ನೀಟ್, ನೆಟ್​ ಅಕ್ರಮ; ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮುಖ್ಯಸ್ಥ ಸುಬೋಧ್ ಕುಮಾರ್ ವಜಾ

2024ನೇ ಸಾಲಿನ ನೀಟ್ ಹಾಗೂ ನೆಟ್​​ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಡಿಜಿ ಸುಬೋಧ್​ ಕುಮಾರ್​ ಅವರನ್ನು ವಜಾಗೊಳಿಸಲಾಗಿದೆ. ಸುಪ್ರೀಂ ಕೋರ್ಟ್​ನಲ್ಲಿ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ (ಎನ್​​ಟಿಎ) ನೋಟಿಸ್ ನೀಡಲಾಗಿದೆ.

ನೀಟ್, ನೆಟ್​ ಅಕ್ರಮ; ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮುಖ್ಯಸ್ಥ ಸುಬೋಧ್ ಕುಮಾರ್ ವಜಾ
ಸುಬೋಧ್ ಕುಮಾರ್
Follow us
ಸುಷ್ಮಾ ಚಕ್ರೆ
|

Updated on: Jun 22, 2024 | 10:10 PM

ನವದೆಹಲಿ: ನೀಟ್-ಯುಜಿ (NEET-UG) ಮತ್ತು ಯುಜಿಸಿ- ನೆಟ್ (UGC-NET) ಪರೀಕ್ಷೆಗಳ ನಿರ್ವಹಣೆಯಲ್ಲಿ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ (Subodh Kumar Singh) ಅವರನ್ನು ಇಂದು (ಶನಿವಾರ) ರಾತ್ರಿ ಅವರ ಹುದ್ದೆಯಿಂದ ತೆಗೆದುಹಾಕಲಾಗಿದೆ. ಅವರನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಲ್ಲಿ ಕಡ್ಡಾಯ ಕಾಯುವಿಕೆಗೆ ಒಳಪಡಿಸಲಾಗಿದೆ.

ನೀಟ್, ನೆಟ್ ಪ್ರಕರಣದ ಕುರಿತು ಸಿಬಿಐ ತನಿಖೆಗೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್​ನಲ್ಲಿ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಗಿದೆ. ಈ ವೇಳೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ನೋಟಿಸ್ ಜಾರಿ ಮಾಡಲಾಗಿದೆ. ಹಾಗೇ, ಜುಲೈ 8ಕ್ಕೆ ವಿಚಾರಣೆ ಮುಂದೂಡಲಾಗಿದೆ.

ಕಳೆದ 2 ತಿಂಗಳುಗಳಲ್ಲಿ, ದೇಶದ 2 ದೊಡ್ಡ ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್ ಮತ್ತು ನೆಟ್​ನಲ್ಲಿ ಅಕ್ರಮಗಳು ಮತ್ತು ಪೇಪರ್ ಸೋರಿಕೆಗಳ ಕುರಿತು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಸತತವಾಗಿ ಮಧ್ಯಪ್ರವೇಶಿಸಿತ್ತು. ಇದೀಗ ಎನ್​ಟಿಎ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ಅವರನ್ನು ವಜಾಗೊಳಿಸಲಾಗಿದೆ.

NTA ಅಸ್ತಿತ್ವಕ್ಕೆ ಬಂದದ್ದು ಹೇಗೆ?:

2017ರಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಉನ್ನತ ಶಿಕ್ಷಣಕ್ಕೆ ಪ್ರವೇಶಕ್ಕಾಗಿ ಏಕ, ಸ್ವಾಯತ್ತ ಮತ್ತು ಸ್ವತಂತ್ರ ಏಜೆನ್ಸಿಯ ರಚನೆಯನ್ನು ಘೋಷಿಸಿತು. ಪ್ರವೇಶ ಪರೀಕ್ಷೆಗಳನ್ನು ದೋಷರಹಿತವಾಗಿಡುವ ಉದ್ದೇಶದಿಂದ ಸರ್ಕಾರವು ಅದರ ಸ್ಥಾಪನೆಯ ನಿರ್ಧಾರ ತೆಗೆದುಕೊಂಡಿತು. 2018ರ ಮಾರ್ಚ್ 1ರಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಅಸ್ತಿತ್ವಕ್ಕೆ ಬಂದಿತು.

ಇದನ್ನೂ ಓದಿ: NET Exam 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ಪರೀಕ್ಷೆ ರದ್ದುಗೊಳಿಸಿದ ಕೇಂದ್ರ ಶಿಕ್ಷಣ ಸಚಿವಾಲಯ

ಎನ್​ಟಿಎ ಸ್ಥಾಪನೆಯಾದಾಗಿನಿಂದ ಪ್ರತಿ ವರ್ಷ ಪರೀಕ್ಷೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. NTA ಅನ್ನು 2018ರಲ್ಲಿ ರಚಿಸಲಾಯಿತು. ಆದರೆ, ಅದು ಸ್ಥಾಪನೆಯಾದಾಗಿನಿಂದ ಪ್ರತಿ ವರ್ಷವೂ ಪರೀಕ್ಷೆಯಲ್ಲಿ ಅಕ್ರಮಗಳು ನಡೆಯುತ್ತಿರುವ ಆರೋಪಗಳಿವೆ. 2019ರಲ್ಲಿ ಜೆಇಇ ಮೇನ್ಸ್ ಸಮಯದಲ್ಲಿ ಸರ್ವರ್ ವೈಫಲ್ಯದಿಂದ ವಿದ್ಯಾರ್ಥಿಗಳು ತೊಂದರೆ ಎದುರಿಸಬೇಕಾಯಿತು. ಅಲ್ಲದೆ, ಕೆಲವೆಡೆ ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆ ವಿಳಂಬದ ಬಗ್ಗೆಯೂ ಆರೋಪಿಸಿದ್ದರು.

NEET ಪದವಿಪೂರ್ವ ವೈದ್ಯಕೀಯ ಪ್ರವೇಶ ಪರೀಕ್ಷೆ 2020ರಲ್ಲಿ NTA ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಲಾಯಿತು. ಪರೀಕ್ಷೆಯನ್ನು ಹಲವಾರು ಬಾರಿ ಮುಂದೂಡಬೇಕಾಯಿತು. ಈ ಪರೀಕ್ಷೆಯಲ್ಲಿ ಹಲವು ಅಕ್ರಮಗಳ ದೂರುಗಳು ವರದಿಯಾಗಿವೆ. ಪ್ರವೇಶ ಪರೀಕ್ಷೆಗಳನ್ನು ದೋಷರಹಿತವಾಗಿಸಲು NTA ಅನ್ನು ರಚಿಸಲಾಗಿದೆ. ಆದರೆ, NTA ಮಾದರಿಯು ಮತ್ತೆ ಮತ್ತೆ ವಿಫಲವಾಗುತ್ತಿದೆ. ಜೂನ್ 21ರ ರಾತ್ರಿ CSIR-UGC-NET ಪರೀಕ್ಷೆಯನ್ನು ಮುಂದೂಡಲಾಯಿತು. ಈ ಪರೀಕ್ಷೆಯು ಜೂನ್ 25 ಮತ್ತು 27ರ ನಡುವೆ ನಡೆಯಬೇಕಿತ್ತು. ಸಂಪನ್ಮೂಲಗಳ ಕೊರತೆಯೇ ಈ ಪರೀಕ್ಷೆಯನ್ನು ಮುಂದೂಡಲು ಕಾರಣ ಎನ್ನಲಾಗಿದೆ.

ಉತ್ತರ ಪ್ರದೇಶ, ಹರಿಯಾಣ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಬಿಹಾರ, ಜಾರ್ಖಂಡ್, ಒಡಿಶಾ, ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ, ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಇವು ದೇಶದ 15 ರಾಜ್ಯಗಳಾಗಿದ್ದು, ಅಲ್ಲಿ 41 ನೇಮಕಾತಿಗಳ ಪತ್ರಿಕೆಗಳಿವೆ. ಕಳೆದ 5 ವರ್ಷಗಳಲ್ಲಿ ಪರೀಕ್ಷೆಗಳು ಸೋರಿಕೆಯಾಗಿದ್ದವು. ಎಲ್ಲ ದೊಡ್ಡ ರಾಜ್ಯಗಳ ಕೋಟಿಗಟ್ಟಲೆ ವಿದ್ಯಾರ್ಥಿಗಳು ಇದರಿಂದ ತೊಂದರೆಗೊಳಗಾಗಿದ್ದಾರೆ. ನೀಟ್ ಪರೀಕ್ಷೆಯಲ್ಲಿನ ಅವ್ಯವಹಾರದ ನಂತರ ನಡೆದ ಪ್ರತಿಭಟನೆ ಈ ಕೋಪಕ್ಕೆ ಧ್ವನಿ ನೀಡಿದೆ.

ಇದನ್ನೂ ಓದಿ: ನೀಟ್ ಪೇಪರ್ ಸೋರಿಕೆಯಲ್ಲಿ ತೇಜಸ್ವಿ ಯಾದವ್ ಆಪ್ತನ ಕೈವಾಡ; ಬಿಹಾರದ ಡಿಸಿಎಂ ಆರೋಪ

ಸುಬೋಧ್ ಕುಮಾರ್ ಸಿಂಗ್ ಯಾರು?:

ಉತ್ತರ ಪ್ರದೇಶ ಮೂಲದ ಸುಬೋಧ್ ಕುಮಾರ್ ಅವರು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ರೂರ್ಕಿಯಿಂದ ಎಂಜಿನಿಯರಿಂಗ್‌ನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮತ್ತು ಇಂದಿರಾ ಗಾಂಧಿ ನ್ಯಾಷನಲ್ ಓಪನ್ ಯೂನಿವರ್ಸಿಟಿ (IGNOU), ನವದೆಹಲಿಯಿಂದ MBA ಪದವಿ ಪಡೆದಿದ್ದಾರೆ. ಕಳೆದ ಜೂನ್‌ನಲ್ಲಿ ಅವರು ಎನ್​ಟಿಎ ಮಹಾನಿರ್ದೇಶಕರಾಗಿ (ಡಿಜಿ) ಅಧಿಕಾರ ವಹಿಸಿಕೊಳ್ಳುವ ಮೊದಲು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಅಡಿಯಲ್ಲಿ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಅವರು ರಾಜ್ಯದಲ್ಲಿ 3 ಬಾರಿ ಬಿಜೆಪಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರ ಅಡಿಯಲ್ಲಿ 2009ರಿಂದ 2018ರವರೆಗೆ ಛತ್ತೀಸ್‌ಗಢ ಸಚಿವಾಲಯದಲ್ಲಿ 9 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಮೊದಲು ಸಿಬ್ಬಂದಿ ಮತ್ತು ಸಾಮಾನ್ಯ ಆಡಳಿತ ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿ ಮತ್ತು ಉಪ ಕಾರ್ಯದರ್ಶಿಯಾಗಿ, ನಂತರ ಸಿಬ್ಬಂದಿ ನಿರ್ವಹಣೆಯ ವಿಶೇಷ ಕಾರ್ಯದರ್ಶಿ ಮತ್ತು ನಿರ್ದೇಶಕರಾಗಿ ಮತ್ತು ಸಿಎಂ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್