OBC Reservation Bill: ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯಕ್ಕೆ ಅಧಿಕಾರ; ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕಾರ

OBC Reservation Amendment Bill 2021 | ಒಬಿಸಿ ಪಟ್ಟಿಗೆ ಜಾತಿಗಳನ್ನು ಸೇರಿಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡುವ ಪ್ರಸ್ತಾವನೆ ಇರುವ 127ನೇ ಸಂವಿಧಾನ ತಿದ್ದುಪಡಿ ಮಸೂದೆಯ ಬಗ್ಗೆ ಇಂದು ಲೋಕಸಭಾ ಕಲಾಪದಲ್ಲಿ ಚರ್ಚೆಗಳು ನಡೆದಿದ್ದು, ಸರ್ವಾನುಮತದಿಂದ ಅಂಗೀಕಾರ ಮಾಡಲಾಗಿದೆ.

OBC Reservation Bill: ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯಕ್ಕೆ ಅಧಿಕಾರ; ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕಾರ
ಲೋಕಸಭಾ ಸ್ಪೀಕರ್ ಓಂ ಬಿರ್ಲಾ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 10, 2021 | 8:58 PM

ನವದೆಹಲಿ: ಭಾರತದಲ್ಲಿ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಜಾತಿಗಳನ್ನು ಒಬಿಸಿ (OBC Reservation) ಪಟ್ಟಿಗೆ ಸೇರಿಸುವ ಅಧಿಕಾರವನ್ನು ಆಯಾ ರಾಜ್ಯಗಳಿಗೇ ನೀಡುವ ಮಹತ್ವದ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು (OBC Reservation Amendment Bill 2021) ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಿತ್ತು. ಈ ಮಸೂದೆಯನ್ನು ಪೂರ್ಣ ಪ್ರಮಾಣದಲ್ಲಿ ಬೆಂಬಲಿಸುವುದಾಗಿ 15 ವಿರೋಧ ಪಕ್ಷಗಳು ಕೂಡ ಘೋಷಿಸಿದ್ದವು. ಈ 127ನೇ ಸಂವಿಧಾನ ತಿದ್ದುಪಡಿ ಮಸೂದೆಯ ಬಗ್ಗೆ ಇಂದು ಲೋಕಸಭಾ ಕಲಾಪದಲ್ಲಿ ಚರ್ಚೆಗಳು ನಡೆದಿದ್ದು, ಸರ್ವಾನುಮತದಿಂದ ಅಂಗೀಕಾರ ಮಾಡಲಾಗಿದೆ. ನಾಳೆ ಇದೇ ಮಸೂದೆ ರಾಜ್ಯಸಭೆಯಲ್ಲೂ ಮಂಡನೆಯಾಗಲಿದೆ. ರಾಜ್ಯಸಭೆಯಲ್ಲೂ ವಿರೋಧ ಪಕ್ಷಗಳು ಈ ಮಸೂದೆಗೆ ಬೆಂಬಲ ಸೂಚಿಸಲಿವೆ.

ನಿನ್ನೆಯ ಲೋಕಸಭಾ ಕಲಾಪದಲ್ಲಿ ಪ್ರಸ್ತಾಪಿಸಲಾಗಿರುವ ಈ ಸಂವಿಧಾನ ತಿದ್ದುಪಡಿ ಮಸೂದೆಗೆ ವಿರೋಧ ಪಕ್ಷಗಳು ಕೂಡ ಬೆಂಬಲ ನೀಡಿದ್ದವು. ಹೀಗಾಗಿ, ಸೋಮವಾರ ಲೋಕಸಭಾ ಕಲಾಪದಲ್ಲಿ ಸಂವಿಧಾನದ 127ನೇ ತಿದ್ದುಪಡಿ ಮಸೂದೆ ಮಂಡಿಸಿ ಮಾತನಾಡಿದ್ದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ವೀರೇಂದ್ರ ಕುಮಾರ್‌, ‘ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮದೇ ಆದ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದವರ ಪಟ್ಟಿ ತಯಾರಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡುವ ಕುರಿತು ಸಂವಿಧಾನದ 342ಎ ಮತ್ತು ಅದರ ಜೊತೆಗೆ 338ಬಿ ಹಾಗೂ 366ನೇ ವಿಧಿಗೆ ತಿದ್ದುಪಡಿ ತರುವ ಅಗತ್ಯವಿದೆ’ ಎಂದು ಹೇಳಿದ್ದರು.

ಈ ಹಿಂದೆ ಮಹಾರಾಷ್ಟ್ರದ ಮರಾಠಾ ಮೀಸಲು ಪ್ರಕರಣದ ತೀರ್ಪು ನೀಡುವ ಸಂವಿಧಾನದ 342ಎ ವಿಧಿಯನ್ನು ತನ್ನದೇ ಆದ ರೀತಿಯಲ್ಲಿ ವ್ಯಾಖ್ಯಾನ ಮಾಡಿದ್ದ ಸುಪ್ರೀಂಕೋರ್ಟ್‌, ಒಬಿಸಿ ಪಟ್ಟಿ ಸಿದ್ಧಪಡಿಸುವ ಅಧಿಕಾರ ಕೇವಲ ರಾಷ್ಟ್ರಪತಿಗಳಿಗೆ ಮಾತ್ರ ಇದೆ, ರಾಜ್ಯಗಳಿಗೆ ಈ ಅಧಿಕಾರ ಇಲ್ಲವಾದ್ದರಿಂದ ಮಹಾರಾಷ್ಟ್ರ ಸರ್ಕಾರ ಮರಾಠ ಸಮುದಾಯಕ್ಕೆ ನೀಡಿದ್ದ ಮೀಸಲು ರದ್ದುಪಡಿಸಬೇಕು ಎಂದು ಆದೇಶ ಹೊರಡಿಸಿತ್ತು. ಈ ಪ್ರಕರಣದ ವಿಚಾರಣೆ ವೇಳೆ, 342ಎ ವಿಧಿಯನ್ನು ಕೇವಲ ರಾಷ್ಟ್ರೀಯ ಹಿಂದುಳಿದ ಆಯೋಗದ ರಚನೆಗಾಗಿ ಮಾಡಲಾಗಿದೆ, ಇದರಿಂದ ಒಬಿಸಿ ಪಟ್ಟಿ ರಚಿಸುವ ರಾಜ್ಯಗಳ ಅಧಿಕಾರ ಮೊಟಕುಗೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ವಾದಿಸಿತ್ತು. ಆದರೆ, ಕೇಂದ್ರ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್‌ ಒಪ್ಪಿರಲಿಲ್ಲ. ಹೀಗಾಗಿ, ಸಂವಿಧಾನವನ್ನೇ ತಿದ್ದುಪಡಿ ಮಾಡುವ ಮೂಲಕ ಒಬಿಸಿ ಪಟ್ಟಿಗೆ ಜಾತಿಗಳನ್ನು ಸೇರಿಸುವ ರಾಜ್ಯಗಳ ಅಧಿಕಾರವನ್ನು ಮರಳಿ ರಾಜ್ಯಗಳಿಗೆ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಮಂಡಿಸಿತ್ತು.

ನಿನ್ನೆ ಮುಂಗಾರು ಅಧಿವೇಶನದಲ್ಲಿ ಒಬಿಸಿ ಮೀಸಲಾತಿಗೆ ಜಾತಿಗಳನ್ನು ಸೇರಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೇ ನೀಡಬೇಕೆಂಬ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡನೆ ಮಾಡುತ್ತಿದ್ದಂತೆ ಪಂಚಮಸಾಲಿ ಮಠಾಧೀಶರು ಹಾಗೂ ನಾಯಕರು ತಮ್ಮ ಜಾತಿಯನ್ನು ಒಬಿಸಿ ಪಟ್ಟಿಗೆ ಸೇರಿಸಬೇಕೆಂಬ ಮನವಿಯನ್ನು ಕರ್ನಾಟಕ ಸರ್ಕಾರದ ಮುಂದಿಡಲು ಸಿದ್ಧತೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಪಂಚಮಸಾಲಿ ಲಿಂಗಾಯತರು ಹೇಗೆ ತಮ್ಮನ್ನು ಒಬಿಸಿ ಪಟ್ಟಿಗೆ ಸೇರಿಸಬೇಕೆಂಬ ಒತ್ತಾಯ ಹೇರುತ್ತಿದ್ದಾರೋ ಹಾಗೇ ಹರಿಯಾಣದಲ್ಲಿ ಜಾಠ್, ರಾಜಸ್ಥಾನದಲ್ಲಿ ಗುಜ್, ಮಹಾರಾಷ್ಟ್ರದಲ್ಲಿ ಮರಾಠ, ಗುಜರಾತಿನಲ್ಲಿ ಪಟೇಲ್ ಸಮುದಾಯದವರು ತಮ್ಮ ಜಾತಿಯನ್ನು ಒಬಿಸಿಗೆ ಸೇರಿಸಬೇಕೆಂದು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ತಿದ್ದುಪಡಿ ಮಸೂದೆಯಿಂದ ಈ ಜಾತಿಗಳ ಜೊತೆಗೆ ಇನ್ನಷ್ಟು ಸಮುದಾಯಗಳು ಒಬಿಸಿ ಸೇರ್ಪಡೆಗೆ ಬೇಡಿಕೆಯಿಡುವ ಸಾಧ್ಯತೆಗಳೂ ಇವೆ.

ಇದನ್ನೂ ಓದಿ: Parliament Monsoon Session: ಲೋಕಸಭೆಯಲ್ಲಿ ಸಂವಿಧಾನದ 127 ನೇ ತಿದ್ದುಪಡಿ ಮಸೂದೆ ಮಂಡನೆ

ರಾಜ್ಯಗಳಿಗೆ ಒಬಿಸಿ ಪಟ್ಟಿ ರೂಪಿಸಿಕೊಳ್ಳುವ ಅಧಿಕಾರ ಮರುಸ್ಥಾಪನೆಗೆ ಕೇಂದ್ರ ಸಂಪುಟ ನಿರ್ಧಾರ

( OBC Reservation Amendment Bill 2021 passed in Lok Sabha which Restores States Power in OBC Reservation)

Published On - 8:16 pm, Tue, 10 August 21

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ