ಮಹಾರಾಷ್ಟ್ರ: ರತ್ನಗಿರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ, ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ

ಮಹಾರಾಷ್ಟ್ರದಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಬೆಳಕಿಗೆ ಬಮದಿದೆ. ವಿದ್ಯಾರ್ಥಿನಿ ದೇಹದ ತುಂಬಾ ಗಾಯಗಳಾಗಿದ್ದು, ಆಕೆ ಮೈದಾನದ ಸಮೀಪ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಳು.

ಮಹಾರಾಷ್ಟ್ರ: ರತ್ನಗಿರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ, ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
ವೈದ್ಯರು
Follow us
ನಯನಾ ರಾಜೀವ್
|

Updated on: Aug 27, 2024 | 10:20 AM

ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಚಂಪಕ್ ಮೈದಾನದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಕೆ ತೀವ್ರವಾಗಿ ಗಾಯಗೊಂಡಿದ್ದಳು. ಆಕೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಕೊಲೆ ಇಡೀ ದೇಶವನ್ನೇ ನಿದ್ದೆಗೆಡುವಂತೆ ಮಾಡಿದೆ., ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಹೇಳಲಾಗುತ್ತಿದೆ. ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಈ ಹೊತ್ತಲ್ಲೇ ನರ್ಸಿಂಗ್​ ವಿದ್ಯಾರ್ಥಿನಿ ಮೇಲೆ ನಡೆದ ದೌರ್ಜನ್ಯ ಆಕ್ರೋಶಕ್ಕೆ ಕಾರಣವಾಗಿದೆ.

ಆಸ್ಪತ್ರೆಯ ಮೂಲಗಳ ಪ್ರಕಾರ, ವಿದ್ಯಾರ್ಥಿನಿಗೆ ಅನೇಕ ಗಾಯಗಳಾಗಿದ್ದು, ಅತ್ಯಾಚಾರ ನಡೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯು ರತ್ನಗಿರಿಯ ನರ್ಸಿಂಗ್ ಸಮುದಾಯದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ದಾಳಿಯಿಂದ ತೀವ್ರ ಕೋಪಗೊಂಡ ನರ್ಸ್‌ಗಳು ಮತ್ತು ಆಸ್ಪತ್ರೆ ಸಿಬ್ಬಂದಿ, ಅಪರಾಧಕ್ಕೆ ಕಾರಣರಾದವರಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿ ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದರು.

ಮತ್ತಷ್ಟು ಓದಿ: 70 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ, 2 ದಿನಗಳ ಕಾಲ ಶವದ ಜತೆ ಕಳೆದ ವ್ಯಕ್ತಿ

ಪ್ರತಿಭಟನೆಗಳು ಉಲ್ಬಣಗೊಂಡಿದ್ದರಿಂದ ಆಸ್ಪತ್ರೆಯ ಸಿಬ್ಬಂದಿ ಇತರ ಬೆಂಬಲಿಗರೊಂದಿಗೆ ಬೀದಿಗಿಳಿದು ರತ್ನಗಿರಿಯ ಹಲವು ಭಾಗಗಳಲ್ಲಿ ಸಂಚಾರವನ್ನು ನಿರ್ಬಂಧಿಸಿದರು. ಪ್ರತಿಭಟನಾಕಾರರು ಬ್ಯಾನರ್‌ಗಳನ್ನು ಹಿಡಿದು ಘೋಷಣೆಗಳನ್ನು ಕೂಗಿ, ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ಪರಿಸ್ಥಿತಿಯು ನಗರದಲ್ಲಿ ಗಮನಾರ್ಹ ಅಸ್ತವ್ಯಸ್ತತೆಯನ್ನು ಸೃಷ್ಟಿಸಿದೆ, ಅಧಿಕಾರಿಗಳು ತನಿಖೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಭರವಸೆ ನೀಡಿ, ಶಾಂತಿಯಿಂದ ವರ್ತಿಸುವಂತೆ ಮನವಿ ಮಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು