ಕೇಂದ್ರ ಸಾಹಿತ್ಯ ಅಕಾಡೆಮಿ 2023ರ ಪ್ರಶಸ್ತಿ ಪ್ರಕಟ: ಲೇಖಕ, ಚಿಂತಕ ಲಕ್ಷ್ಮೀಶ ತೋಳ್ಪಾಡಿಗೆ ಪ್ರಶಸ್ತಿ

ಖ್ಯಾತ ಲೇಖಕ, ಚಿಂತಕ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ  ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 2023ರ ಸಾಲಿನ ಪ್ರಶಸ್ತಿ ಘೋಷಣೆ ಆಗಿದ್ದು ಪ್ರಬಂಧ ವಿಭಾಗಲ್ಲಿ ತೋಳ್ಪಾಡಿ ಅವರ ಮಹಾಭಾರತ ಅನುಸಂಧಾನದ ಭಾರತಯಾತ್ರೆಗೆ ಈ ಪ್ರಶಸ್ತಿ ಬಂದಿದೆ ಎಂದು ಸಾಹಿತ್ಯ ಅಕಾಡೆಮಿ ಪ್ರಕಟಣೆ ತಿಳಿಸಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ 2023ರ ಪ್ರಶಸ್ತಿ ಪ್ರಕಟ: ಲೇಖಕ, ಚಿಂತಕ ಲಕ್ಷ್ಮೀಶ ತೋಳ್ಪಾಡಿಗೆ ಪ್ರಶಸ್ತಿ
ಲಕ್ಷ್ಮೀಶ ತೋಳ್ಪಾಡಿ
Follow us
ರಶ್ಮಿ ಕಲ್ಲಕಟ್ಟ
|

Updated on:Dec 20, 2023 | 6:24 PM

ದೆಹಲಿ ಡಿಸೆಂಬರ್ 20: 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (Kendra Sahitya Akademi Award) ಪ್ರಕಟವಾಗಿದೆ. 24 ಭಾಷೆಗಳಿಗೆ ಪ್ರಶಸ್ತಿ ಪ್ರಕಟವಾಗಿದ್ದು ಇದರಲ್ಲಿ ಪ್ರಬಂಧ ವಿಭಾಗದಲ್ಲಿ ಕನ್ನಡದ ಖ್ಯಾತ  ಚಿಂತಕ, ಲೇಖಕ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ (Lakshmeesha tolpadi) ಅವರ ಕೃತಿಗೆ ಪ್ರಶಸ್ತಿ ಲಭಿಸಿದೆ. ಮಹಾಭಾರತ ಅನುಸಂಧಾನದ ಭಾರತಯಾತ್ರೆ ಪ್ರಬಂಧಕ್ಕೆ ಈ ಗೌರವ ಸಿಕ್ಕಿದೆ ಎಂದು ಸಾಹಿತ್ಯ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

ಲಕ್ಷೀಶ ತೋಳ್ಪಾಡಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಶಾಂತಿಗೋಡು ಗ್ರಾಮದವರು. ಭಗವದ್ಗೀತೆಯ ಬಗೆಗಿನ ‘ಮಹಾಯುದ್ದಕ್ಕೆ ಮುನ್ನ’ ಮೊದಲ ಪ್ರಕಟಿತ ಕೃತಿ. ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ, ಸಂಪಿಗೆ ಭಾಗವತ,ಬಾಳು ಸಾವು ಒಡ್ಡುತ್ತಿರುವ ಆಮಿಷ, ಆನಂದ ಲಹರೀ,ಭಕ್ತಿಯ ನೆಪದಲ್ಲಿ,ಭವ ತಲ್ಲಣ’ (ತಾಳಮದ್ದಲೆ ಕುರಿತು) ಕೃತಿಗಳು ಪ್ರಕಟವಾಗಿವೆ.

ಮಲಯಾಳಂ ಭಾಷೆಯಲ್ಲಿ ಖ್ಯಾತ ಬರಹಗಾರ ಇ.ವಿ. ರಾಮಕೃಷ್ಣನ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ.ಮಾತೃಭೂಮಿ ಬುಕ್ಸ್‌ ಪ್ರಕಟಿಸಿದ ‘ಮಲಯಾಳ ನೋವೆಲಿಂಡೆ ದೇಶ ಕಾಲಂಞಳ್’ ಕೃತಿಗೆ ಈ ಪ್ರಶಸ್ತಿ ಲಭಿಸಿದೆ. ರಾಮಕೃಷ್ಣನ್ ಅವರು ಸಾಹಿತ್ಯ ವಿಮರ್ಶೆಗಾಗಿ ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ಓಡಕ್ಕುಝಲ್ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: ಶಿಕ್ಷಕ ವೃತ್ತಿ ಬಿಟ್ಟು ಜಾನಪದ ಸಂಗೀತ ಉಸಿರಾಗಿಸಿಕೊಂಡ ಕೋಲಾರದ ಗೋ.ನಾ. ಸ್ವಾಮಿಗೆ ಕಾಸರಗೋಡಿನ ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಒಡಿಯಾದ ಖ್ಯಾತ ಕವಿ ಅಶುತೋಷ್ ಪರಿದಾ  ‘ಅಪ್ರಸ್ತುತ ಮೃತ್ಯು’ ಕವನ ಸಂಕಲಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಹಿಂದಿ ಭಾಷೆಯಲ್ಲಿ ಸಂಜೀವ್ ಅವರ ‘ಮುಜೆ ಪಹಚಾನೋ’ ಕಾದಂಬರಿಗೆ, ಇಂಗ್ಲಿಷ್ ಭಾಷೆಯಲ್ಲಿ ನೀಲಂ ಶರಣ್ ಗೌರ್ ಅವರ Requiem in Raga Janki  ಮತ್ತು ಉರ್ದು ಭಾಷೆಯಲ್ಲಿ ನವಾಬ್ ಸಹರ್ ಅವರ ‘ರಾಜದೇವ್ ಕಿ ಅಮರಾಯಿ’ ಕೃತಿಗೆ ಪ್ರಶಸ್ತಿ ಸಂದಿದೆ.

ಕಾದಂಬರಿಕಾರ ಕೃಷ್ಣತ್ ಖೋಟ್ ಅವರ ಮರಾಠಿಯಲ್ಲಿನ ‘ರಿಂಗಾನ’ ಪುಸ್ತಕ ಮತ್ತು ಕೊಂಕಣಿಯಲ್ಲಿ ಪ್ರಕಾಶ್ ಪರ್ಯಾಕರ್ ಅವರ ಕಥಾ ಸಂಕಲನ ‘ವರ್ಸಲ್’ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ.

ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿ ಡಾ. ಶ್ರೀನಿವಾಸ ರಾವ್ ಅವರು ಹಿಂದಿ ಹೊರತುಪಡಿಸಿ ಇತರ ಭಾಷೆಗಳಲ್ಲಿ ವಿಜೇತರ ಹೆಸರನ್ನು ಪ್ರಕಟಿಸಿದರು. ಪ್ರಶಸ್ತಿ ವಿಜೇತರು ಮಾರ್ಚ್ 12, 2024 ರಂದು ನವದೆಹಲಿಯ ಕಮಾನಿ ಸಭಾಂಗಣದಲ್ಲಿ ಈ ಗೌರವವನ್ನು ಸ್ವೀಕರಿಸುತ್ತಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:45 pm, Wed, 20 December 23

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ