ವಿಪಕ್ಷಗಳು ಪ್ರಶ್ನೋತ್ತರ ವೇಳೆಯಲ್ಲಿ ಅಡ್ಡಿ ಪಡಿಸುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದುದು: ಧರ್ಮೇಂದ್ರ ಪ್ರಧಾನ್

ಭಾರತೀಯ ವಿಶ್ವವಿದ್ಯಾನಿಲಯಗಳ ಶ್ರೇಯಾಂಕಗಳು, ಎನ್‌ಸಿಇಆರ್‌ಟಿಯಿಂದ ಪಠ್ಯಪುಸ್ತಕಗಳ ಪರಿಷ್ಕರಣೆ ಪ್ರಕ್ರಿಯೆ, ಮತ್ತು ಸರ್ವಶಿಕ್ಷಾ ಅಭಿಯಾನದ ಅಡಿಯಲ್ಲಿ ಶಾಲೆಗಳ ಉನ್ನತೀಕರಣದ ಕುರಿತು ಸದಸ್ಯರು ಎತ್ತಿರುವ ಪ್ರಮುಖ ಪ್ರಶ್ನೆಗಳಿಗೆ ಇಂದು ಉತ್ತರಿಸಲು ಉದ್ದೇಶಿಸಲಾಗಿದೆ. ಆದರೆ ವಿಪಕ್ಷಗಳು....

ವಿಪಕ್ಷಗಳು ಪ್ರಶ್ನೋತ್ತರ ವೇಳೆಯಲ್ಲಿ ಅಡ್ಡಿ ಪಡಿಸುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದುದು: ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್
Follow us
ರಶ್ಮಿ ಕಲ್ಲಕಟ್ಟ
|

Updated on:Jul 26, 2023 | 5:32 PM

ದೆಹಲಿ ಜುಲೈ 26: ಇಂದು (ಬುಧವಾರ) ಪ್ರಶ್ನೋತ್ತರ ವೇಳೆಯಲ್ಲಿ (Question Hour) ವಿರೋಧ ಪಕ್ಷದ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ವರ್ತನೆ ಮತ್ತೊಮ್ಮೆ ಪ್ರದರ್ಶಿತವಾಯಿತು. ಭಾರತೀಯ ವಿಶ್ವವಿದ್ಯಾನಿಲಯಗಳ (Indian universities) ಶ್ರೇಯಾಂಕಗಳು, ಎನ್‌ಸಿಇಆರ್‌ಟಿಯಿಂದ ಪಠ್ಯಪುಸ್ತಕಗಳ ಪರಿಷ್ಕರಣೆ ಪ್ರಕ್ರಿಯೆ, ಮತ್ತು ಸರ್ವಶಿಕ್ಷಾ ಅಭಿಯಾನದ ಅಡಿಯಲ್ಲಿ ಶಾಲೆಗಳ ಉನ್ನತೀಕರಣದ ಕುರಿತು ಸದಸ್ಯರು ಎತ್ತಿರುವ ಪ್ರಮುಖ ಪ್ರಶ್ನೆಗಳಿಗೆ ಇಂದು ಉತ್ತರಿಸಲು ಉದ್ದೇಶಿಸಲಾಗಿದೆ. ಆದರೆ, ಪ್ರತಿಪಕ್ಷಗಳು ಉತ್ತರಗಳನ್ನು ಕೇಳಲು ಅಥವಾ ಸಂಸತ್ತಿನ ಕಲಾಪಕ್ಕೆ ಅವಕಾಶ ಮಾಡಿಕೊಡಲು ಆಸಕ್ತಿ ತೋರಲಿಲ್ಲ. ರಾಜಕೀಯ ಅಜೆಂಡಕ್ಕಾಗಿ ಪದೇ ಪದೇ ಅಡ್ಡಿಪಡಿಸುವುದು, ಗಲಾಟೆ, ಸವಲತ್ತು ಉಲ್ಲಂಘನೆ ಮತ್ತು ಪ್ರಶ್ನೋತ್ತರ ವೇಳೆಯಲ್ಲಿ ಉದ್ದೇಶಪೂರ್ವಕವಾಗಿ ಅಪ್ರಸ್ತುತ ಪ್ರಶ್ನೆಗಳನ್ನು ಕೇಳುವುದು ಪ್ರತಿಪಕ್ಷಗಳ ತೋರುತ್ತಿರುವ ಅಪಾಯಕಾರಿ ಪೂರ್ವನಿದರ್ಶನವಾಗಿದೆ. ಇದು ನಮ್ಮ ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್(Dharmendra pradhan) ಟ್ವೀಟ್ ಮಾಡಿದ್ದಾರೆ.

ಮಣಿಪುರ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಪ್ರತಿಭಟನೆ ಮುಂದುವರಿಸಿರುವ ಹಿನ್ನೆಲೆಯಲ್ಲಿ ವಿಪಕ್ಷಗಳು ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದೆ. ಮಣಿಪುರ ಹಿಂಸಾಚಾರದ ಕೋಲಾಹಲದ ನಡುವೆ ಜುಲೈ 20 ರಂದು ಮುಂಗಾರು ಅಧಿವೇಶನ ಪ್ರಾರಂಭವಾಯಿತು. ಮಣಿಪುರದ ಬಗ್ಗೆ ಚರ್ಚೆಗೆ ಸಿದ್ಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಆದರೆ, ಪ್ರತಿಪಕ್ಷಗಳು ಮೋದಿ ಸದನಕ್ಕೆ ಬಂದು ಹೇಳಿಕೆ ನೀಡಬೇಕು ಎಂದು ಬಯಸುತ್ತಿವೆ.

ಇದನ್ನೂ ಓದಿ: Manipur Violence: ಮಣಿಪುರ ಹಿಂಸಾಚಾರ ವಿಚಾರ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ

ಸಂಸತ್ತಿನ ಮುಂಗಾರು ಅಧಿವೇಶನ: ರಾಜ್ಯಸಭೆ ನಾಳೆಗೆ ಮುಂದೂಡಿಕೆ

ಸಂಸತ್ತಿನಲ್ಲಿ ವಿಪಕ್ಷಗಳು ಕಲಾಪಕ್ಕೆ ಅಡ್ಡಿ ಪಡಿಸಿದ್ದರಿಂದ ರಾಜ್ಯಸಭಾ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಕಲಾಪ ಮುಂದೂಡುವ ಮುನ್ನ ರಾಜ್ಯಸಭೆಯು ಸಂವಿಧಾನ (ಪರಿಶಿಷ್ಟ ಬುಡಕಟ್ಟುಗಳು) ಆದೇಶ (ಮೂರನೇ ತಿದ್ದುಪಡಿ) ಮಸೂದೆ, 2022 ಅನ್ನು ಅಂಗೀಕರಿಸಿದೆ. ಇತ್ತ ಲೋಕಸಭಾ ಕಲಾಪವನ್ನು ಗುರುವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ. ಲೋಕಸಭೆ ಇಂದು ಅರಣ್ಯ (ಸಂರಕ್ಷಣೆ) ತಿದ್ದುಪಡಿ ಮಸೂದೆ, 2023 ಅನ್ನು ಅಂಗೀಕರಿಸಿತು. ಏತನ್ಮಧ್ಯೆ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಲೋಕಸಭೆಯಲ್ಲಿ ವಿವಾದಿತ ದೆಹಲಿ ಸೇವಾ ಮಸೂದೆಯನ್ನು ಮಂಡಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:28 pm, Wed, 26 July 23