ನುಹ್ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ, ಬಿಟ್ಟು ಬಜರಂಗಿಯ ಬಂಧನ
ನುಹ್ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಜರಂಗ ದಳದ ಸದಸ್ಯ ಹಾಗೂ ಗೋ ರಕ್ಷಣಾ ಪಡೆಯ ಬಿಟ್ಟು ಬಜರಂಗಿಯನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆಯ ಮೇಲೆ ಗುಂಪೊಂದು ದಾಳಿ ಮಾಡಿದ ನಂತರ ನೂಹ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.
ನುಹ್ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಜರಂಗ ದಳದ ಸದಸ್ಯ ಹಾಗೂ ಗೋ ರಕ್ಷಣಾ ಪಡೆಯ ಬಿಟ್ಟು ಬಜರಂಗಿಯನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆಯ ಮೇಲೆ ಗುಂಪೊಂದು ದಾಳಿ ಮಾಡಿದ ನಂತರ ನೂಹ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ನಂತರ ಈ ಹಿಂಸಾಚಾರದ ಬೆಂಕಿ ಗುರುಗ್ರಾಮ ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಿಗೆ ವ್ಯಾಪಿಸಿದೆ. ಈ ಘಟನೆಯಲ್ಲಿ ಒಟ್ಟು 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಹಿಂಸಾಚಾರದ ನಂತರ, ಪರಿಸ್ಥಿತಿ ಎಷ್ಟು ಕೆಟ್ಟದಾಗಿತ್ತು ಎಂದರೆ ಆಗಸ್ಟ್ 8 ರವರೆಗೆ ನೂಹ್‌ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣವಾಗಿ ನಿಲ್ಲಿಸಲಾಯಿತು. ನಂತರ ಅದನ್ನು ಆಗಸ್ಟ್ 13 ರವರೆಗೆ ವಿಸ್ತರಿಸಲಾಯಿತು. ಸಾಮಾನ್ಯ ಉಡುಪು ಧರಿಸಿದ್ದ ಪೊಲೀಸರು ಕೈಯಲ್ಲಿ ಲಾಠಿ ಹಾಗೂ ಪಿಸ್ತೂಲ್ಗಳನ್ನು ಹಿಡಿದುಕೊಂಡು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಬಿಟ್ಟುವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಟ್ಟು ಬಜರಂಗಿ ಹಾಗೂ ಬಜರಂಗ ದಳದ ಆತನ ಸಹವರ್ತಿ ಮೂನು ಮಾನೆಸರ್ ನೀಡಿದ ಪ್ರಚೋದನಕಾರಿ ಹೇಳಿಕೆಯು ಹಿಂಸಾಚಾರಕ್ಕೆ ಮತ್ತಷ್ಟು ಪುಷ್ಟಿ ನೀಡಿದಂತಾಗಿತ್ತು ಎಂದು ಆರೋಪಿಸಲಾಗಿದೆ.
ಬಜರಂಗಿ ಅಲಿಯಾಸ್ ರಾಜ್‌ಕುಮಾರ್ ಮತ್ತು 15-20 ಇತರರ ವಿರುದ್ಧ ನುಹ್‌ನ ಸದರ್ ಪೊಲೀಸ್ ಠಾಣೆಯಲ್ಲಿ ಹೊಸ ಎಫ್‌ಐಆರ್ ದಾಖಲಿಸಲಾಗಿದೆ. ಬಂಧನದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ಪೊಲೀಸರು ಬಜರಂಗದಳದ ಸದಸ್ಯರನ್ನು ಬೆನ್ನಟ್ಟುತ್ತಿರುವುದನ್ನು ಕಾಣಬಹುದು.
ಮತ್ತಷ್ಟು ಓದಿ: ನುಹ್ ಹಿಂಸಾಚಾರ ಖಂಡಿಸಿ ಪ್ರತಿಭಟನೆ: ಉತ್ತರ ಪ್ರದೇಶ, ಹರ್ಯಾಣ ಮತ್ತು ದೆಹಲಿಗೆ ಸುಪ್ರೀಂ ನೋಟಿಸ್; ಆಗಸ್ಟ್ 4ಕ್ಕೆ ಮುಂದಿನ ವಿಚಾರಣೆ
ಬಜರಂಗಿ ಅಲಿಯಾಸ್ ರಾಜ್ ಕುಮಾರ್, ಫರಿದಾಬಾದ್‌ನ ಗಾಜಿಪುರ ಮತ್ತು ದಬುವಾ ಮಾರುಕಟ್ಟೆಯಲ್ಲಿ ಹಣ್ಣು ಮತ್ತು ತರಕಾರಿ ವ್ಯಾಪಾರಿ ಆಗಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಅವರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಮೂರು ಪ್ರಕರಣಗಳು ದಾಖಲಾಗಿವೆ ಎಂದು ಪಿಟಿಐ ವರದಿ ಮಾಡಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:19 am, Wed, 16 August 23