!