ಕಾಶ್ಮೀರದಲ್ಲಿ ಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ವೇಳೆ ಇನ್ನು ಯಾರೂ ದುಷ್ಕೃತ್ಯ ಎಸಗುವ ಧೈರ್ಯ ಮಾಡುವುದಿಲ್ಲ; ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 14ರಿಂದ ಮೂರು ದಿನಗಳ ಗುಜರಾತ್ ಭೇಟಿ ಆರಂಭಿಸಿದ್ದಾರೆ. ಇಂದು ಗಾಂಧಿನಗರ ಜಿಲ್ಲೆಯ ಕಲೋಲ್​ನಲ್ಲಿ ಮಾತನಾಡಿದ ಅಮಿತ್ ಶಾ, ಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ಶ್ರೀನಗರದ ಲಾಲ್ ಚೌಕ್ ಮೂಲಕ ಹಾದುಹೋಗುವಾಗ ಇನ್ನು ಯಾರೂ ದುಷ್ಕೃತ್ಯ ಎಸಗಲು ಧೈರ್ಯ ಮಾಡುವುದಿಲ್ಲ ಎಂದಿದ್ದಾರೆ. ಈ ವೇಳೆ ಅಮಿತ್ ಶಾ 194 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಮತ್ತು ಶಂಕುಸ್ಥಾಪನೆ ಮಾಡಿದರು.

ಕಾಶ್ಮೀರದಲ್ಲಿ ಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ವೇಳೆ ಇನ್ನು ಯಾರೂ ದುಷ್ಕೃತ್ಯ ಎಸಗುವ ಧೈರ್ಯ ಮಾಡುವುದಿಲ್ಲ; ಅಮಿತ್ ಶಾ
Amit Shah
Follow us
ಸುಷ್ಮಾ ಚಕ್ರೆ
|

Updated on: Jan 15, 2025 | 7:37 PM

ಅಹಮದಾಬಾದ್: 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. ಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ಶ್ರೀನಗರದ ಲಾಲ್ ಚೌಕ್ ಮೂಲಕ ಹಾದುಹೋಗುವಾಗ ಇನ್ನು ಯಾರೂ ದುಷ್ಕೃತ್ಯ ಎಸಗಲು ಧೈರ್ಯ ಮಾಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.

ಗುಜರಾತ್​ನ ಗಾಂಧಿನಗರ ಜಿಲ್ಲೆಯ ಕಲೋಲ್‌ನಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಜಾರಿಗೆ ತಂದವರು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು. 370ನೇ ವಿಧಿಯ ಅಡಿಯಲ್ಲಿ ಈ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಯಿತು. ಆದರೆ, 2019ರಲ್ಲಿ 370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ, ಪ್ರಧಾನಿ ನರೇಂದ್ರ ಮೋದಿ ಭಾರತೀಯರಿಗೆ ಭಾರತದ ಸ್ವಾಭಿಮಾನ ಮತ್ತು ಅದರ ಗೌರವಕ್ಕಿಂತ ದೊಡ್ಡದು ಏನೂ ಇಲ್ಲ ಎಂದು ಜಗತ್ತಿಗೆ ಸ್ಪಷ್ಟ ಸಂದೇಶವನ್ನು ನೀಡಿದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನವಿ ಮುಂಬೈನಲ್ಲಿ ಏಷ್ಯಾದ 2ನೇ ಅತಿದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

ಈ ವೇಳೆ ಅಮಿತ್ ಶಾ 194 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಮತ್ತು ಶಂಕುಸ್ಥಾಪನೆ ಮಾಡಿದರು. “ಶ್ರೀನಗರದ ಲಾಲ್ ಚೌಕ್‌ನಲ್ಲಿ ತ್ರಿವರ್ಣ ಧ್ವಜ ಹಾರಿಸಲು ಸೈನ್ಯದ ಬೆಂಬಲ ಅಗತ್ಯವಿತ್ತು. ಆದರೆ ಇಂದು, ಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ಲಾಲ್ ಚೌಕ್ ಮೂಲಕ ಹಾದುಹೋದಾಗ ಯಾರೂ ಯಾವುದೇ ದುಷ್ಕೃತ್ಯ ಮಾಡಲು ಧೈರ್ಯ ಮಾಡುವುದಿಲ್ಲ” ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು.

ಗುಜರಾತ್‌ನಿಂದ ಬಂದ ಸುಮಾರು 2.80 ಕೋಟಿ ಪ್ರವಾಸಿಗರು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಅವರು ಯಾವುದೇ ಸಮಸ್ಯೆಗಳನ್ನು ಎದುರಿಸದೆ ಸುರಕ್ಷಿತವಾಗಿ ಮರಳಿದ್ದಾರೆ. ಈ ರೂಪಾಂತರವು ಪ್ರಧಾನಿ ಮೋದಿಯವರ ಕಠಿಣ ಪರಿಶ್ರಮ, ಸೂಕ್ಷ್ಮ ಮತ್ತು ಎಚ್ಚರಿಕೆಯ ನಾಯಕತ್ವದ ಫಲಿತಾಂಶವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ

ಪ್ರಧಾನ ಮಂತ್ರಿ ಮೋದಿಯವರ ನಾಯಕತ್ವದಲ್ಲಿ ಭಾರತವು ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಯಿತು. 2027ರಲ್ಲಿ ನಾವು ಮೂರನೇ ಸ್ಥಾನವನ್ನು ತಲುಪುವುದು ಖಚಿತ. 2047ರ ವೇಳೆಗೆ ಭಾರತವನ್ನು ನಂಬರ್ ಒನ್ ದೇಶವನ್ನಾಗಿ ಮಾಡುವ ಗುರಿಯನ್ನು ನಾವು ಹೊಂದಿದ್ದೇವೆ. ದೇವರು ನಮ್ಮ ಪ್ರಯತ್ನದಲ್ಲಿ ಖಂಡಿತವಾಗಿಯೂ ನಮಗೆ ಸಹಾಯ ಮಾಡುತ್ತಾನೆ ಎಂದು ಗಾಂಧಿನಗರದ ಲೋಕಸಭಾ ಸಂಸದ ಅಮಿತ್ ಶಾ ಹೇಳಿದ್ದಾರೆ.

ಗಾಂಧಿನಗರ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಸನಂದ್ ಮತ್ತು ಕಲೋಲ್ ಸೇರಿದಂತೆ 7 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಜಯ ಗಳಿಸಿದ್ದಕ್ಕಾಗಿ ಅವರು ಈ ಪ್ರದೇಶದ ಜನರಿಗೆ ಧನ್ಯವಾದ ಅರ್ಪಿಸಿದರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಂತಹ ಭರವಸೆಗಳನ್ನು ಈಡೇರಿಸುವ ಮೋದಿಯವರ ಬದ್ಧತೆಯಿಂದಾಗಿ ದೇಶದ ಜನರು ಬಿಜೆಪಿಯನ್ನು ಆರಿಸಿಕೊಂಡರು ಎಂದು ಅಮಿತ್ ಶಾ ಹೇಳಿದರು.

“ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತದೆ ಎಂದು ಯಾರೂ ನಂಬಿರಲಿಲ್ಲ. ಆದರೆ ಇಂದು, ರಾಮ ಲಲ್ಲಾ ಆ ಭವ್ಯ ಮಂದಿರದಲ್ಲಿ ಕುಳಿತಿದ್ದಾನೆ. ನಕ್ಸಲಿಸಂ ಮತ್ತು ಭಯೋತ್ಪಾದನೆಯನ್ನು ದೇಶದಿಂದ ಕಿತ್ತುಹಾಕಿದವರು ಪ್ರಧಾನಿ ಮೋದಿ” ಎಂದು ಅಮಿತ್ ಶಾ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ