ದ್ವೇಷ ಬಿತ್ತಿದ ಆರೋಪ; ನೂಪುರ್ ಶರ್ಮ, ನವೀನ್ ಜಿಂದಾಲ್, ಓವೈಸಿ ಸೇರಿ ಇತರರ ವಿರುದ್ಧ ಕೇಸ್ ದಾಖಲು

ದ್ವೇಷಪೂರಿತ ಭಾಷಣ, ಗುಂಪುಗಳಿಗೆ ಪ್ರಚೋದನೆ ಮತ್ತು ಸಮಾಜದ ಶಾಂತಿಯನ್ನು ಕದಡಿದ್ದಕ್ಕಾಗಿ ಬಿಜೆಪಿ ವಕ್ತಾರರು, ಸಂಸದರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಕೆದಾರರು ಮತ್ತು ಧಾರ್ಮಿಕ ಸಂಘಟನೆಗಳ ಸದಸ್ಯರನ್ನು ಹೆಸರಿಸಿ 2 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ದ್ವೇಷ ಬಿತ್ತಿದ ಆರೋಪ; ನೂಪುರ್ ಶರ್ಮ, ನವೀನ್ ಜಿಂದಾಲ್, ಓವೈಸಿ ಸೇರಿ ಇತರರ ವಿರುದ್ಧ ಕೇಸ್ ದಾಖಲು
ನೂಪುರ್ ಶರ್ಮ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 09, 2022 | 1:12 PM

ನವದೆಹಲಿ: ಪ್ರವಾದಿ ಮೊಹಮ್ಮದ್ ಮತ್ತು ಇಸ್ಲಾಂ ಧರ್ಮದ ವಿರುದ್ಧ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮ (Nupur Sharma) ಟಿವಿ ಚಾನೆಲ್ ಚರ್ಚೆಯಲ್ಲಿ ಮತ್ತು ಬಿಜೆಪಿ ನಾಯಕ ನವೀನ್ ಜಿಂದಾಲ್ (Naeen Jindal) ಟ್ವಿಟ್ಟರ್​ನಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಬಳಿ ಅವರಿಬ್ಬರನ್ನೂ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಬಿಜೆಪಿಯಿಂದ ಅಮಾನತಾದ ಎರಡು ವಾರಗಳ ನಂತರ ದ್ವೇಷಪೂರಿತ ಭಾಷಣ, ಗುಂಪುಗಳಿಗೆ ಪ್ರಚೋದನೆ ಮತ್ತು ಸಮಾಜದ ಶಾಂತಿಯನ್ನು ಕದಡುವ ಸನ್ನಿವೇಶಗಳನ್ನು ಸೃಷ್ಟಿಸಿದಕ್ಕಾಗಿ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿ ವಕ್ತಾರರು, ಸಂಸದರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಕೆದಾರರು ಮತ್ತು ಧಾರ್ಮಿಕ ಸಂಘಟನೆಗಳ ಸದಸ್ಯರನ್ನು ಹೆಸರಿಸಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಮತ್ತು ಪಕ್ಷದ ದೆಹಲಿ ಮಾಧ್ಯಮ ವಿಭಾಗದ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಅವರ ಆಕ್ಷೇಪಾರ್ಹ ಮತ್ತು ಕೋಮುವಾದಿ ಹೇಳಿಕೆಗಳಿಂದ ಉಂಟಾದ ಭಾರೀ ಆಕ್ರೋಶದ ಬಳಿಕ ಪೊಲೀಸರು ಈ ಕೇಸ್ ದಾಖಲಿಸಿದ್ದಾರೆ.

ನೂಪುರ್ ಶರ್ಮ ಮತ್ತು ನವೀನ್ ಜಿಂದಾಲ್ ಮಾತ್ರವಲ್ಲದೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಮತ್ತು ಹರಿದ್ವಾರ ದ್ವೇಷ ಭಾಷಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ದ್ವೇಷಿ ಯತಿ ನರಸಿಂಹಾನಂದ ಅವರನ್ನು ಕೂಡ ದೆಹಲಿ ಪೊಲೀಸರು ಎಫ್​ಐಆರ್​​ನಲ್ಲಿ ಹೆಸರಿಸಿದ್ದಾರೆ.

ಇದನ್ನೂ ಓದಿ: Nupur Sharma: ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮ ಯಾರು?

ಇಬ್ಬರು ಬಿಜೆಪಿ ನಾಯಕರ ಟೀಕೆಗಳನ್ನು 16ಕ್ಕೂ ಹೆಚ್ಚು ದೇಶಗಳು ಟೀಕಿಸಿದ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆಯೇ ಅಥವಾ ದೆಹಲಿ ಪೊಲೀಸರ ವಿಶೇಷ ಸೆಲ್‌ನ ಸೈಬರ್ ಘಟಕವು ಸ್ವಯಂಪ್ರೇರಿತವಾಗಿ ಸಂಜ್ಞೆ ತೆಗೆದುಕೊಂಡಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. “ಸಾರ್ವಜನಿಕ ಶಾಂತಿ ಕಾಪಾಡುವ ವಿರುದ್ಧ ಸಂದೇಶಗಳನ್ನು ಪೋಸ್ಟ್ ಮಾಡುವ ಮತ್ತು ಹಂಚಿಕೊಳ್ಳುವ ಮತ್ತು ವಿವಿಧ ವಿಭಜಕ ರೇಖೆಗಳ ಆಧಾರದ ಮೇಲೆ ಜನರನ್ನು ಪ್ರಚೋದಿಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Thu, 9 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ