AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Norovirus: ಕೇರಳದ ಇಬ್ಬರು ಶಾಲಾ ವಿದ್ಯಾರ್ಥಿಗಳಲ್ಲಿ ನೊರೊವೈರಸ್ ಪತ್ತೆ

ಕೇರಳದ ತಿರುವನಂತಪುರಂನ ವಿಝಿಂಜಂ ಪ್ರದೇಶದಲ್ಲಿ ಇಬ್ಬರು ಮಕ್ಕಳಲ್ಲಿ ಹೆಚ್ಚು ಸಾಂಕ್ರಾಮಿಕ ಸೋಂಕಾದ ನೊರೊವೈರಸ್ ಪತ್ತೆಯಾಗಿದೆ.

Norovirus: ಕೇರಳದ ಇಬ್ಬರು ಶಾಲಾ ವಿದ್ಯಾರ್ಥಿಗಳಲ್ಲಿ ನೊರೊವೈರಸ್ ಪತ್ತೆ
ನೋರೋವೈರಸ್Image Credit source: Reuters
TV9 Web
| Edited By: |

Updated on:Jun 06, 2022 | 10:58 AM

Share

ತಿರುವನಂತಪುರಂ: ಕೇರಳದಲ್ಲಿ ಇಬ್ಬರು ಮಕ್ಕಳಲ್ಲಿ ಹೆಚ್ಚು ಸಾಂಕ್ರಾಮಿಕ ರೋಗವಾದ ನೊರೊವೈರಸ್‌ನ (Norovirus) ಎರಡು ಪ್ರಕರಣಗಳು ದೃಢಪಟ್ಟಿವೆ. ಈ ಕುರಿತು ಕೇರಳ ಸರ್ಕಾರ ಭಾನುವಾರ ದೃಢಪಡಿಸಿದೆ. ಕಲುಷಿತ ನೀರು ಮತ್ತು ಆಹಾರದ ಮೂಲಕ ಈ ನೊರೊವೈರಸ್ ಹರಡುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕೇರಳದ (Kerala) ಆರೋಗ್ಯ ಸಚಿವೆ ವೀಣಾ ಜಾರ್ಜ್ ಜನರು ನೈರ್ಮಲ್ಯವನ್ನು ಕಾಪಾಡಿಕೊಳ್ಳುವಂತೆ ಒತ್ತಾಯಿಸಿದ್ದಾರೆ. “ಇಬ್ಬರು ಮಕ್ಕಳಲ್ಲಿ ನೊರೊವೈರಸ್ ಸೋಂಕು ಪತ್ತೆಯಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸದ್ಯಕ್ಕೆ ಆತಂಕಪಡುವ ಅಗತ್ಯವಿಲ್ಲ ಆದರೆ ಎಲ್ಲರೂ ಜಾಗರೂಕರಾಗಿರಬೇಕು ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು” ಎಂದು ಸಚಿವೆ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಕೇರಳದ ಆಲಪ್ಪುಳ ಜಿಲ್ಲೆಯ ಕಾಯಂಕುಲಂನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8 ವಿದ್ಯಾರ್ಥಿಗಳು ಆಹಾರ ವಿಷಪೂರಿತ ಪ್ರಕರಣದಿಂದ ಅಸ್ವಸ್ಥಗೊಂಡಿದ್ದಾರೆ ಎಂಬ ದೂರು ಕೇಳಿಬಂದ ನಂತರ ಅವರನ್ನು ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಲ್ಲಿ ಇಬ್ಬರಿಗೆ ನೊರೊವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ರೋಗವನ್ನು ಗುಣಪಡಿಸಬಹುದು ಮತ್ತು ಹರಡದಂತೆ ತಡೆಯಬಹುದು. ಯಾರೂ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಕೇರಳ ಆರೋಗ್ಯ ಇಲಾಖೆ ತಿಳಿಸಿದೆ.

ಕೇರಳದ ರಾಜಧಾನಿ ತಿರುವನಂತಪುರಂನ ವಿಝಿಂಜಂ ಪ್ರದೇಶದಲ್ಲಿ ಇಬ್ಬರು ಮಕ್ಕಳಲ್ಲಿ ಹೆಚ್ಚು ಸಾಂಕ್ರಾಮಿಕ ಸೋಂಕಾದ ನೊರೊವೈರಸ್ ಪತ್ತೆಯಾಗಿದೆ. ವಿಝಿಂಜಾಂನ ಎಲ್‌ಎಂಎಸ್‌ಎಲ್‌ಪಿ ಶಾಲೆಯ ವಿದ್ಯಾರ್ಥಿಗಳಿಂದ ಆಹಾರ ವಿಷ ಮತ್ತು ಅತಿಸಾರದ ಬಗ್ಗೆ ದೂರು ನೀಡಿದ ನಂತರ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಅವರ ಮಾದರಿಗಳನ್ನು ಪರೀಕ್ಷೆಗಾಗಿ ರಾಜ್ಯ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿ ನೊರೊವೈರಸ್ ಪತ್ತೆಯಾಗಿದ್ದನ್ನು ದೃಢಪಡಿಸಲಾಗಿತ್ತು. ಕೇರಳದ ಆರೋಗ್ಯ ಇಲಾಖೆಯು ಏಕಾಏಕಿ ವರದಿಯಾದ ಪ್ರದೇಶದಿಂದ ಸಂಗ್ರಹಿಸಿದ ಮಾದರಿಗಳನ್ನು ಪರಿಶೀಲಿಸಿದೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಇದನ್ನೂ ಓದಿ: Norovirus ಕೇರಳದ ವಯನಾಡಿನಲ್ಲಿ ನೊರೊವೈರಸ್ ಪತ್ತೆ: ಏನಿದರ ರೋಗಲಕ್ಷಣ, ತಡೆಗಟ್ಟುವ ಕ್ರಮಗಳೇನು?

ನವೆಂಬರ್ 2021ರಲ್ಲಿ ಕೇರಳದಲ್ಲಿ ನೊರೊವೈರಸ್ ಪ್ರಕರಣಗಳು ಮೊದಲ ಬಾರಿಗೆ ವರದಿಯಾಗಿದ್ದವು. ವಯನಾಡಿನ ಪಶುವೈದ್ಯಕೀಯ ಕಾಲೇಜಿನಲ್ಲಿ 13 ವಿದ್ಯಾರ್ಥಿಗಳಿಗೆ ನೊರೊವೈರಸ್ ದೃಢಪಟ್ಟಿತ್ತು. ಬಳಿಕ ಕೇರಳ ಸರ್ಕಾರ ತಕ್ಷಣ ಕ್ರಮ ಕೈಗೊಂಡು ನಿಯಂತ್ರಣಕ್ಕೆ ತಂದಿತ್ತು. ಅದರ ನಂತರ ಯಾವುದೇ ಹರಡುವಿಕೆ ವರದಿಯಾಗಿರಲಿಲ್ಲ.

ವಿದ್ಯಾರ್ಥಿಗಳು ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಿದ ನಂತರ ಆಹಾರ ವಿಷಪೂರಿತವಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ತಿರುವನಂತಪುರಂನಲ್ಲಿ ಇಬ್ಬರು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ನೊರೊವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಇದು ವಾಂತಿ, ಭೇದಿ ಮತ್ತು ಜ್ವರದ ಲಕ್ಷಣಗಳನ್ನು ಹೊಂದಿದೆ. ನೊರೊವೈರಸ್ ಹೆಚ್ಚು ಸಾಂಕ್ರಾಮಿಕವಾಗಿದೆ ಮತ್ತು ಕಲುಷಿತ ಆಹಾರ, ನೀರಿನ ಮೂಲಕ ಹರಡಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 am, Mon, 6 June 22

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?