ಮಹಿಳಾ ಹಕ್ಕುಗಳ ಕಾರ್ಯಕರ್ತೆ ರೆಹಾನಾ ಫಾತಿಮಾ(Rehana Fatima) ವಿರುದ್ಧದ ಪೊಕ್ಸೊ ಪ್ರಕರಣವನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ. ಮಹಿಳೆ ತನ್ನ ದೇಹದ ಕುರಿತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲು ಶಕ್ತಳು. ಅದು ಆಕೆಯ ಸಮಾನತೆ ಹಾಗೂ ಖಾಸಗಿತನದ ಮೂಲಭೂತ ಹಕ್ಕು. ನಗ್ನತೆ ಹಾಗೂ ಲೈಂಗಿಕತೆಯನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ಕೇರಳದ ನ್ಯಾಯಾಲಯ ಮೊಕದ್ದಮೆಯನ್ನು ವಜಾಗೊಳಿಸಿದೆ.
ಇದರಿಂದಾಗಿ ಆಕೆಯ ವಿರುದ್ಧದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ, 2012 (ಪೋಕ್ಸೊ), ಮಾಹಿತಿ ತಂತ್ರಜ್ಞಾನ ಕಾಯಿದೆ, ಮಕ್ಕಳ ರಕ್ಷಣೆ ಕಾಯಿದೆ, 2015 (ಜೆಜೆ ಕಾಯಿದೆ), 2000 ರ ಸೆಕ್ಷನ್ 67 ಬಿ (ಡಿ) ಮತ್ತು ಬಾಲಾಪರಾಧಿ ನ್ಯಾಯದ (ಕೇರ್ ಮತ್ತು ಸೆಕ್ಷನ್ 75) ಸೆಕ್ಷನ್ 13, 14 ಮತ್ತು 15 ರ ಅಡಿಯಲ್ಲಿ ಅಪರಾಧಗಳಿಗಾಗಿ ಆಕೆಯನ್ನು ಚಾರ್ಜ್‌ಶೀಟ್ ಮಾಡಲಾಗಿತ್ತು.
ಅರೆನಗ್ನವಾಗಿ ಚಿತ್ರಗಳನ್ನು ಹಾಗೂ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದರ ಕುರಿತು ಆಕೆ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
ಯಾವುದೇ ದುರುದ್ದೇಶ ಕಾಣುತ್ತಿಲ್ಲ, ಬದಲಾಗಿ ಮಕ್ಕಳಿಗೆ ಅರಿವು ಮೂಡಿಸುವ ಪ್ರಯತ್ನವಾಗಿದೆ. ಮಕ್ಕಳಿಗೆ ನಗ್ನ ದೇಹವನ್ನು ಸಾಮಾನ್ಯೀಕರಿಸಲು ಮತ್ತು ಅದರ ಬಗ್ಗೆ ಸಂವೇದನಾಶೀಲರಾಗಲು ತಾಯಿಯು ತನ್ನ ದೇಹವನ್ನು ಕ್ಯಾನ್ವಾಸ್‌ನಂತೆ ತನ್ನ ಮಕ್ಕಳಿಗೆ ಪೇಟಿಂಗ್ ಮಾಡಲು ಅನುಮತಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ.
ಮತ್ತಷ್ಟು ಓದಿ: ಟ್ಯಾಂಗೋ ಆ್ಯಪ್ ಬಳಸುವವರೇ ಎಚ್ಚರ: ಮಹಿಳೆಯ ನಗ್ನ ಫೋಟೋ, ವಿಡಿಯೋ ಇಟ್ಟುಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
ಪುರುಷರು ತಮ್ಮ ದೇಹದ ಮೇಲ್ಭಾಗವನ್ನು ಪ್ರದರ್ಶಿಸುವುದು ನಗ್ನತೆಯಾಗಿ ಕಾಣುವುದಿಲ್ಲ. ಅದೇ ಮಹಿಳೆಯ ವಿಚಾರದಲ್ಲಿ ಇದು ವಿರುದ್ಧವಾಗಿರುತ್ತದೆ. ಪ್ರತಿಯೊಬ್ಬರೂ ತನ್ನ ದೇಹದ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಸಂವಿಧಾನದಲ್ಲಿಯೇ ಅವಕಾಶ ಇರುವುದರಿಂದ ದ್ವಿಮುಖ ನೀತಿ ಸರಿಯಲ್ಲ ಎಂದು ನ್ಯಾಲಯಾಲಯ ಅಭಿಪ್ರಾಯ ಪಟ್ಟಿದೆ.
ಹೀಗಾಗಿ ಸಾಮಾಜಿಕ ಹೋರಾಟಗಾರ್ತಿ ವಿರುದ್ಧ ದಾಖಲಾಗಿದ್ದ ಮೊಕದ್ದಮೆಯನ್ನು ಕೇರಳ ನ್ಯಾಯಾಲಯ ವಜಾಗೊಳಿಸಿದೆ.
ಪ್ರಕರಣ ಏನು?
ರೆಹಾನಾ 2020ರ ಜೂನ್ 19ರಂದು ತನ್ನ ಯೂಟ್ಯೂಬ್ ಚಾನಲ್ನಲ್ಲಿ ಬಾಡಿ ಆರ್ಟ್ಸ್ ಪಾಲಿಟಿಕ್ಸ್ (#BodyArtPolitics) ಎಂಬ ಶೀರ್ಷಿಕೆಯಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ವಿಡಿಯೋದಲ್ಲಿ ರೆಹನಾ ತನ್ನ ಮಗ ಹಾಗೂ ಮಗಳ ಕೈಯಿಂದ ಅರೆಬೆತ್ತಲೆ ದೇಹದ ಮೇಲೆ ಚಿತ್ರ ಬಿಡಿಸಿಕೊಳ್ಳುತ್ತಿರುವ ದೃಶ್ಯವಿದೆ.
ವಿಡಿಯೋ ಮಾಡಿದ್ದರ ಉದ್ದೇಶದ ಬಗ್ಗೆ ತಿಳಿಸಿದ್ದ ರೆಹನಾ, ಲೈಂಗಿಕತೆ ಮತ್ತು ನಗ್ನತೆ ನಿಷೇಧವಾಗಿರುವ ಸಮಾಜದಲ್ಲಿ ಮಹಿಳೆಯರು ಲೈಂಗಿಕತೆ ಮತ್ತು ಅವರ ದೇಹದ ಬಗ್ಗೆ ಮುಕ್ತವಾಗಿರಬೇಕು ಎಂದು ಪುನರುಚ್ಚರಿಸುವುದಕ್ಕಾಗಿ ಈ ವಿಡಿಯೋವನ್ನು ಮಾಡಿದ್ದಾಗಿ ಹೇಳಿದ್ದರು. ಲೈಂಗಿಕತೆ ಬಗ್ಗೆ ಪ್ರಸ್ತುತ ಸಮಾಜಕ್ಕೆ ತಪ್ಪು ಸಂದೇಶ ನೀಡಲಾಗುತ್ತಿದೆ. ಸೌಂದರ್ಯವು ನೋಡುಗನ ಕಣ್ಣಿನಲ್ಲಿರುವಂತೆಯೇ, ನೋಡುವವರ ದೃಷ್ಟಿಯಲ್ಲಿಯೇ ಅಶ್ಲೀಲತೆಯೂ ಇದೆ ಎಂದು ರೆಹನಾ ಬರೆದುಕೊಂಡಿದ್ದರು.
ಜಾಮೀನು ಅರ್ಜಿ ತಿರಸ್ಕೃತವಾಗಿತ್ತು
ರೆಹಾನಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು. ಆಕೆಯು ತನ್ನ ಮನೆಯೊಳಗೆ ತನಗೆ ಇಷ್ಟವಾದ ರೀತಿಯಲ್ಲಿ ತನ್ನ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ನೀಡಲು ಸ್ವತಂತ್ರಳಾಗಿದ್ದರೂ ಕೂಡ ಅದಕ್ಕೆ ಸಂಬಂಧಿಸಿದ ವಿಡಿಯೋವನ್ನು ಜಾಲತಾಣದಲ್ಲಿ ಪ್ರಕಟಿಸಿದ್ದು ಅಪರಾಧ ಎಂದು ಪರಿಗಣಿಸಿತ್ತು.
ಸುಪ್ರೀಂಕೋರ್ಟ್ ಕೂಡ ಆಕೆಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ವಿವಾದ ಹೊಸದೇನಲ್ಲ ರೆಹಾನಾ ಅವರು ಬಿಎಸ್ಎನ್ಎಲ್ ಮಾಜಿ ಉದ್ಯೋಗಿಯಾಗಿದ್ದಾರೆ. ಇವರಿಗೆ ವಿವಾದಗಳು ಹೊಸದೇನಲ್ಲ. ಅಯ್ಯಪ್ಪ ಭಕ್ತರ ನಂಬಿಕೆಗೆ ನೋವುಂಟು ಮಾಡುವ ಫೇಸ್ಬುಕ್ ಪೋಸ್ಟ್ ಹಾಕಿದ ಆರೋಪದಲ್ಲಿ ಈ ಹಿಂದೆ ಬಂಧಿತರಾಗಿ 18 ದಿನ ಜೈಲುವಾಸ ಅನುಭವಿಸಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ