ಎಲ್ಲಾ ಬ್ಯಾಂಕ್​ಗಳ ಖಾಸಗೀಕರಣ ಮಾಡಲ್ಲ; ಸ್ಪಷ್ಟನೆ ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Bank Privatisation: ಯಾವುದೇ ಬ್ಯಾಂಕ್ ಆಗಲಿ, ಖಾಸಗೀಕರಣ ಆದಲ್ಲಿ ಅಲ್ಲಿಯ ಉದ್ಯೋಗಿಗಳು ಚಿಂತೆಗೊಳಗಾಗುವುದು ಬೇಡ. ಅಂತಹ ಬ್ಯಾಂಕ್​ಗಳ ಉದ್ಯೋಗಿಗಳ ಹಿತಾಸಕ್ತಿಗೆ ಧಕ್ಕೆ ಬಾರದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು.

ಎಲ್ಲಾ ಬ್ಯಾಂಕ್​ಗಳ ಖಾಸಗೀಕರಣ ಮಾಡಲ್ಲ; ಸ್ಪಷ್ಟನೆ ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ (ಸಂಗ್ರಹ ಚಿತ್ರ)
Follow us
guruganesh bhat
| Updated By: ganapathi bhat

Updated on: Mar 16, 2021 | 5:17 PM

ದೆಹಲಿ: ಚಿಕ್ಕ ಬ್ಯಾಂಕ್​ಗಳ ವಿಲೀನದಿಂದ ದೊಡ್ಡ ಬ್ಯಾಂಕ್​ಗಳು ಸೃಷ್ಟಿಯಾಗಲಿವೆ. ಹಾಗೆಂದು ಎಲ್ಲ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡುವುದಿಲ್ಲ. ದೇಶದ ಜನರ ಆಕಾಂಕ್ಷೆ ಈಡೇರಿಸುವ ದೃಷ್ಟಿಯಿಂದ ಬ್ಯಾಂಕ್ ವಿಲೀನ ಪ್ರಕ್ರಿಯೆ ಕೈಗೊಂಡಿದ್ದೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ತಿಳಿಸಿದರು. ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕೈಗೊಂಡ  ಬ್ಯಾಂಕ್ ವಿಲೀನದ ತೀರ್ಮಾನ ದಿಢೀರ್ ನಿರ್ಧಾರವಲ್ಲ. ಹಲವು ವರ್ಷಗಳ ಚಿಂತನೆಯ ನಂತರವೇ ಈ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡದಿದ್ದರೂ ಬ್ಯಾಂಕ್​ಗಳ ಖಾಸಗೀಕರಣ ಪೂರ್ಣಗೊಂಡ ನಂತರ ಅಲ್ಲಿಯ ಉದ್ಯೋಗಿಗಳ ಹಿತರಕ್ಷಣೆಗೆ ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಯಾವುದೇ ಬ್ಯಾಂಕ್ ಆಗಲಿ, ಖಾಸಗೀಕರಣ ಪ್ರಕ್ರಿಯೆ ನಂತರ ಅಲ್ಲಿಯ ಉದ್ಯೋಗಿಗಳು ಚಿಂತೆಗೊಳಗಾಗುವುದು ಬೇಡ. ಅಂತಹ ಬ್ಯಾಂಕ್​ಗಳ ಉದ್ಯೋಗಿಗಳ ಹಿತಾಸಕ್ತಿಗೆ ಧಕ್ಕೆ ಬಾರದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು. ಕೇಂದ್ರ ಸರ್ಕಾರ ಖಾಸಗೀಕರಣದ ಮೂಲಕ ಎಲ್ಲ ಬ್ಯಾಂಕ್​ಗಳ ಮಾರಾಟ ಮಾಡುತ್ತಿದೆ ಎಂದು ವಿಪಕ್ಷಗಳು ದೂರುತ್ತಿವೆ. ಹಿಗೆ ದೂರುವುದು ಸರಿಯಲ್ಲ ಎಂದು ವಿಪಕ್ಷಗಳ ವಿರುದ್ಧ ಟೀಕಿಸಿದ ಅವರು, ಯುಪಿಎ ಸರ್ಕಾರದ ಕಾಲದಲ್ಲಿ ಬ್ಯಾಂಕ್​ಗಳ ನಷ್ಟದಲ್ಲಿದ್ದವು ಎಂಬುದನ್ನು ರಾಹುಲ್ ಗಾಂಧಿ ನೆನಪಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ಟೀಕೆಗೆ ಪ್ರತ್ಯುತ್ತರ ನೀಡಿದರು.

ಮೂಲಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಸಂಸ್ಥೆ ಸ್ಥಾಪನೆ: ದೇಶದಲ್ಲಿ ಮೂಲಸೌಕರ್ಯಗಳ ಯೋಜನೆಗಳಿಗೆ ಹಣಕಾಸಿನ ನೆರವು ಒದಗಿಸಲು ಅಭಿವೃದ್ಧಿ ಆರ್ಥಿಕ ಸಂಸ್ಥೆ (ಡೆವಲಪ್‌ಮೆಂಟ್ ಫೈನಾನ್ಷಿಯಲ್  ಇನ್ಸ್​ಟಿಟ್ಯೂಷನ್ ಅಥವಾ DFI ) ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ಘೋಷಿಸಿದರು. ಈ ಸಂಸ್ಥೆ ಆರಂಭಿಕವಾಗಿ ₹5 ಸಾವಿರ ಕೋಟಿ ಹಣವನ್ನು ಮೂಲಸೌಕರ್ಯ ಯೋಜನೆಗಳಿಗೆ ಒದಗಿಸಲಿದ್ದು, ದೇಶದ ಅಭಿವೃದ್ಧಿಗೆ ಒತ್ತು ನೀಡಲಿದೆ ಎಂದು ಅವರು ತಿಳಿಸಿದರು.

ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಕಾರಣವೇನು? ಕಳೆದ ಫೆಬ್ರವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ದೇಶದಲ್ಲಿ 1.75 ಲಕ್ಷ ಕೋಟಿ ರೂ. ಗಳಿಸುವ ಸರ್ಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸಿತ್ತು. 2017ರಲ್ಲಿ 27 ಇದ್ದ ಸಾರ್ವಜನಿಕರ ಬ್ಯಾಂಕ್​ಗಳ ಸಂಖ್ಯೆಯು ಮಾರ್ಚ್ ವೇಳೆಗೆ 12 ಕ್ಕೆ ಇಳಿಸಿತು.

ಕೇಂದ್ರ ಸರ್ಕಾರ ಈ ಬಾರಿ ಬಜೆಟ್​ನಲ್ಲಿ 2 ಬ್ಯಾಂಕ್​ಗಳ ಖಾಸಗೀಕರಣ ಮಾಡುವುದಾಗಿ ಹೇಳಿತ್ತು. ಬಳಿಕ 4 ಬ್ಯಾಂಕ್ ಖಾಸಗೀಕರಣಕ್ಕೆ ಕೇಂದ್ರ ಯತ್ನಿಸುತ್ತಿದೆ. ಇದರಿಂದ ಸಾರ್ವಜನಿಕರ ಹಣ ಖಾಸಗಿಯವರ ಕೈಸೇರಲಿದೆ. ಜನರ ಹಣಕ್ಕೆ (ಠೇವಣಿಗೆ) ಯಾವುದೇ ಭದ್ರತೆ ಇರುವುದಿಲ್ಲ. ಈಗಾಗಲೇ ಹಲವು ಖಾಸಗಿ ಬ್ಯಾಂಕ್​ಗಳು ಅಕ್ರಮ ಎಸಗಿವೆ. ಬ್ಯಾಂಕ್ ಖಾಸಗೀಕರಣದಿಂದ ವಿದೇಶೀ ಬಂಡವಾಳದಾರರು ಹಾಗೂ ಉದ್ಯಮಪತಿಗಳ ಕೈಗೆ ಬ್ಯಾಂಕ್ ಹೋಗಲಿದೆ. ಇದು ದೇಶದ ಭವಿಷ್ಯದ ಆರ್ಥಿಕತೆಗೆ ಮುಳುವಾಗಲಿದೆ. ದೇಶದ ಆರ್ಥಿಕತೆ ಖಾಸಗಿ ಕ್ಷೇತ್ರದ ಹಿಡಿತಕ್ಕೆ ಸಿಲುಕಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬ್ಯಾಂಕ್ ಖಾಸಗೀಕರಣದ ತೀರ್ಮಾನ ನಿಲ್ಲಿಸಬೇಕೆಂದು ಆಗ್ರಹಿಸಿ ಎರಡು ದಿನದ ಮುಷ್ಕರಕ್ಕೆ ಬ್ಯಾಂಕ್‌ ಒಕ್ಕೂಟ​ಗಳ ಸಂಯುಕ್ತ ವೇದಿಕೆ ಕರೆ ಕೊಟ್ಟಿದ್ದವು.

ಇದನ್ನೂ ಓದಿ: ಈ 8 ಬ್ಯಾಂಕ್​ಗಳ ಚೆಕ್​ಬುಕ್, ಪಾಸ್​ಬುಕ್ ಏಪ್ರಿಲ್ 1ರಿಂದ ಚಾಲ್ತಿಯಲ್ಲಿ ಇರಲ್ಲ

Bank Strike: ಇಂದೇ ಮುಗಿಸಿಕೊಳ್ಳಿ ಬ್ಯಾಂಕ್ ಕೆಲಸ, 4 ದಿನ ಸಾಲು ಸಾಲು ರಜೆ.. ಮಾರ್ಚ್ 15 ಮತ್ತು 16 ಬ್ಯಾಂಕ್ ನೌಕರರ ಮುಷ್ಕರ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ