ಕಲ್ಲು ತೂರಾಟದಿಂದಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express)ರೈಲನ್ನು 10 ನಿಮಿಷಗಳ ಕಾಲ ಬೋಲ್ಪುರ್ ರೈಲು ನಿಲ್ದಾಣದಲ್ಲಿ ತಡೆಹಿಡಿದಿರುವ ಘಟನೆ ವರದಿಯಾಗಿತ್ತು. ಆದರೆ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ ಸ್ಪಷ್ಟಪಡಿಸಿದೆ. ಎನ್‌ಎಫ್‌ಆರ್ ಈ ವಿಷಯದ ಬಗ್ಗೆ ಪ್ರಾಥಮಿಕ ವಿಚಾರಣೆ ನಡೆಸಿದ ನಂತರ ಈ ಹೇಳಿಕೆ ನೀಡಿದೆ. ತಮಗೆ ಶಬ್ದ ಕೇಳಿತ್ತು ಎಂದು ಕೆಲವು ಪ್ರಯಾಣಿಕರು ಹೇಳಿಕೊಂಡಿದ್ದರಿಂದ ನಂಬಲಾಗಿತ್ತು. ಶಬ್ದವು ಕಲ್ಲು ತೂರಾಟದಿಂದ ಆಗಿಲ್ಲ. ವಾಸ್ತವವಾಗಿ, ಕಿಟಕಿಯ ಮೇಲಿನ ಗೀರು ಕಲ್ಲು ತೂರಾಟದಿಂದಾಗಿದ್ದು ಅಲ್ಲ ಎಂದು ಎನ್‌ಎಫ್‌ಆರ್ ಹೇಳಿದೆ.
ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಮತ್ತು ಘಟನೆಯನ್ನು ಪೊಲೀಸ್ ಅಧಿಕಾರಿಗಳು ಗಮನಿಸುತ್ತಿದ್ದಾರೆಂದು ದೃಶ್ಯಗಳು ತೋರಿಸಿವೆ. ಸ್ಟೇಷನ್ ದಾಟಿ ಮಾಲ್ಡಾ ಸ್ಟೇಷನ್ ತಲುಪುವಷ್ಟರಲ್ಲಿ ಈ ಘಟನೆ ನಡೆದಿದೆ.
ಪಶ್ಚಿಮ ಬಂಗಾಳದಲ್ಲಿ ರೈಲಿನ ಸಿ14 ಕಂಪಾರ್ಟ್ಮೆಂಟ್ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿತ್ತು. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಹಿಂದೆ, ಪಶ್ಚಿಮ ಬಂಗಾಳದ ಹೌರಾದಿಂದ ನ್ಯೂ ಜಲ್ಪೈಗುರಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು, ರೈಲು ಬಿಹಾರ ಮೂಲಕ ಹಾದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಘಟನೆಯ ತನಿಖೆಗೆ ಎನ್‌ಐಎ ಮಧ್ಯಪ್ರವೇಶಿಸಬೇಕೆಂದು ಬಿಜೆಪಿ ಒತ್ತಾಯಿಸಿತ್ತು. ಡಿಸೆಂಬರ್ 30 ರಂದು ಹೌರಾ ರೈಲು ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ರೈಲಿಗೆ ಫ್ಲ್ಯಾಗ್-ಆಫ್ ಮಾಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:36 am, Mon, 9 January 23