DY Chandrachud: ನ್ಯಾ. ಡಿವೈ ಚಂದ್ರಚೂಡ್ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ: ಶಿಫಾರಸು ಮಾಡಿದ ನ್ಯಾ. ಯುಯು ಲಲಿತ್
ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ (UU Lalit) ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (Justice DY Chandrachud) ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ. ಉನ್ನತ ನ್ಯಾಯಾಲಯದ ನ್ಯಾಯಾಧೀಶರು ನಡೆಸಿದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ ಈ ಶಿಫಾರಸು ಮಾಡಲಾಗಿದೆ.
ಇದರೊಂದಿಗೆ ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 9 ರಂದು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಮತ್ತು ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.
Chief Justice of India UU Lalit recommends the name of Justice DY Chandrachud (in file pic) as his successor.
Justice Chandrachud to become the 50th CJI. Chief Justice UU Lalit is retiring on November 8 this year. pic.twitter.com/p0OymLfp0n
— ANI (@ANI) October 11, 2022
ನವೆಂಬರ್ 9 ರಂದು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಲಿರುವ ನ್ಯಾಯಮೂರ್ತಿ ಚಂದ್ರಚೂಡ್ ಅವರಿಗೆ ಸಿಜೆಐ ತಮ್ಮ ಶಿಫಾರಸು ಪತ್ರದ ಪ್ರತಿಯನ್ನು ಹಸ್ತಾಂತರಿಸಿದರು. ಮೇ 13, 2016 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ನ್ಯಾಯಮೂರ್ತಿ ಚಂದ್ರಚೂಡ್ ಅವರು ಫೆಬ್ರವರಿ 22, 1978 ರಿಂದ ಜುಲೈ 11, 1985 ರವರೆಗೆ ನ್ಯಾಯಾಂಗದ ಮುಖ್ಯಸ್ಥರಾಗಿದ್ದ ಸಿಜೆಐ ವೈ ವಿ ಚಂದ್ರಚೂಡ್ ಅವರ ಪುತ್ರ.
ಸಿಜೆಐ ಲಲಿತ್ ಅವರು 74 ದಿನಗಳ ಅಲ್ಪಾವಧಿಯ ನಂತರ ನವೆಂಬರ್ 8 ರಂದು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ. ಒಂದು ದಿನದ ನಂತರ ನ್ಯಾಯಮೂರ್ತಿ ಚಂದ್ರಚೂಡ್ ಅವರು ಮುಂದಿನ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನ್ಯಾಯಮೂರ್ತಿ ಚಂದ್ರಚೂಡ್ ಅವರು ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ. ನವೆಂಬರ್ 10, 2024ಕ್ಕೆ ಅವರ ಅಧಿಕಾರವಧಿ ಮುಗಿಯಲಿದೆ. ಅಂದರೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು 65 ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.
ಉನ್ನತ ನ್ಯಾಯಾಂಗದಲ್ಲಿ ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಯನ್ನು ನಿಯಂತ್ರಿಸುವ ಮೆಮೊರಾಂಡಮ್ ಆಫ್ ಪ್ರೊಸೀಜರ್ (MoP) ಪ್ರಕಾರ, ನಿರ್ಗಮಿತ ಸಿಜೆಐ ಅವರು ಕಾನೂನು ಸಚಿವಾಲಯದಿಂದ ಸಂವಹನವನ್ನು ಪಡೆದ ನಂತರ ಉತ್ತರಾಧಿಕಾರಿಯನ್ನು ಹೆಸರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತಾರೆ.
ಸುಪ್ರೀಂಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರು ಸಿಜೆಐ ಹುದ್ದೆಯನ್ನು ಹೊಂದಲು ಯೋಗ್ಯರೆಂದು ಪರಿಗಣಿಸಲಾಗಿದೆ ಮತ್ತು ನ್ಯಾಯಾಂಗದ ಹೊರಹೋಗುವ ಮುಖ್ಯಸ್ಥರ ಅಭಿಪ್ರಾಯಗಳನ್ನು “ಸೂಕ್ತ ಸಮಯದಲ್ಲಿ” ಪಡೆಯಬೇಕು ಎಂದು MoP ಹೇಳುತ್ತದೆ. ಆದಾಗ್ಯೂ, ಉತ್ತರಾಧಿಕಾರಿ ಸಿಜೆಐ ಹೆಸರನ್ನು ಶಿಫಾರಸು ಮಾಡುವ ಪ್ರಕ್ರಿಯೆಯ ಪ್ರಾರಂಭದ ಸಮಯದ ಮಿತಿಯನ್ನು MoP ನಿರ್ದಿಷ್ಟಪಡಿಸುವುದಿಲ್ಲ.
ನ್ಯಾಯಮೂರ್ತಿ ಲಲಿತ್ ಬಗ್ಗೆ
ನ್ಯಾಯಮೂರ್ತಿ ಲಲಿತ್ ಅವರು ಸುಪ್ರೀಂಕೋರ್ಟ್‌ನ ನ್ಯಾಯಾಧೀಶರಾಗುವ ಮೊದಲು ಹೆಸರಾಂತ ಹಿರಿಯ ವಕೀಲರಾಗಿದ್ದರು. ಅವರು ಆಗಸ್ಟ್ 13, 2014 ರಂದು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡರು. ಲಲಿತ್ ಅವರು ಬಾರ್‌ನಿಂದ ನೇರವಾಗಿ ಸುಪ್ರೀಂಕೋರ್ಟ್ ಪೀಠಕ್ಕೆ ಏರಿದ ಎರಡನೇ ಸಿಜೆಐ ಆಗಿದ್ದಾರೆ. ಜನವರಿ 1971 ರಲ್ಲಿ 13 ನೇ ಸಿಜೆಐ ಆದ ನ್ಯಾಯಮೂರ್ತಿ ಎಸ್‌ಎಂ ಸಿಕ್ರಿ ಅವರು ಮಾರ್ಚ್ 1964 ರಲ್ಲಿ ನೇರವಾಗಿ ಉನ್ನತ ನ್ಯಾಯಾಲಯದ ಪೀಠಕ್ಕೆ ಏರಿದ ಮೊದಲ ವಕೀಲರಾಗಿದ್ದರು.
ನವೆಂಬರ್ 9, 1957 ರಂದು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಲಲಿತ್ ಜನನ. ಅವರ ಅಪ್ಪ ಯುಆರ್ ಲಲಿತ್ ಅವರು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿದ್ದರು ಮತ್ತು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿದ್ದರು.
ಯುಯು ಲಲಿತ್ ಕ್ರಿಮಿನಲ್ ಕಾನೂನಿನಲ್ಲಿ ಪರಿಣತಿ ಪಡೆದ ನಂತರ ಮತ್ತು 1983 ರಿಂದ 1985 ರವರೆಗೆ ಬಾಂಬೆ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಿದ್ದರು. ನಂತರ ಜೂನ್ 1983 ರಲ್ಲಿ ವಕೀಲರಾಗಿ ಸೇರಿಕೊಂಡರು. 1986 ರಲ್ಲಿ ದೆಹಲಿಗೆ ಬಂದಿದ್ದು ಏಪ್ರಿಲ್ 2004 ರಲ್ಲಿ ಅವರನ್ನು ಉನ್ನತ ನ್ಯಾಯಾಲಯವು ಹಿರಿಯ ವಕೀಲರಾಗಿ ನೇಮಿಸಲಾಯಿತು. ಲಲಿತ್ ಅವರನ್ನು 2ಜಿ ತರಂಗಾಂತರ ಹಂಚಿಕೆ ಪ್ರಕರಣದ ವಿಚಾರಣೆ ನಡೆಸಲು ಸಿಬಿಐಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸಲಾಗಿತ್ತು.
Published On - 11:12 am, Tue, 11 October 22