Big Breaking ನೂಪುರ್ ಶರ್ಮಾ ವಿರುದ್ಧ ದಾಖಲಾಗಿದ್ದ ಎಲ್ಲ ಎಫ್ಐಆರ್ ದೆಹಲಿಗೆ ವರ್ಗಾಯಿಸಲು ಸುಪ್ರೀಂಕೋರ್ಟ್ ಆದೇಶ

Nupur Sharma ನೂಪುರ್ ಶರ್ಮಾ ಅವರು ಬೇರೆ ಬೇರೆ ರಾಜ್ಯಗಳಲ್ಲಿ ತನ್ನನ್ನು ತಾನು ಸಮರ್ಥಿಸಿಕೊಳ್ಳಬೇಕಾಗಿಲ್ಲ ಎಂಬ ಕಾರಣಕ್ಕೆ ತನ್ನ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳನ್ನು ಒಟ್ಟುಗೂಡಿಸುವಂತೆ ಸುಪ್ರೀಂಗೆ ಮನವಿ ಮಾಡಿದ್ದರು

Big Breaking ನೂಪುರ್ ಶರ್ಮಾ ವಿರುದ್ಧ ದಾಖಲಾಗಿದ್ದ ಎಲ್ಲ ಎಫ್ಐಆರ್ ದೆಹಲಿಗೆ ವರ್ಗಾಯಿಸಲು ಸುಪ್ರೀಂಕೋರ್ಟ್ ಆದೇಶ
ನೂಪುರ್ ಶರ್ಮಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 10, 2022 | 5:08 PM

ಪ್ರವಾದಿ ಮೊಹಮ್ಮದ್ (Prophet Muhammad) ಬಗ್ಗೆ ಅವಹೇಳನಾಕಾರಿ  ಹೇಳಿಕೆ ನೀಡಿದ್ದ  ನೂಪುರ್ ಶರ್ಮಾ (Nupur Sharma) ಅವರ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ಸೇರಿಸಲು ಸುಪ್ರೀಂಕೋರ್ಟ್ (Supreme Court) ಬುಧವಾರ ನಿರ್ದೇಶಿಸಿದ್ದು ತನಿಖೆಗಾಗಿ ದೆಹಲಿ ಪೊಲೀಸರಿಗೆ ವರ್ಗಾಯಿಸಿದೆ. ಈ ನ್ಯಾಯಾಲಯವು ಈಗಾಗಲೇ ಅರ್ಜಿದಾರರ ಜೀವ ಮತ್ತು ಭದ್ರತೆಗೆ ಗಂಭೀರ ಬೆದರಿಕೆಯನ್ನು ಮನಗಂಡು ನೂಪುರ್ ಶರ್ಮಾ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸಲು ಮತ್ತು ತನಿಖೆಗಾಗಿ ಎಲ್ಲ ಎಫ್ಐಆರ್  ಒಟ್ಟು ಸೇರಿಸಲು ನಾವು ನಿರ್ದೇಶಿಸುತ್ತೇವೆ ಎಂದು ಸುಪ್ರೀಂ ಹೇಳಿದೆ. ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಅವರ ಹೇಳಿಕೆ ಖಂಡಿಸಿ ಭಾರತದಲ್ಲಿ ಭಾರಿ ಪ್ರತಿಭಟನೆಗಳು ಮಾತ್ರವಲ್ಲದೆ  ಗಲ್ಫ್ ರಾಷ್ಟ್ರಗಳಿಂದ ಅಧಿಕೃತ ದೂರುಗಳು ಬಂದ ನಂತರ ಬಿಜೆಪಿ ಅವರನ್ನು ವಕ್ತಾರ ಸ್ಥಾನದಿಂದ ವಜಾಗೊಳಿಸಿತ್ತು. ನೂಪುರ್ ಶರ್ಮಾ ವಿರುದ್ಧ ಅನೇಕ ರಾಜ್ಯಗಳಲ್ಲಿ ಎಫ್ಐಆರ್ ದಾಖಲಾಗಿದೆ. ಅವುಗಳನ್ನು ಒಟ್ಟುಗೂಡಿಸುವಂತೆ ಶರ್ಮಾ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು. ಈ ಮನವಿಗೆ ಸಮ್ಮತಿಸಿದ ನ್ಯಾಯಮೂರ್ತಿಗಳು, ಆಕೆಗೆ ಜೀವ ಬೆದರಿಕೆ ಹಾಕಿರುವುದನ್ನು ಪರಿಗಣಿಸಿ ಎಫ್ಐಆರ್ ಒಗ್ಗೂಡಿಸಿರುವುದಾಗಿ ಹೇಳಿದ್ದಾರೆ.

ಜುಲೈ 1 ರಂದು ನಡೆದ ವಿಚಾರಣೆಯಲ್ಲಿ,ಸುಪ್ರಿಂಕೋರ್ಟ್‌ನ ಇಬ್ಬರು ನ್ಯಾಯಾಧೀಶರು ಶರ್ಮಾ ಅವರು ಸುದ್ದಿ ವಾಹಿನಿಯ ಚರ್ಚೆಯ ಸಂದರ್ಭದಲ್ಲಿ ಪ್ರವಾದಿಯವರ ಕುರಿತು ಮಾಡಿದ ಕಾಮೆಂಟ್ ನಂತರ ಭುಗಿಲೆದ್ದ ಹಿಂಸಾಚಾರಕ್ಕೆ “ಅವರೊಬ್ಬರೇ ಹೊಣೆಗಾರರು” ಎಂದು ಹೇಳಿದ್ದರು.

ಶರ್ಮಾ ವಿರುದ್ಧದ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಒಟ್ಟಿಗೆ ಸೇರಿಸಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ. ಕೇಂದ್ರಾಡಳಿತ ಪ್ರದೇಶವಾದ ದೆಹಲಿಯ ಪೊಲೀಸರು ಅಮಿತ್ ಶಾ ನೇತೃತ್ವದ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಬೇಕಿದೆ.

ಜುಲೈ 1ರ ವಿಚಾರಣೆಯ ಸಂದರ್ಭದಲ್ಲಿ  ಶರ್ಮಾ ಅವರು ದೇಶಾದ್ಯಂತ ತನ್ನ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ಒಟ್ಟುಗೂಡಿಸಿ ದೆಹಲಿಗೆ ವರ್ಗಾಯಿಸಲು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು. ನ್ಯಾಯಾಲಯದ ವಿಚಾರಣೆಗಾಗಿ ಪ್ರತಿ ರಾಜ್ಯಕ್ಕೆ ಹೋಗುವುದರಿಂದ ತನಗೆ ಮತ್ತು ಕುಟುಂಬಕ್ಕೆ ಭದ್ರತಾ ಬೆದರಿಕೆ ಎದುರಿಸಬೇಕಾಗುತ್ತದೆ ಎಂದಿದ್ದರು.

ಪ್ರವಾದಿಯ ಬಗ್ಗೆ ಅವರು ಮಾಡಿದ ಹೇಳಿಕೆ ಮೇಲೆ ಶರ್ಮಾ ವಿರುದ್ಧದ ಒಂಬತ್ತು ಪ್ರಕರಣಗಳಲ್ಲಿ ಅವರನ್ನು ಬಂಧಿಸಲಾಗುವುದಿಲ್ಲ ಜುಲೈ 19 ರಂದು ಸುಪ್ರೀಂಕೋರ್ಟ್ ಹೇಳಿತ್ತು. ಜುಲೈ 1ರ ಆದೇಶದ ನಂತರ, ಅಜ್ಮೀರ್ ದರ್ಗಾದ ಉದ್ಯೋಗಿಯೊಬ್ಬರು ಕತ್ತು ಸೀಳುವುದಾಗಿ ವಿಡಿಯೊದಲ್ಲಿ ಬೆದರಿಕೆ ಹಾಕಿದ್ದಾರೆ. ಉತ್ತರ ಪ್ರದೇಶದ ಮತ್ತೊಬ್ಬ ನಿವಾಸಿ ತನ್ನನ್ನು ನಿಂದಿಸಿ ತನ್ನ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿರುವ ಉದಾಹರಣೆಗಳಿವೆ ಎಂದು ಶರ್ಮಾ ನ್ಯಾಯಾಲಯದಲ್ಲಿ ಹೇಳಿದ್ದರು

ನೂಪುರ್ ಶರ್ಮಾ ವಿರುದ್ಧ ದೆಹಲಿ, ಮಹಾರಾಷ್ಟ್ರ, ತೆಲಂಗಾಣ, ಪಶ್ಚಿಮ ಬಂಗಾಳ, ಕರ್ನಾಟಕ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಅಸ್ಸಾಂನಲ್ಲಿ ಪ್ರಕರಣಗಳು ದಾಖಲಾಗಿವೆ.

ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:32 pm, Wed, 10 August 22