AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡ ರೋಗಿಗಳಿಗೆ ಕೇಂದ್ರದಿಂದ ಸಿಹಿ ಸುದ್ದಿ: ಬಿಪಿ, ಮಧುಮೇಹ ಸೇರಿ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಕೇಂದ್ರ ಸರ್ಕಾರದಿಂದ ನೆಮ್ಮದಿಯ ಸುದ್ದಿ ಸಿಕ್ಕಿದೆ. ರಾಷ್ಟ್ರೀಯ ಔಷಧ ದರ ನಿಯಂತ್ರಣ ಪ್ರಾಧಿಕಾರ (NPPA) 39 ಅಗತ್ಯ ಔಷಧಿಗಳ ಚಿಲ್ಲರೆ ಬೆಲೆಗೆ ಮಿತಿ ನಿಗದಿಪಡಿಸಿದ್ದು, ಇದರಿಂದ ಲಕ್ಷಾಂತರ ರೋಗಿಗಳ ಚಿಕಿತ್ಸಾ ವೆಚ್ಚ ಕಡಿಮೆಯಾಗಲಿದೆ.

ಬಡ ರೋಗಿಗಳಿಗೆ ಕೇಂದ್ರದಿಂದ ಸಿಹಿ ಸುದ್ದಿ: ಬಿಪಿ, ಮಧುಮೇಹ ಸೇರಿ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ
ಸಾಂದರ್ಭಿಕ ಚಿತ್ರImage Credit source: TV9 Network
ಗಣಪತಿ ಶರ್ಮಾ
|

Updated on: Jul 11, 2026 | 12:27 PM

Share

ಮುಖ್ಯಾಂಶಗಳು

  • 39 ಅಗತ್ಯ ಔಷಧಿಗಳಿಗೆ ಬೆಲೆ ಮಿತಿ ನಿಗದಿ
  • ಹೊಸ ದರ ತಕ್ಷಣ ಜಾರಿಗೆ ಸೂಚನೆ
  • ಕ್ರೋನಿಕ್ ಡಿಸೀಸಸ್​ನಿಂದ ಬಳಲುತ್ತಿರುವವರಿಗೆ ಪ್ರಯೋಜನ

ನವದೆಹಲಿ, ಜುಲೈ 11: ಪ್ರತಿ ತಿಂಗಳು ಔಷಧಿಗಳಿಗೆ ಸಾವಿರಾರು ರೂಪಾಯಿ ವೆಚ್ಚ ಮಾಡುತ್ತಿರುವ ಲಕ್ಷಾಂತರ ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ವಿವಿಧ ದೀರ್ಘಕಾಲೀನ ಕಾಯಿಲೆಗಳ ಚಿಕಿತ್ಸೆಗೆ ಬಳಸುವ 39 ಅಗತ್ಯ ಔಷಧಿಗಳ ಚಿಲ್ಲರೆ ಬೆಲೆಗೆ (Retail Price) ಗರಿಷ್ಠ ಮಿತಿಯನ್ನು ನಿಗದಿಪಡಿಸಿ ರಾಷ್ಟ್ರೀಯ ಔಷಧ ದರ ನಿಯಂತ್ರಣ ಪ್ರಾಧಿಕಾರ (NPPA) ಆದೇಶ ಹೊರಡಿಸಿದೆ. ಇದರಿಂದ ಅಗತ್ಯ ಔಷಧಿಗಳ ಬೆಲೆ ತುಸು ಕಡಿಮೆಯಾಗುತ್ತದೆ.

ಈ ಕ್ರಮವನ್ನು ಡ್ರಗ್ಸ್ (ಪ್ರೈಸ್ ಕಂಟ್ರೋಲ್) ಆದೇಶ–2013 (DPCO, 2013) ಅಡಿಯಲ್ಲಿ ಜಾರಿಗೆ ತರಲಾಗಿದೆ. ಔಷಧ ಕಂಪನಿಗಳು ಇನ್ನು ಮುಂದೆ ಎನ್‌ಪಿಪಿಎ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಬೆಲೆಗೆ ಈ ಔಷಧಿಗಳನ್ನು ಮಾರಾಟ ಮಾಡುವಂತಿಲ್ಲ. ಜೊತೆಗೆ ಹೊಸ ಬೆಲೆಗಳನ್ನು ಔಷಧಿಗಳ ಪ್ಯಾಕ್‌ಗಳ ಗರಿಷ್ಠ ಚಿಲ್ಲರೆ ಬೆಲೆ (MRP)ಯಲ್ಲಿ ಕೂಡಲೇ ಪರಿಷ್ಕರಿಸುವಂತೆ ಸೂಚಿಸಲಾಗಿದೆ.

ಔಷಧಿಗೆ ಗರಿಷ್ಠ ದರ ಮಿತಿ: ಯಾರಿಗೆ ಹೆಚ್ಚು ಪ್ರಯೋಜನ?

ಮಧುಮೇಹ, ಬಿಪಿ ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವವರು ಸಾಮಾನ್ಯವಾಗಿ ವರ್ಷಗಳ ಕಾಲ ಅಥವಾ ಜೀವಮಾನವಿಡೀ ಔಷಧಿಗಳನ್ನು ಸೇವಿಸಬೇಕಾಗುತ್ತದೆ. ಸದ್ಯ ಗರಿಷ್ಠ ದರ ಮಿತಿ ನಿಗದಿಪಡಿಸಿರುವುದರಿಂದ ಔಷಧಿಗಳ ದರ ತುಸು ಪ್ರಮಾಣದಲ್ಲಿ ಇಳಿಕೆಯಾಗಲಿದೆ. ಇದರಿಂದ ತಿಂಗಳ ಹಾಗೂ ವಾರ್ಷಿಕ ವೆಚ್ಚದ ಲೆಕ್ಕದಲ್ಲಿ ಬಡ ಕುಟುಂಬಗಳಿಗೆ ಗಮನಾರ್ಹ ಉಳಿತಾಯವಾಗಲಿದೆ. ವಿಶೇಷವಾಗಿ ನಿವೃತ್ತರು, ಹಿರಿಯ ನಾಗರಿಕರು ಹಾಗೂ ಒಂದಕ್ಕಿಂತ ಹೆಚ್ಚು ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಈ ನಿರ್ಧಾರ ನೆರವಾಗಲಿದೆ.

ಕ್ಯಾಲ್ಸಿಯಂ, ವಿಟಮಿನ್-D3 ಮಾತ್ರೆಗಳಿಗೂ ದರ ನಿಗದಿ

ಮಧುಮೇಹ ಹಾಗೂ ಬಿಪಿ ಔಷಧಿಗಳ ಜೊತೆಗೆ ಕ್ಯಾಲ್ಸಿಯಂ ಮತ್ತು ವಿಟಮಿನ್-D3 ಮಾತ್ರೆಗಳ ಚಿಲ್ಲರೆ ದರವನ್ನು ಪ್ರತಿ ಮಾತ್ರೆಗೆ 8.93 (ಜಿಎಸ್‌ಟಿ ಸೇರಿ) ರೂ. ಎಂದು ಎನ್‌ಪಿಪಿಎ ನಿಗದಿಪಡಿಸಿದೆ. ಈ ಮಾತ್ರೆಗಳನ್ನು ಸಾಮಾನ್ಯವಾಗಿ ಹಿರಿಯ ನಾಗರಿಕರು, ಋತುಬಂಧದ ನಂತರದ ಮಹಿಳೆಯರು ಹಾಗೂ ಮೂಳೆ ದುರ್ಬಲತೆ ಇರುವವರಿಗೆ ವೈದ್ಯರು ಶಿಫಾರಸು ಮಾಡುತ್ತಾರೆ.

ರೇಬೀಸ್ ಚಿಕಿತ್ಸೆಯ ಔಷಧಿಗೂ ಪರಿಷ್ಕೃತ ದರ

ನಾಯಿ ಅಥವಾ ರೇಬೀಸ್ ಶಂಕಿತ ಪ್ರಾಣಿಗಳ ಕಡಿತದ ಬಳಿಕ ತುರ್ತು ಚಿಕಿತ್ಸೆಯಲ್ಲಿ ಬಳಸುವ ಆ್ಯಂಟಿ-ರೇಬೀಸ್ ಇಮ್ಯುನೊಗ್ಲೋಬುಲಿನ್ ಇಂಜೆಕ್ಷನ್‌ನ ಚಿಲ್ಲರೆ ದರವನ್ನು 119.48 ರೂ.ಗೆ ಪರಿಷ್ಕರಿಸಲಾಗಿದೆ. ಈ ಔಷಧಿ ರೇಬೀಸ್ ಲಸಿಕೆಯೊಂದಿಗೆ ನೀಡಲಾಗುತ್ತಿದ್ದು, ಸೋಂಕಿನ ವಿರುದ್ಧ ತಕ್ಷಣದ ರಕ್ಷಣೆಯನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಎಲ್ಲಾ ಔಷಧಿಗಳ ದರ ಇಳಿಕೆಯಾಗಲ್ಲ!

ಎನ್‌ಪಿಪಿಎ ನಿಗದಿಪಡಿಸಿರುವ ದರವು ಅಧಿಸೂಚನೆಯಲ್ಲಿ ಉಲ್ಲೇಖಿಸಿರುವ ನಿರ್ದಿಷ್ಟ ಔಷಧಿಗಳ ಸಂಯೋಜನೆ (Formulation) ಮತ್ತು ಪ್ರಮಾಣಕ್ಕೆ ಮಾತ್ರ ಅನ್ವಯಿಸುತ್ತದೆ. ಆದ್ದರಿಂದ ಎಲ್ಲಾ ಮಧುಮೇಹ ಅಥವಾ ಬಿಪಿ ಔಷಧಿಗಳ ಬೆಲೆ ಒಂದೇ ರೀತಿಯಲ್ಲಿ ಇಳಿಕೆಯಾಗುವುದಿಲ್ಲ. ವೈದ್ಯರು ಸೂಚಿಸಿರುವ ಔಷಧಿ ಈ ಪಟ್ಟಿಯಲ್ಲಿದ್ದರೆ ಮಾತ್ರ ಅದರ ಲಾಭ ಗ್ರಾಹಕರಿಗೆ ದೊರೆಯಲಿದೆ.

ರಾಷ್ಟ್ರದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ