ಎಲ್ಲೆಂದರಲ್ಲಿ ರಾಮಮಂದಿರದಂತಹ ವಿವಾದಗಳನ್ನು ಹುಟ್ಟುಹಾಕಬೇಡಿ : ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂಸೇವಕ ಸಂಘ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ಗುರುವಾರ ದೇಶದಲ್ಲಿ ಹಲವಾರು ಮಂದಿರ-ಮಸೀದಿ ವಿವಾದಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪುಣೆಯಲ್ಲಿ ಭಾರತ- ವಿಶ್ವಗುರು ಕುರಿತು ಉಪನ್ಯಾಸ ನೀಡಿದ ಭಾಗವತ್, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ ಕೆಲವು ವ್ಯಕ್ತಿಗಳು ಇಂತಹ ವಿವಾದಗಳನ್ನು ಹುಟ್ಟುಹಾಕುವ ಮೂಲಕ ಹಿಂದೂಗಳ ನಾಯಕರು ಆಗಬಹುದು ಎಂಬ ಭಾವನೆಯಲ್ಲಿದ್ದಾರೆ ಎಂದರು.

ಎಲ್ಲೆಂದರಲ್ಲಿ ರಾಮಮಂದಿರದಂತಹ ವಿವಾದಗಳನ್ನು ಹುಟ್ಟುಹಾಕಬೇಡಿ : ಮೋಹನ್ ಭಾಗವತ್
ಮೋಹನ್ ಭಾಗವತ್ Image Credit source: Moneycontrol
Follow us
ನಯನಾ ರಾಜೀವ್
|

Updated on: Dec 20, 2024 | 11:18 AM

ಎಲ್ಲೆಂದರಲ್ಲಿ ರಾಮ ಮಂದಿರದಂತಹ ವಿವಾದಗಳನ್ನು ಹುಟ್ಟುಹಾಕಬೇಡಿ ಎಂದು ಎಂದು ಆರ್‌ಎಸ್‌ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್  ಹೇಳಿದ್ದಾರೆ.  ಪುಣೆಯಲ್ಲಿ ವಿಶ್ವಗುರು ಭಾರತ ಕುರಿತ ಉಪನ್ಯಾಸದಲ್ಲಿ ಪಾಲ್ಗೊಂಡ ಅವರು, ಭಾರತವು ಎಲ್ಲಾ ಧರ್ಮಗಳು ಮತ್ತು ಸಿದ್ಧಾಂತಗಳ ಸಾಮರಸ್ಯದ ಸಹಬಾಳ್ವೆಗೆ ಮಾದರಿಯಾಗಬೇಕು ಎಂದು ಹೇಳಿದರು.

ಉತ್ತರ ಪ್ರದೇಶದ ಸಂಭಾಲ್‌ನ ಶಾಹಿ ಜಾಮಾ ಮಸೀದಿ ಮತ್ತು ರಾಜಸ್ಥಾನದ ಅಜ್ಮೀರ್ ಷರೀಫ್‌ನಂತಹ ಧಾರ್ಮಿಕ ಸ್ಥಳಗಳ ಮೂಲದ ಬಗ್ಗೆ ಇತ್ತೀಚಿನ ವಿವಾದಗಳ ಹಿನ್ನೆಲೆಯಲ್ಲಿ ಅವರು ಈ ರೀತಿ ಹೇಳಿದ್ದಾರೆ. ಭಾರತದಲ್ಲಿ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಎಂಬುದಿಲ್ಲ, ಎಲ್ಲರೂ ಒಂದೇ ಎಂದು ಹೇಳಿದರು.

ತಮ್ಮ ತಪ್ಪುಗಳಿಂದ ಭಾರತೀಯರು ಪಾಠ ಕಲಿಯಬೇಕು, ವಿವಾದಾತ್ಮಕ ವಿಷಯಗಳನ್ನು ತಪ್ಪಿಸುವ ಮೂಲಕ ಒಳ್ಳೆಯತನಕ್ಕೆ ಮಾದರಿಯಾಗಬೇಕು. ಉಗ್ರವಾದ, ಆಕ್ರಮಣಶೀಲತೆ, ಬಲಪ್ರಯೋಗ ಮತ್ತು ಇತರರ ದೇವರನ್ನು ಅವಮಾನಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಒತ್ತಿ ಹೇಳಿದರು.

ಮತ್ತಷ್ಟು ಓದಿ: ಬೇರೆ ದೇಶದ ಅಲ್ಪಸಂಖ್ಯಾತರ ಮೇಲಿನ ದಾಳಿಯ ಬಗ್ಗೆಯೂ ಜಗತ್ತು ಗಮನಹರಿಸಬೇಕು; ಮೋಹನ್ ಭಾಗವತ್

ಈ ದೇಶದಲ್ಲಿ ಪ್ರತಿಯೊಬ್ಬರೂ ತಮ್ಮದೇ ಆದ ಪೂಜಾ ವಿಧಾನವನ್ನು ಅನುಸರಿಸುತ್ತಾರೆ. ಭಾರತ ವಿಶ್ವಕ್ಕೆ ಮಾದರಿಯಾಗಬೇಕು, ವಿಭಿನ್ನ ಧರ್ಮಗಳು ಮತ್ತು ಸಿದ್ಧಾಂತಗಳು ವಿವಾದಗಳಿಲ್ಲದೆ ಹೇಗೆ ಒಟ್ಟಿಗೆ ಬದುಕುತ್ತವೆ ಎಂಬುದನ್ನು ನಾವು ತೋರಿಸಬೇಕು ಎಂದು ಭರವಸೆಯ ಮಾತುಗಳನ್ನಾಡಿದರು.

ಪ್ರಾಬಲ್ಯದ ದಿನಗಳು ಕಳೆದುಹೋಗಿವೆ. ಮೊಘಲ್ ಚಕ್ರವರ್ತಿ ಔರಂಗಜೇಬನ ಆಳ್ವಿಕೆಯು ಇದೇ ರೀತಿಯ ಮತಾಂಧತೆಯಿಂದ ಗುರುತಿಸಲ್ಪಟ್ಟಿದೆ ಎಂದು ಅವರು ಹೇಳಿದರು, ಆದಾಗ್ಯೂ ಅವರ ವಂಶಸ್ಥ ಬಹದ್ದೂರ್ ಶಾ ಜಾಫರ್ 1857 ರಲ್ಲಿ ಗೋಹತ್ಯೆಯನ್ನು ನಿಷೇಧಿಸಿದರು.

ಅಯೋಧ್ಯೆಯಲ್ಲಿನ ರಾಮಮಂದಿರವನ್ನು ಹಿಂದೂಗಳಿಗೆ ನೀಡಬೇಕು ಎಂದು ತೀರ್ಮಾನಿಸಲಾಯಿತು, ಆದರೆ ಬ್ರಿಟಿಷರು ಇದನ್ನು ಗಾಳಿಗೆ ತೂರಿ ಎರಡು ಸಮುದಾಯಗಳ ನಡುವೆ ಬಿರುಕು ಮೂಡಿಸಿದರು. ಅಂದಿನಿಂದ, ಪ್ರತ್ಯೇಕತಾ ಭಾವನೆ ಅಸ್ತಿತ್ವಕ್ಕೆ ಬಂದಿತು. ಅದರ ಪರಿಣಾಮವಾಗಿ ಪಾಕಿಸ್ತಾನ ಅಸ್ತಿತ್ವಕ್ಕೆ ಬಂತು ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಅಧಿಕಾರಿಗಳು, ಗ್ರಾಮಸ್ಥರ ಆಕ್ರೋಶ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಅಧಿಕಾರಿಗಳು, ಗ್ರಾಮಸ್ಥರ ಆಕ್ರೋಶ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು