AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸರ್ಕಾರಗಳು ಉಚಿತವಾಗಿಯೇ ಲಸಿಕೆ ನೀಡುತ್ತವೆ..ನೀವು ಇದರಲ್ಲಿ ಹಸ್ತಕ್ಷೇಪ ಮಾಡಬೇಡಿ; ಸುಪ್ರೀಂಕೋರ್ಟ್​ಗೆ ಕೇಂದ್ರದ ಅಫಿಡವಿಟ್​

ಕೊವಿಡ್ 19 ಸಾಂಕ್ರಾಮಿಕ ರೋಗ ನಿಯಂತ್ರಣದ ಬಗ್ಗೆ ನೀವು ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರವಾಗಿ ತಿಳಿಸಬೇಕು ಎಂದು ಸುಪ್ರೀಂಕೋರ್ಟ್​ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.

ರಾಜ್ಯಸರ್ಕಾರಗಳು ಉಚಿತವಾಗಿಯೇ ಲಸಿಕೆ ನೀಡುತ್ತವೆ..ನೀವು ಇದರಲ್ಲಿ ಹಸ್ತಕ್ಷೇಪ ಮಾಡಬೇಡಿ; ಸುಪ್ರೀಂಕೋರ್ಟ್​ಗೆ ಕೇಂದ್ರದ ಅಫಿಡವಿಟ್​
ಸುಪ್ರೀಂ ಕೋರ್ಟ್​
Lakshmi Hegde
|

Updated on: May 10, 2021 | 11:58 AM

Share

ಕೇಂದ್ರ ಸರ್ಕಾರದ ಕೊವಿಡ್​ 19 ಲಸಿಕೆ ನೀತಿಯ ಬಗ್ಗೆ ಅಪಸ್ವರ ಎದ್ದಿದ್ದ ಬೆನ್ನಲ್ಲೇ ಸುಪ್ರೀಂಕೋರ್ಟ್​ ಅಫಿಡವಿಟ್ ಸಲ್ಲಿಸಲು ಹೇಳಿತ್ತು. ಅದರಂತೆ 218 ಪೇಜ್​ಗಳ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ ತನ್ನ ಕೊರೊನಾ ಲಸಿಕೆ ನೀತಿಯನ್ನು ಸಮರ್ಥಿಸಿಕೊಂಡಿದೆ. ಅಲ್ಲದೆ, ಈ ವಿಚಾರದಲ್ಲಿ ನ್ಯಾಯಾಂಗ ಹಸ್ತಕ್ಷೇಪ ಮಾಡಬಾರದು. ಕಾರ್ಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇಡಬೇಕು ಎಂದು ಹೇಳಿದೆ.

ಕೊವಿಡ್ 19 ಸಾಂಕ್ರಾಮಿಕ ರೋಗ ನಿಯಂತ್ರಣದ ಬಗ್ಗೆ ನೀವು ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರವಾಗಿ ತಿಳಿಸಬೇಕು ಎಂದು ಸುಪ್ರೀಂಕೋರ್ಟ್​ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ, ಕೊರೊನಾ ರೋಗಿಗಳಿಗೆ ಸುಗಮವಾಗಿ ಚಿಕಿತ್ಸೆ ನೀಡುವ ದೃಷ್ಟಿಯಿಂದ ಮೂರು ರೀತಿಯ ಆರೋಗ್ಯ ವ್ಯವಸ್ಥೆಯನ್ನು ರೂಪಿಸಲಾಗಿದೆ. ಕೊರೊನಾ ಸೌಮ್ಯ ಲಕ್ಷಣ ಇರುವವರಿಗಾಗಿ ಕೊವಿಡ್ ಕಾಳಜಿ ಕೇಂದ್ರ, ಜಾಸ್ತಿ ಲಕ್ಷಣವುಳ್ಳವರಿಗಾಗಿ ಕೊವಿಡ್ ಹೆಲ್ತ್​ ಸೆಂಟರ್​ ಮತ್ತು ಗಂಭೀರ ಪರಿಸ್ಥಿತಿ ಇರುವವರಿಗಾಗಿ ಕೊವಿಡ್ ಆಸ್ಪತ್ರೆಗಳನ್ನು ನಿಗದಿಪಡಿಸಲಾಗಿದೆ ಎಂದು ವಿವರಿಸಿದೆ. ಹಾಗೇ, ಈ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯಲು ಆರ್​ಟಿ-ಪಿಸಿಆರ್​ ಅಥವಾ ರ್ಯಾಪಿಡ್​ ಆ್ಯಂಟಿಜೆನ್​ ಟೆಸ್ಟ್ ವರದಿ ಕಡ್ಡಾಯವಲ್ಲ. ಶಂಕಿತ ರೋಗಿಗಳೂ ಕೂಡ ಅಡ್ಮಿಟ್ ಆಗಬಹುದು ಎಂದು ತಿಳಿಸಿದೆ. ಹಾಗೇ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು 5ನೇ ವರ್ಷದಲ್ಲಿ ಮೆಡಿಕಲ್​ ಓದುತ್ತಿರುವವರನ್ನೂ ನೇಮಿಸಲಾಗಿದೆ. ಈ ಮೂಲಕ ಚಿಕಿತ್ಸೆ ನೀಡುವ ವೇಗವನ್ನು ಜಾಸ್ತಿ ಮಾಡಲಾಗಿದೆ ಎಂದು ಕೋರ್ಟ್​ಗೆ ತಿಳಿಸಿದೆ.

ಲಸಿಕೆ ಉತ್ಪಾದನೆ ಇತ್ತೀಚೆಗಷ್ಟೇ ಶುರುವಾಗಿದೆ ಜಗತ್ತಿನಾದ್ಯಂತ ಲಸಿಕೆ ಉತ್ಪಾದನೆ ಇತ್ತೀಚೆಗಷ್ಟೇ ಶುರುವಾಗಿದೆ. ಲಸಿಕೆ ಸೀಮಿತವಾಗಿ ಲಭ್ಯವಾಗುತ್ತಿರುವ ಕಾರಣದಿಂದಲೇ ವಿಶ್ವದ ಪ್ರತಿ ದೇಶವೂ ಆದ್ಯತೆ ಮೇರೆಗೆ ಅದನ್ನು ವಿತರಿಸುತ್ತಿದೆ. ಭಾರತದಲ್ಲೂ ಕೂಡ ಹಂತಹಂತವಾಗಿ, ಕೊವಿಡ್ ನಿಂದ ಅಪಾಯ ಯಾರಿಗೆ ಜಾಸ್ತಿ ಇದೆ ಎಂಬುದನ್ನು ಅವಲೋಕಿಸಿಕೊಂಡು ಲಸಿಕೆ ನೀಡಲಾಗುತ್ತಿದೆ. ಆಯಾ ರಾಜ್ಯಗಳಲ್ಲಿನ ಜನಸಂಖ್ಯೆಯನ್ನು ಆಧರಿಸಿಯೇ ಲಸಿಕೆ ಹಂಚಿಕೆ ಮಾಡಲಾಗುತ್ತದೆ ಎಂದೂ ತಿಳಿಸಿದೆ.

ಲಸಿಕೆ ಬೆಲೆ ಬಗ್ಗೆ ಹೇಳಿದ್ದೇನು? ಎಲ್ಲ ರಾಜ್ಯಗಳಿಗೂ ಕೊರೊನಾ ಲಸಿಕೆ ಬೆಲೆಯನ್ನು ಏಕರೂಪವಾಗಿಯೇ ನಿಗದಿ ಮಾಡಲಾಗಿದೆ. ಕೊವಿಡ್​ 19 ವ್ಯಾಕ್ಸಿನ್​ ಬೆಲೆ ಅದನ್ನು ಪಡೆಯುವ ಅಂತಿಮ ಫಲಾನುಭವಿಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಬಹುತೇಕ ಎಲ್ಲ ರಾಜ್ಯ ಸರ್ಕಾರಗಳೂ ತಮ್ಮಲ್ಲಿನ ನಾಗರಿಕರಿಗೆ ಉಚಿತವಾಗಿಯೇ ಲಸಿಕೆ ನೀಡುವ ಘೋಷಣೆ ಮಾಡಿದ್ದರಿಂದ ನಾಗರಿಕರಿಗೆ ತೊಂದರೆ ಆಗುವುದಿಲ್ಲ ಎಂದು ಅಫಿಡಿವಿಟ್​​ನಲ್ಲಿ ಹೇಳಿದೆ. ಆದರೆ ಲಸಿಕೆ ವಿಚಾರದಲ್ಲಿ ಖಾಸಗಿ-ಸರ್ಕಾರಿ ಆಸ್ಪತ್ರೆಗಳಿಗೆ ಏಕರೂಪದ ಬೆಲೆ ನಿಗದಿ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ, ಈ ವಿಚಾರದಲ್ಲಿ ನಮ್ಮ ಮೇಲೆ ನಂಬಿಕೆ ಇಡಬೇಕು ಎಂದೂ ಕೇಳಿಕೊಂಡಿದೆ.

ಇದನ್ನೂ ಓದಿ: Kangana Ranaut: ಟ್ವಿಟರ್​ನಿಂದ ಹೊರದಬ್ಬಿಸಿಕೊಂಡ ಕಂಗನಾ ಇನ್​ಸ್ಟಾಗ್ರಾಮ್​ನಲ್ಲಿ ಒಂದು ವಾರ ಉಳಿಯೋದು ಕೂಡ ಅನುಮಾನ

ಜೂನಿಯರ್ ಆರ್ಟಿಸ್ಟ್‌ಗಳಿಗೆ ಪಡಿತರ ಕಿಟ್ ವಿತರಣೆ; ಮಾನವೀಯತೆ ಮೆರೆದ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್

Not to interfere in vaccine policy centre Asks to Supreme Court in its affidavit

ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ