ನುಹ್ ಹಿಂಸಾಚಾರ ಖಂಡಿಸಿ ಪ್ರತಿಭಟನೆ: ಉತ್ತರ ಪ್ರದೇಶ, ಹರ್ಯಾಣ ಮತ್ತು ದೆಹಲಿಗೆ ಸುಪ್ರೀಂ ನೋಟಿಸ್; ಆಗಸ್ಟ್ 4ಕ್ಕೆ ಮುಂದಿನ ವಿಚಾರಣೆ

Haryana Violence: ವಿಎಚ್‌ಪಿ ನಡೆಸುತ್ತಿರುವ ಪ್ರತಿಭಟನೆ ರ‍್ಯಾಲಿಗಳನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಪೀಠ, 'ದ್ವೇಷದ ಮಾತು, ಹಿಂಸಾಚಾರ ಇರಬಾರದು. ಅಗತ್ಯವಿದ್ದರೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಬೇಕು, ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಹೇಳಿದೆ.

ನುಹ್ ಹಿಂಸಾಚಾರ ಖಂಡಿಸಿ ಪ್ರತಿಭಟನೆ: ಉತ್ತರ ಪ್ರದೇಶ, ಹರ್ಯಾಣ ಮತ್ತು ದೆಹಲಿಗೆ ಸುಪ್ರೀಂ ನೋಟಿಸ್; ಆಗಸ್ಟ್ 4ಕ್ಕೆ ಮುಂದಿನ ವಿಚಾರಣೆ
ಸುಪ್ರೀಂಕೋರ್ಟ್
Follow us
ರಶ್ಮಿ ಕಲ್ಲಕಟ್ಟ
|

Updated on:Aug 02, 2023 | 3:24 PM

ದೆಹಲಿ ಆಗಸ್ಟ್ 2: ಹರ್ಯಾಣದ (Haryana) ನುಹ್​​ನಲ್ಲಿ (Nuh Violence) ನಡೆದ ಹಿಂಸಾಚಾರ ಖಂಡಿಸಿ ವಿಎಚ್‌ಪಿ ನಡೆಸುತ್ತಿರುವ ಪ್ರತಿಭಟನಾ ರ‍್ಯಾಲಿಗಳಿಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ (Supreme Court) ಇಂದು (ಬುಧವಾರ) ಉತ್ತರ ಪ್ರದೇಶ, ಹರ್ಯಾಣ ಮತ್ತು ದೆಹಲಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಾಲಯವು ಆಗಸ್ಟ್ 4 ರಂದು ಮುಂದಿನ ವಿಚಾರಣೆ ನಡೆಸಲಿದೆ. ವಿಎಚ್‌ಪಿ ನಡೆಸುತ್ತಿರುವ ಪ್ರತಿಭಟನೆ ರ‍್ಯಾಲಿಗಳನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಪೀಠ, ‘ದ್ವೇಷದ ಮಾತು, ಹಿಂಸಾಚಾರ ಇರಬಾರದು. ಅಗತ್ಯವಿದ್ದರೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಬೇಕು, ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಎಲ್ಲವನ್ನೂ ಸಂರಕ್ಷಿಸಬೇಕು’ ಎಂದು ಹೇಳಿದೆ.

ಈ ಪ್ರತಿಭಟನೆಗಳಲ್ಲಿ ಯಾವುದೇ ಹಿಂಸಾಚಾರ ಮತ್ತು ದ್ವೇಷದ ಭಾಷಣಗಳು ನಡೆಯದಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ. ಅರೆಸೇನಾ ಪಡೆಗಳ ಸಿಬ್ಬಂದಿ ಸೇರಿದಂತೆ ಸಾಕಷ್ಟು ಬಲವನ್ನು ನೆಲದ ಮೇಲೆ ಹಾಕುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ದಯವಿಟ್ಟು ಯಾವುದೇ ಹಿಂಸಾಚಾರ ಮತ್ತು ದ್ವೇಷದ ಭಾಷಣಗಳು ನಡೆಯದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಖಚಿತಪಡಿಸಿಕೊಳ್ಳಿ. ಸಿಸಿಟಿವಿಗಳನ್ನು ನಿಯೋಜಿಸಿ ಇದರಿಂದ ಎಲ್ಲವೂ ರೆಕಾರ್ಡ್ ಆಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ನೆರೆಯ ಹರ್ಯಾಣದಲ್ಲಿ ಆರು ಜನರ ಸಾವಿಗೆ ಕಾರಣವಾದ ಮತ್ತು ಅಪಾರ ಆಸ್ತಿಪಾಸ್ತಿ ನಷ್ಟಕ್ಕೆ ಕಾರಣವಾದ ಹಿಂಸಾಚಾರದ ವಿರುದ್ಧ ವಿಎಚ್‌ಪಿ ಮತ್ತು ಬಜರಂಗದಳದ ಬೆಂಬಲಿಗರು ರಾಷ್ಟ್ರ ರಾಜಧಾನಿಯಾದ್ಯಂತ ಸುಮಾರು 30 ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದರು. ಹಿಂಸಾಚಾರದ ಘಟನೆಗಳ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ರಾಷ್ಟ್ರ ರಾಜಧಾನಿಯಿಂದ ಸುಮಾರು 80 ಕಿಮೀ ದೂರದಲ್ಲಿರುವ ನುಹ್‌ನಲ್ಲಿ ಸೋಮವಾರ ವಿಎಚ್‌ಪಿ ಮತ್ತು ಬಜರಂಗದಳ ನಡೆಸಿದ ಧಾರ್ಮಿಕ ಮೆರವಣಿಗೆ ವೇಳೆ ಗಲಭೆ ಉಂಟಾಗಿದೆ. ಮೆರವಣಿಗೆಗೆ ಮೇಲೆ ಗುಂಡಿನ ದಾಳಿ ಮತ್ತು  ಕಲ್ಲು ತೂರಾಟ ನಡೆದಿದ್ದು, ಸುಮಾರು 2,500 ಜನರ ಗುಂಪೊಂದು ದೇವಸ್ಥಾನದೊಳಗೆ ಆಶ್ರಯ ಪಡೆದಿತ್ತು.

ಈ ಘಟನೆಯು ಕೋಮು ಗಲಭೆಗೆ ಕಾರಣವಾಗಿದ್ದು, ಸೋಮವಾರ ಗುಂಪೊಂದು ತಡರಾತ್ರಿ ಮಸೀದಿಗೆ ಬೆಂಕಿ ಹಚ್ಚಿ ಇಮಾಮ್ ಹತ್ಯೆ ಮಾಡಿತ್ತು. ಕಳೆದೆರಡು ದಿನಗಳಿಂದ ಹಲವು ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ. ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ. ಹಲವಾರು ಪ್ರದೇಶಗಳಲ್ಲಿ ನಿಷೇಧಿತ ಆದೇಶಗಳು ಜಾರಿಯಲ್ಲಿವೆ.

ಇದನ್ನೂ ಓದಿ: ಹರ್ಯಾಣ ಹಿಂಸಾಚಾರ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, 116 ಜನರ ಬಂಧನ, ದೆಹಲಿಯಿಂದ ಯುಪಿವರೆಗೆ ಕಟ್ಟೆಚ್ಚರ

ದೆಹಲಿ ಅಧಿಕಾರಿಗಳು ಗುರುಗ್ರಾಮ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ದೆಹಲಿ ಪೊಲೀಸರು ಇಂದು ಬೆಳಿಗ್ಗೆ ಟ್ರಾಫಿಕ್ ಸಲಹೆಯನ್ನು ನೀಡಿದ್ದು, ಪ್ರತಿಭಟನೆ ನಡೆಯುತ್ತಿರುವ ರಸ್ತೆಗಳ ನಿವಾಸಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಕೋಮು ಸೌಹಾರ್ದತೆಗೆ ಭಂಗ ತರುವ ಯಾವುದೇ ಪ್ರಯತ್ನಗಳನ್ನು ಕಟ್ಟುನಿಟ್ಟಾಗಿ ಎದುರಿಸಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Wed, 2 August 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ