ಸಿದ್ದರಾಮಯ್ಯ ಅವರೇ! ನಿಮ್ಮ ನಾಯಕನನ್ನ ನೋಡಲು 2000 ಜನ ಬರ್ತಿಲ್ಲ, ಅಸ್ಸಾಂ ಸಿಎಂ ಟಾಂಗ್
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂನಲ್ಲಿ ಅಡ್ಡಿಯಾಗಿದ್ದು, ಈ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಘರ್ಷಣೆ ಉಂಟಾಗಿದೆ. ಇನ್ನು ಈ ಸಂಬಂಧ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್ಗೆ ಅಸ್ಸಾಂ ಸಿಎಂ ಪ್ರತಿಕ್ರಿಯಿಸಿ , ಸಿದ್ದರಾಮಯ್ಯ ಅವರೇ! ನಿಮ್ಮ ನಾಯಕನನ್ನ ನೋಡಲು 2000 ಜನ ಬರ್ತಿಲ್ಲ ಲೇವಡಿ ಮಾಡಿದ್ದಾರೆ.
ಗುವಾಹಟ್ಟಿ, ಜನವರಿ, 23): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಆರಂಭಿಸಿರುವ ಭಾರತ್ ಜೋಡೋ ನ್ಯಾಯ ಯಾತ್ರೆಗೆ (Bharat Jodo Nyay Yatre) ಅಸ್ಸಾಂನಲ್ಲಿ ಅಡ್ಡಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಘರ್ಷಣೆ ಉಂಟಾಗಿದೆ. ರಾಹುಲ್ ಗಾಂಧಿ ಯಾತ್ರೆಗೆ ಅಸ್ಸಾಂ ಸರ್ಕಾರವೇ ತಡೆಹಿಡಿದಿದೆ ಎಂದು ಇತ್ತ ಕರ್ನಾಟಕದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಇನ್ನು ಘಟನೆ ಸಂಬಂಧ ಸಿದ್ದರಾಮಯ್ಯ ಟ್ವೀಟ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಪ್ರತಿಕ್ರಿಯಿಸಿ, ನಿಮ್ಮ ನಾಯಕನನ್ನು ನೋಡಲು 2000 ಜನರು ಸಹ ಬಂದಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.
ಸಿದ್ದರಾಮಯ್ಯನವರ ಟ್ವೀಟ್ ರಿಪ್ಲೈ ಮಾಡಿರುವ ಹಿಮಂತ್ ಬಿಸ್ವಾ ಶರ್ಮಾ, ಸಿದ್ದರಾಮಯ್ಯ ಅವರೇ, 50000 ಸಾವಿರನಾ? 500ಕ್ಕೂ ಅಧಿಕ ಕಿಲೋಮೀಟರ್ ಪ್ರಯಾಣದ ಉದ್ದಕ್ಕೂ 2,000 ಜನರು ಒಂದೇ ಸ್ಥಳದಲ್ಲಿ ಅವರನ್ನು ನೋಡಲು ಬರಲಿಲ್ಲ. ದಯವಿಟ್ಟು ನೀವು ಪೋಸ್ಟ್ ಮಾಡಿದ ವೀಡಿಯೊವನ್ನು ನೋಡಿ ಮತ್ತು ಜನರ ಸಂಖ್ಯೆಯನ್ನು ಲೆಕ್ಕ ಹಾಕಿ ಎಂದು ಲೇವಡಿ ಮಾಡಿದ್ದಾರೆ.
Siddaramaiah avare,
50,000? Throughout the 500+ km journey not even 2,000 people came to see him at one place . Please look at the video you have posted and count the number of people.
Assam is with Ram and not with Ravana. https://t.co/X6H81eGc3P
— Himanta Biswa Sarma (@himantabiswa) January 23, 2024
ಅಷ್ಟಕ್ಕೂ ಸಿದ್ದರಾಮಯ್ಯ ಟ್ವೀಟ್ನಲ್ಲೇನಿದೆ?
ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ. ಗೂಂಡಾಗಳನ್ನು ಬಿಟ್ಟು ಕಲ್ಲು ಹೊಡೆಸಿ, ಬೆದರಿಕೆ ಒಡ್ಡುವ ಮೂಲಕ ಭಾರತೀಯರ ನ್ಯಾಯದ ಕೂಗನ್ನು ಅಡಗಿಸಬಹುದು ಎಂದು ಭಾವಿಸಿದ್ದರೆ ಅದು ನಿಮ್ಮ ಭ್ರಮೆ. ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರೇ ರಾಹುಲ್ ಗಾಂಧಿ ಅವರ ಜೊತೆ ನಾನಿದ್ದೇನೆ, ನನ್ನಂತಹ ಕೋಟ್ಯಂತರ ಭಾರತೀಯರಿದ್ದಾರೆ. ಅನ್ಯಾಯದ ಕಾಡ್ಗಿಚ್ಚನ್ನು ಆರಿಸಿ, ನ್ಯಾಯದ ಹಣತೆ ಬೆಳಗುವ ವರೆಗೆ ನಾವು ವಿರಮಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಕೆಲ ವಿಡಿಯೋಗಳ ಸಮೇತ ಟ್ವೀಟ್ ಮಾಡಿದ್ದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಇನ್ನು ಅಸ್ಸಾಂನಲ್ಲಿ ರಾಹುಲ್ ಗಾಂಧಿಯವರ ಭಾರತ ಐಕ್ಯತಾ ನ್ಯಾಯ ಯಾತ್ರೆಗೆ ಅಡ್ಡಿಪಡಿಸುತ್ತಿರುವುದನ್ನು ವಿರೋಧಿಸಿ ಇತ್ತ ಕರ್ನಾಟಕದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.