ಸ್ಪೀಕರ್ ಹುದ್ದೆಗೆ ಇಂಡಿಯಾ ಬ್ಲಾಕ್ ನಾಮನಿರ್ದೇಶನದ ಬಗ್ಗೆ ನಮ್ಮೊಂದಿಗೆ ಚರ್ಚಿಸಿಲ್ಲ; ಟಿಎಂಸಿ

|

Updated on: Jun 25, 2024 | 9:45 PM

ಲೋಕಸಭಾ ಸ್ಪೀಕರ್ ಹುದ್ದೆಯ ಬಗ್ಗೆ ಎನ್​ಡಿಎ ಮತ್ತು ಇಂಡಿಯಾ ಬ್ಲಾಕ್ ನಡುವೆ ವಾಗ್ವಾದಗಳು ನಡೆದಿದ್ದು, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಬುಧವಾರ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದ್ದು, ಇಂಡಿಯಾ ಬ್ಲಾಕ್​ನ ಅಭ್ಯರ್ಥಿಯಾಗಿ ಕೆ. ಸುರೇಶ್ ಅವರನ್ನು ಆಯ್ಕೆ ಮಾಡುವ ಮುನ್ನ ತಮ್ಮ ಬಳಿ ಸಮಾಲೋಚನೆಯನ್ನೇ ನಡೆಸಿಲ್ಲ ಎಂದು ಟಿಎಂಸಿ ಆರೋಪಿಸಿದೆ.

ಸ್ಪೀಕರ್ ಹುದ್ದೆಗೆ ಇಂಡಿಯಾ ಬ್ಲಾಕ್ ನಾಮನಿರ್ದೇಶನದ ಬಗ್ಗೆ ನಮ್ಮೊಂದಿಗೆ ಚರ್ಚಿಸಿಲ್ಲ; ಟಿಎಂಸಿ
ಕೆ. ಸುರೇಶ್
Follow us on

ನವದೆಹಲಿ: ಲೋಕಸಭೆ ಸ್ಪೀಕರ್ ಚುನಾವಣೆಗೆ (Lok Sabha Speaker Election) ಎನ್​ಡಿಎಯಿಂದ ಓಂ ಬಿರ್ಲಾ (Om Birla) ಮತ್ತು ಇಂಡಿಯಾ ಬ್ಲಾಕ್ ಅಭ್ಯರ್ಥಿಯಾಗಿ ಕೆ. ಸುರೇಶ್ (K Suresh) ನಾಮಪತ್ರ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ಕೆ. ಸುರೇಶ್ ಅವರು ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಂತೆ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅವರ ಪತ್ರಕ್ಕೆ ಸಹಿ ಮಾಡಿದ ಇಂಡಿಯಾ ಬ್ಲಾಕ್ ಪಕ್ಷಗಳ ಪಟ್ಟಿಯಲ್ಲಿ ಇರಲಿಲ್ಲ. ಲೋಕಸಭೆಯ ಸ್ಪೀಕರ್ ಹುದ್ದೆಗೆ ಕಾಂಗ್ರೆಸ್ ಸಂಸದ ಕೆ. ಸುರೇಶ್ ಅವರನ್ನು ಇಂಡಿಯಾ ಬ್ಲಾಕ್‌ನ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ ಎಂದು ಟಿಎಂಸಿ ಆರೋಪಿಸಿದೆ.

ಇಂದು ಬೆಳಗ್ಗೆ ಕಾಂಗ್ರೆಸ್ ಸಂಸದ ಕೆ. ಸುರೇಶ್ ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಂತೆ, ಅವರ ಪತ್ರಕ್ಕೆ ಸಹಿ ಮಾಡಿದ ಇಂಡಿಯಾ ಬ್ಲಾಕ್ ಪಕ್ಷಗಳಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಇರಲಿಲ್ಲ. ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ಈ ವಿಷಯದ ಬಗ್ಗೆ ತಮ್ಮ ಪಕ್ಷದ ನಿಲುವಿನ ಬಗ್ಗೆ ಕೇಳಿದಾಗ ಅವರು ಈ ಬಗ್ಗೆ ಯಾರೂ ಇನ್ನೂ ತಮ್ಮನ್ನು ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಎನ್​ಡಿಎಯಿಂದ ಓಂ ಬಿರ್ಲಾ, ಇಂಡಿಯಾ ಒಕ್ಕೂಟದಿಂದ ಕೆ ಸುರೇಶ್​ ನಾಮಪತ್ರ ಸಲ್ಲಿಕೆ

“ಇದುವರೆಗೂ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ, ಯಾವುದೇ ಮಾತುಕತೆ ನಡೆದಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರವಾಗಿದೆ” ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ನಾವು ಯಾವ ನಿಲುವು ತಳೆಯಬೇಕೆಂಬುದರ ಕುರಿತು ನಮ್ಮ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ನಿರ್ಧರಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಇದಾದ ಬಳಿಕ ಲೋಕಸಭೆ ಸದನದ ಒಳಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮಮತಾ ಬ್ಯಾನರ್ಜಿ ಮಾತುಕತೆ ನಡೆಸುತ್ತಿರುವುದು ಕಂಡುಬಂದಿತು.

ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮುನ್ನವೇ ಮಮತಾ ಬ್ಯಾನರ್ಜಿ ಇಂಡಿಯಾ ಬಣವನ್ನು ಬೆಂಬಲಿಸಿ ಬಂದಿದ್ದರೂ, ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿಯ ಹೇಳಿಕೆ ಮತ್ತೊಮ್ಮೆ ಟಿಎಂಸಿ ಮತ್ತು ಕಾಂಗ್ರೆಸ್ ನಡುವಿನ ಸಂಬಂಧದ ಬಗ್ಗೆ ಪ್ರಶ್ನೆಯನ್ನು ಹುಟ್ಟುಹಾಕಿದೆ. ಈ ಹಿಂದೆ, ಸೀಟು ಹಂಚಿಕೆ ಯೋಜನೆಯನ್ನು ರೂಪಿಸಲು ವಿಫಲವಾದ ಮಮತಾ ಪಕ್ಷವು ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಹೋರಾಡಲು ನಿರ್ಧರಿಸಿತ್ತು.

ಇದನ್ನೂ ಓದಿ: ಲೋಕಸಭೆ ಸ್ಪೀಕರ್ ಚುನಾವಣೆ; ನಾಳೆ ಸದನಕ್ಕೆ ಹಾಜರಾಗುವಂತೆ ಬಿಜೆಪಿ, ಕಾಂಗ್ರೆಸ್ ಸಂಸದರಿಗೆ ವಿಪ್ ಜಾರಿ

ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಇಂಡಿಯಾ ಬಣಕ್ಕೆ ತಮ್ಮ ಪಕ್ಷವು “ಬಾಹ್ಯ ಬೆಂಬಲ” ನೀಡಲಿದೆ ಎಂದು ಪ್ರಚಾರದ ಸಮಯದಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದರು.

7 ಬಾರಿ ಲೋಕಸಭೆ ಸಂಸದರಾಗಿರುವ ಕೆ. ಸುರೇಶ್ ಅವರು ಸ್ಪೀಕರ್‌ಗೆ ವಿರೋಧ ಪಕ್ಷದ ಆಯ್ಕೆಯಾಗಿದ್ದು, ಅವರು ಬಿಜೆಪಿಯ ಓಂ ಬಿರ್ಲಾ ವಿರುದ್ಧ ಸ್ಪರ್ಧಿಸಲಿದ್ದಾರೆ. ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ಬುಧವಾರ ಬೆಳಗ್ಗೆ 11 ಗಂಟೆಗೆ ಚುನಾವಣೆ ನಡೆಯಲಿದ್ದು, ಎನ್‌ಡಿಎ ಗೆಲ್ಲುವ ಸಂಖ್ಯಾಬಲ ಹೊಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:44 pm, Tue, 25 June 24