Uttar Pradesh: ನರ್ಸ್​ ಮೇಲೆ ಅತ್ಯಾಚಾರ ಪ್ರಕರಣ, ವೈದ್ಯ ಸೇರಿದಂತೆ ಮೂವರ ಬಂಧನ

ನರ್ಸ್​ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವೈದ್ಯ ಸೇರಿದಂತೆ ಮೂವರನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ.ಆಕೆ ಕಳೆದ 10 ತಿಂಗಳಿನಿಂದ ನರ್ಸ್​ ಆಗಿ ಕೆಲಸ ಮಾಡುತ್ತಿದ್ದಳು, ಶನಿವಾರ ರಾತ್ರಿ ವೈದ್ಯರ ಪತ್ನಿ ಮನೆಯಲ್ಲಿರಲಿಲ್ಲ, ಆಕೆಯನ್ನು ಮಲಗುವ ಕೋಣೆಗೆ ಕರೆದಿದ್ದರು ಆಕೆ ನಿರಾಕರಿಸಿದಾಗ ಆತನ ಸಹಚರರು ಆಕೆಯನ್ನು ಬಲವಂತವಾಗಿ ರೂಮಿಗೆ ತಳ್ಳಿ ಬಾಗಿಲು ಹಾಕಿದ್ದರು.

Uttar Pradesh: ನರ್ಸ್​ ಮೇಲೆ ಅತ್ಯಾಚಾರ ಪ್ರಕರಣ, ವೈದ್ಯ ಸೇರಿದಂತೆ ಮೂವರ ಬಂಧನ
ಅತ್ಯಾಚಾರ
Follow us
ನಯನಾ ರಾಜೀವ್
|

Updated on: Aug 20, 2024 | 2:39 PM

ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನರ್ಸ್​ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆಕೆಯನ್ನು ಆಸ್ಪತ್ರೆಯಲ್ಲಿ ಒತ್ತಾಯಾಳಾಗಿಟ್ಟುಕೊಂಡು ಅತ್ಯಾಚಾರವೆಸಗಿದ ಆರೋಪದ ಮೇಲೆ ವೈದ್ಯ ಹಾಗೂ ಆತನ ಇಬ್ಬರ ಸಹಚರರನ್ನು ಬಂಧಿಸಲಾಗಿದೆ.

ಜತೆಗೆ ಆಸ್ಪತ್ರೆಗೂ ಬೀಗ ಹಾಕಲಾಗಿದೆ. ಆಕೆ ಕಳೆದ 10 ತಿಂಗಳಿನಿಂದ ನರ್ಸ್​ ಆಗಿ ಕೆಲಸ ಮಾಡುತ್ತಿದ್ದಳು, ಶನಿವಾರ ರಾತ್ರಿ ವೈದ್ಯರ ಪತ್ನಿ ಮನೆಯಲ್ಲಿರಲಿಲ್ಲ, ಆಕೆಯನ್ನು ಮಲಗುವ ಕೋಣೆಗೆ ಕರೆದಿದ್ದರು ಆಕೆ ನಿರಾಕರಿಸಿದಾಗ ಆತನ ಸಹಚರರು ಆಕೆಯನ್ನು ಬಲವಂತವಾಗಿ ರೂಮಿಗೆ ತಳ್ಳಿ ಬಾಗಿಲು ಹಾಕಿದ್ದರು. ಬಳಿಕ ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು.

ಘಟನೆಯ ಬಗ್ಗೆ ನರ್ಸ್ ತನ್ನ ಮನೆಯವರಿಗೆ ತಿಳಿಸಿದಾಗ, ಅವರು ಅವಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಇಡೀ ಘಟನೆಯ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ. ವೈದ್ಯರು, ವಾರ್ಡ್ ಬಾಯ್ ಮತ್ತು ವೈದ್ಯ ಸೇರಿದಂತೆ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಡಾ.ಶಹನವಾಜ್ ಮತ್ತು ಆತನ ಇಬ್ಬರು ಸಹ ಆರೋಪಿಗಳನ್ನು ಸ್ಥಳದಿಂದ ಬಂಧಿಸಿದ್ದಾರೆ.

ನರ್ಸ್ ತಂದೆಯ ದೂರಿನ ಮೇರೆಗೆ ಪೊಲೀಸರು ಅತ್ಯಾಚಾರ ಮತ್ತು ಎಸ್‌ಸಿ ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನರ್ಸ್​​ನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

ಮತ್ತಷ್ಟು ಓದಿ: ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ: ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚನೆಗೆ ಸುಪ್ರೀಂ ಸೂಚನೆ

ಮುಖ್ಯ ವೈದ್ಯಾಧಿಕಾರಿ ಸೂಚನೆ ಮೇರೆಗೆ ಪೊಲೀಸರೊಂದಿಗೆ ಆರೋಗ್ಯ ಇಲಾಖೆ ತಂಡ ತಪಾಸಣೆ ನಡೆಸಿತು. ಸುಮಾರು ಒಂಬತ್ತು ರೋಗಿಗಳು ಆಸ್ಪತ್ರೆಯಲ್ಲಿ ದಾಖಲಾಗಿರುವುದು ಕಂಡುಬಂದಿದೆ. ಆರೋಪಿ ಡಾ.ಶಹನವಾಜ್ ಬಿಯುಎಂಎಸ್ ಪದವಿ ಪಡೆದಿದ್ದ ಎನ್ನಲಾಗಿದೆ. ಸದ್ಯ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದ್ದು, ಆಸ್ಪತ್ರೆಯನ್ನು ಸೀಲ್ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​