AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಬೇಜವಾಬ್ದಾರಿ ರಾಷ್ಟ್ರ; ಅಸಿಮ್ ಮುನೀರ್ ಬೆದರಿಕೆಗೆ ಭಾರತ ಟೀಕೆ

ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅಮೆರಿಕ ಪ್ರವಾಸದಲ್ಲಿದ್ದು, ಅಮೆರಿಕದ ನೆಲದಿಂದ ಪರಮಾಣು ಬೆದರಿಕೆಯೊಡ್ಡಿದ್ದಾರೆ. ಇದನ್ನು ಭಾರತ ಖಂಡಿಸಿದೆ. ಇದು ಪಾಕಿಸ್ತಾನದ "ಪರಮಾಣು ಕತ್ತಿಗಳ ಝಳಪಿಸುವಿಕೆ"ಗೆ ಉದಾಹರಣೆಯಾಗಿದೆ ಎಂದು ವಿದೇಶಾಂಗ ಸಚಿವಾಲಯ ಟೀಕಿಸಿದೆ. ಭಾರತದ ವಿರುದ್ಧ ಅಮೆರಿಕದಲ್ಲಿ ಅಸಿಮ್ ಮುನೀರ್ ತೀವ್ರ ವಾಗ್ದಾಳಿ ನಡೆಸಿದ್ದರು.

ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಬೇಜವಾಬ್ದಾರಿ ರಾಷ್ಟ್ರ; ಅಸಿಮ್ ಮುನೀರ್ ಬೆದರಿಕೆಗೆ ಭಾರತ ಟೀಕೆ
Minister Jaishankar
ಸುಷ್ಮಾ ಚಕ್ರೆ
|

Updated on: Aug 11, 2025 | 5:03 PM

Share

ನವದೆಹಲಿ, ಆಗಸ್ಟ್ 11: ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ (Asim Munir) ಅಮೆರಿಕದ ಭಾಷಣದಲ್ಲಿ ಹಾಕಿದ ಪರಮಾಣು ಬೆದರಿಕೆಯನ್ನು (nuclear threat) ಭಾರತ ಖಂಡಿಸಿದೆ. ಇದು ಪರಮಾಣು ಅಸ್ತ್ರವನ್ನು ಮುಂದಿಟ್ಟುಕೊಂಡು ಬ್ಲಾಕ್​​ಮೇಲ್ ಮಾಡುವ ಪಾಕಿಸ್ತಾನದ (Pakistan) ವರ್ತನೆಗೆ ಮತ್ತೊಂದು ಉದಾಹರಣೆ ಎಂದು ಭಾರತ ತಿರುಗೇಟು ನೀಡಿದೆ. ಫ್ಲೋರಿಡಾದಲ್ಲಿ ತಮ್ಮ ಭಾಷಣದ ಸಮಯದಲ್ಲಿ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ “ಪರಮಾಣು ಯುದ್ಧ”ದ ಬೆದರಿಕೆಗಳನ್ನು ಹಾಕಿದ್ದರು. ಭಾರತದೊಂದಿಗೆ ಮುಂದಿನ ದಿನಗಳಲ್ಲಿ ಸಂಘರ್ಷ ಹೆಚ್ಚಾಗಿ ಒಂದುವೇಳೆ ಪಾಕಿಸ್ತಾನ ತನ್ನ ಅಸ್ತಿತ್ವದ ಬಿಕ್ಕಟ್ಟನ್ನು ಎದುರಿಸಿದರೆ “ಅರ್ಧ ಜಗತ್ತನ್ನು ನಾಶಪಡಿಸುತ್ತೇವೆ” ಎಂದು ಅಸಿಮ್ ಮುನೀರ್ ಬೆದರಿಕೆ ಹಾಕಿದ್ದರು.

ಈ ಬಗ್ಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿಕೆ ನೀಡಿದ್ದು, “ಅಮೆರಿಕಾ ಭೇಟಿಯಲ್ಲಿ ಪಾಕಿಸ್ತಾನದ ಸೇನಾ ಮುಖ್ಯಸ್ಥರು ನೀಡಿರುವ ಹೇಳಿಕೆಗಳ ಬಗ್ಗೆ ಅಲ್ಲಿನ ಮಾಧ್ಯಮಗಳಲ್ಲಿ ವರದಿಯಾಗಿರುವ ಸುದ್ದಿಗಳು ನಮ್ಮ ಗಮನಕ್ಕೆ ಬಂದಿದೆ. ಪರಮಾಣು ಕತ್ತಿಯನ್ನು ಝಳಪಿಸುವುದು ಪಾಕಿಸ್ತಾನದ ಹಳೆಯ ಬುದ್ಧಿ” ಎಂದು ಲೇವಡಿ ಮಾಡಿದೆ. ಈ ಹೇಳಿಕೆಗಳನ್ನು ಭಾರತದೊಂದಿಗೆ ಸ್ನೇಹಪರವಾಗಿರುವ ಮೂರನೇ ದೇಶದ ನೆಲದಿಂದ ಮಾಡಿರುವುದು ವಿಷಾದಕರ. ಭಾರತವು ಪರಮಾಣು ಬೆದರಿಕೆಗೆ ಮಣಿಯುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದೆ. ನಮ್ಮ ರಾಷ್ಟ್ರೀಯ ಭದ್ರತೆಯನ್ನು ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ನಾವು ಮುಂದುವರಿಸುತ್ತೇವೆ” ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಸಿಂಧೂ ನದಿಗೆ ಭಾರತ ಡ್ಯಾಂ ನಿರ್ಮಿಸಿದರೆ ಬಾಂಬ್ ಹಾಕುತ್ತೇವೆ; ಅಮೆರಿಕದಲ್ಲಿ ಅಸೀಮ್ ಮುನೀರ್ ಬೆದರಿಕೆ

ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರ ಅಮೆರಿಕ ನೆಲದಿಂದ ಬಂದ ಪರಮಾಣು ಬೆದರಿಕೆಯು “ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಬೇಜವಾಬ್ದಾರಿ ರಾಷ್ಟ್ರ” ಎಂದು ಸಾಬೀತುಪಡಿಸಿದೆ. ಪಾಕಿಸ್ತಾನದಲ್ಲಿರುವ ಪರಮಾಣು ಶಸ್ತ್ರಾಸ್ತ್ರಗಳು ರಾಷ್ಟ್ರೇತರ ವ್ಯಕ್ತಿಗಳ ಕೈಗೆ ಸಿಗುವ ನಿಜವಾದ ಅಪಾಯವಿದೆ. ಪಾಕಿಸ್ತಾನದಲ್ಲಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿಲ್ಲ. ಆ ದೇಶವನ್ನು ನಿಯಂತ್ರಿಸುವುದು ಅವರ ಮಿಲಿಟರಿಯೇ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

“ಪಾಕಿಸ್ತಾನ ಪರಮಾಣು ರಾಷ್ಟ್ರ. ನಾವು ಪತನಗೊಳ್ಳುತ್ತಿದ್ದೇವೆ ಎಂದು ಯಾರಾದರೂ ಭಾವಿಸಿದರೆ ನಮ್ಮೊಂದಿಗೆ ಅರ್ಧ ಜಗತ್ತನ್ನು ನಾಶಪಡಿಸಿಯೇ ನಾವು ಪತನವಾಗುತ್ತೇವೆ ಎಂಬುದು ಸತ್ಯ. ಕಾಶ್ಮೀರ ಪಾಕಿಸ್ತಾನದ ಕಣ್ಣಿನ ರಕ್ತನಾಳ ” ಎಂದು ಅಸಿಮ್ ಮುನೀರ್ ಹೇಳಿದ್ದರು.

ಇದನ್ನೂ ಓದಿ: ಮತ್ತೆ ಅಮೆರಿಕಕ್ಕೆ ಹೊರಟ ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನೀರ್, ಎರಡು ತಿಂಗಳಲ್ಲಿ ಎರಡನೇ ಭೇಟಿ

ಸಿಂಧೂ ಜಲ ಮಾರ್ಗದಲ್ಲಿ ಭಾರತ ಅಣೆಕಟ್ಟು ನಿರ್ಮಿಸಿದರೆ ಅದು ಪಾಕಿಸ್ತಾನಕ್ಕೆ ನೀರಿನ ಹರಿವನ್ನು ತಡೆಯಬಹುದು. ಹಾಗೇನಾದರೂ ಡ್ಯಾಂ ನಿರ್ಮಿಸಿದರೆ ನಾವು ಬಾಂಬ್ ಸಿಡಿಸುತ್ತೇವೆ.  ಭಾರತವು ಸಿಂಧೂ ನದಿಗೆ ಅಣೆಕಟ್ಟು ನಿರ್ಮಿಸುವವರೆಗೆ ನಾವು ಕಾಯುತ್ತೇವೆ. ಡ್ಯಾಂ ಪೂರ್ಣವಾದ ನಂತರ ನಾವು ಅದನ್ನು 10 ಕ್ಷಿಪಣಿಗಳಿಂದ ನಾಶಪಡಿಸುತ್ತೇವೆ. ಸಿಂಧೂ ನದಿ ಭಾರತೀಯರ ಕುಟುಂಬದ ಆಸ್ತಿಯಲ್ಲ. ಅದು ನಮಗೂ ಸೇರಿದ್ದು ಎಂದು ಅಸಿಮ್ ಮುನಿರ್ ಅಮೆರಿಕದ ನೆಲದಿಂದ ಬೆದರಿಕೆ ಹಾಕಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ