ಕೋರ್ಟ್​ ಮುಂದೆ ಹಾಜರಾಗದ ಹಿನ್ನೆಲೆ ಪಂಜಾಬ್​ನ ಸ್ಪೀಕರ್, ಇಬ್ಬರು ಸಚಿವರ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿ

2020ರ ಆಗಸ್ಟ್‌ನಲ್ಲಿ ಗಡಿ ಜಿಲ್ಲೆಗಳಾದ ಅಮೃತಸರ ಮತ್ತು ತರ್ನ್ ತರಣ್‌ನಲ್ಲಿ ನಡೆದ ಕಳ್ಳಭಟ್ಟಿ ದುರಂತದ ಸಾವುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಧರಣಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರನ್ನು ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಲಾಗಿತ್ತು.

ಕೋರ್ಟ್​ ಮುಂದೆ ಹಾಜರಾಗದ ಹಿನ್ನೆಲೆ ಪಂಜಾಬ್​ನ ಸ್ಪೀಕರ್, ಇಬ್ಬರು ಸಚಿವರ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿ
ಪಂಜಾಬ್ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 31, 2022 | 9:54 AM

ನವದೆಹಲಿ: ಪಂಜಾಬ್ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್ (Punjab Speaker Kultar Singh Sandhwan) ಮತ್ತು ಇಬ್ಬರು ಕ್ಯಾಬಿನೆಟ್ ಮಂತ್ರಿಗಳಾದ ಗುರ್ಮೀತ್ ಸಿಂಗ್ ಮೀತ್ ಹಯರ್ ಮತ್ತು ಲಾಲ್ಜಿತ್ ಸಿಂಗ್ ಭುಲ್ಲಾರ್ ಸೇರಿದಂತೆ 9 ಜನರ ವಿರುದ್ಧ ಪಂಜಾಬ್ ನ್ಯಾಯಾಲಯವು ಮಂಗಳವಾರ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಆಮ್ ಆದ್ಮಿ ಪಕ್ಷದ ಕೆಲವು ಶಾಸಕರು ಮತ್ತು ಪಕ್ಷದ ಕಾರ್ಯಕರ್ತರ ವಿರುದ್ಧವೂ ವಾರೆಂಟ್ ಹೊರಡಿಸಲಾಗಿದೆ.

2020ರ ಆಗಸ್ಟ್‌ನಲ್ಲಿ ಗಡಿ ಜಿಲ್ಲೆಗಳಾದ ಅಮೃತಸರ ಮತ್ತು ತರ್ನ್ ತರಣ್‌ನಲ್ಲಿ ನಡೆದ ಕಳ್ಳಭಟ್ಟಿ ದುರಂತದ ಸಾವುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಧರಣಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರು ಮತ್ತು ಕಾರ್ಯಕರ್ತರನ್ನು ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ, ಅವರು ನ್ಯಾಯಾಯಲದ ಮುಂದೆ ಹಾಜರಾಗಿರಲಿಲ್ಲ.

ಇದನ್ನೂ ಓದಿ: ಮದ್ಯ ಹಗರಣ: ಎಫ್ಐಆರ್ ದಾಖಲಿಸಿದ ಸಿಬಿಐ; ಮನೀಶ್ ಸಿಸೋಡಿಯಾ ಆರೋಪಿ ನಂಬರ್ 1

ಇದರ ಮಧ್ಯೆ ಮದ್ಯದ (ಇಎನ್​ಎ) ಅಕ್ರಮ ವ್ಯಾಪಾರವನ್ನು ತಡೆಯುವ ಪ್ರಯತ್ನದಲ್ಲಿ ಪಂಜಾಬ್ ಅಬಕಾರಿ ಮತ್ತು ತೆರಿಗೆ ಸಚಿವ ಹರ್ಪಾಲ್ ಸಿಂಗ್ ಚೀಮಾ ಮಂಗಳವಾರ ಪಂಜಾಬ್ ರಾಜ್ಯಾದ್ಯಂತ ಅಭಿಯಾನ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಎನ್ಎ ಎಂಬುದು ಮದ್ಯವನ್ನು ತಯಾರಿಸುವ ಕಚ್ಚಾ ವಸ್ತುವಾಗಿದೆ.

ಪಂಜಾಬ್​ನಲ್ಲಿ ಜುಲೈನಲ್ಲಿ 15,131 ಬಾಟಲಿ ಪಂಜಾಬ್ ಮಧ್ಯಮ ಮದ್ಯ (ಪಿಎಂಎಲ್), 7,917 ಭಾರತೀಯ ನಿರ್ಮಿತ ವಿದೇಶಿ ಮದ್ಯ (ಐಎಂಎಫ್‌ಎಲ್), 2,596 ಬಾಟಲಿ ಬಿಯರ್, 5,895 ಲೀಟರ್ ಅಕ್ರಮ ಮದ್ಯ, 3,795 ಬಾಟಲ್ ರೆಡಿ ಟು ಡ್ರಿಂಕ್ (ಆರ್‌ಟಿಡಿ) ಮದ್ಯವನ್ನು ಇಲಾಖೆ ವಶಪಡಿಸಿಕೊಂಡಿದೆ ಎಂದು ಸಚಿವರಿಗೆ ಸಭೆಯಲ್ಲಿ ತಿಳಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ