Vande Bharat Express: ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟವಾಗಿಲ್ಲ, ಗೀರುಗಳು ಕಲ್ಲಿನಿಂದಾಗಿದ್ದಲ್ಲ: ಎನ್​ಎಫ್​ಆರ್​ ಸ್ಪಷ್ಟನೆ

ಕಲ್ಲು ತೂರಾಟದಿಂದಾಗಿ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲನ್ನು 10 ನಿಮಿಷಗಳ ಕಾಲ ಬೋಲ್ಪುರ್​ ರೈಲು ನಿಲ್ದಾಣದಲ್ಲಿ ತಡೆಹಿಡಿದಿರುವ ಘಟನೆ ವರದಿಯಾಗಿತ್ತು. ಆದರೆ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ ಸ್ಪಷ್ಟಪಡಿಸಿದೆ.

Vande Bharat Express: ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟವಾಗಿಲ್ಲ, ಗೀರುಗಳು ಕಲ್ಲಿನಿಂದಾಗಿದ್ದಲ್ಲ: ಎನ್​ಎಫ್​ಆರ್​ ಸ್ಪಷ್ಟನೆ
ವಂದೇ ಭಾರತ್ ರೈಲು
Follow us
TV9 Web
| Updated By: ನಯನಾ ರಾಜೀವ್

Updated on:Jan 09, 2023 | 12:50 PM

ಕಲ್ಲು ತೂರಾಟದಿಂದಾಗಿ ವಂದೇ ಭಾರತ್ ಎಕ್ಸ್​ಪ್ರೆಸ್​ (Vande Bharat Express)ರೈಲನ್ನು 10 ನಿಮಿಷಗಳ ಕಾಲ ಬೋಲ್ಪುರ್​ ರೈಲು ನಿಲ್ದಾಣದಲ್ಲಿ ತಡೆಹಿಡಿದಿರುವ ಘಟನೆ ವರದಿಯಾಗಿತ್ತು. ಆದರೆ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ ಸ್ಪಷ್ಟಪಡಿಸಿದೆ. ಎನ್‌ಎಫ್‌ಆರ್ ಈ ವಿಷಯದ ಬಗ್ಗೆ ಪ್ರಾಥಮಿಕ ವಿಚಾರಣೆ ನಡೆಸಿದ ನಂತರ ಈ ಹೇಳಿಕೆ ನೀಡಿದೆ. ತಮಗೆ ಶಬ್ದ ಕೇಳಿತ್ತು ಎಂದು ಕೆಲವು ಪ್ರಯಾಣಿಕರು ಹೇಳಿಕೊಂಡಿದ್ದರಿಂದ ನಂಬಲಾಗಿತ್ತು. ಶಬ್ದವು ಕಲ್ಲು ತೂರಾಟದಿಂದ ಆಗಿಲ್ಲ. ವಾಸ್ತವವಾಗಿ, ಕಿಟಕಿಯ ಮೇಲಿನ ಗೀರು ಕಲ್ಲು ತೂರಾಟದಿಂದಾಗಿದ್ದು ಅಲ್ಲ ಎಂದು ಎನ್‌ಎಫ್‌ಆರ್ ಹೇಳಿದೆ.

ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಮತ್ತು ಘಟನೆಯನ್ನು ಪೊಲೀಸ್ ಅಧಿಕಾರಿಗಳು ಗಮನಿಸುತ್ತಿದ್ದಾರೆಂದು ದೃಶ್ಯಗಳು ತೋರಿಸಿವೆ. ಸ್ಟೇಷನ್ ದಾಟಿ ಮಾಲ್ಡಾ ಸ್ಟೇಷನ್ ತಲುಪುವಷ್ಟರಲ್ಲಿ ಈ ಘಟನೆ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ರೈಲಿನ ಸಿ14 ಕಂಪಾರ್ಟ್​ಮೆಂಟ್​ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿತ್ತು. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಹಿಂದೆ, ಪಶ್ಚಿಮ ಬಂಗಾಳದ ಹೌರಾದಿಂದ ನ್ಯೂ ಜಲ್ಪೈಗುರಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು, ರೈಲು ಬಿಹಾರ ಮೂಲಕ ಹಾದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಘಟನೆಯ ತನಿಖೆಗೆ ಎನ್‌ಐಎ ಮಧ್ಯಪ್ರವೇಶಿಸಬೇಕೆಂದು ಬಿಜೆಪಿ ಒತ್ತಾಯಿಸಿತ್ತು. ಡಿಸೆಂಬರ್ 30 ರಂದು ಹೌರಾ ರೈಲು ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ರೈಲಿಗೆ ಫ್ಲ್ಯಾಗ್-ಆಫ್ ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:36 am, Mon, 9 January 23

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ