AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OBC Reservation Bill: ಒಬಿಸಿ ಮೀಸಲಾತಿಗೆ ಜಾತಿಗಳನ್ನು ಸೇರಿಸಲು ರಾಜ್ಯಕ್ಕೆ ಅಧಿಕಾರ; ರಾಜ್ಯಸಭೆಯಲ್ಲೂ ಮಸೂದೆ ಅಂಗೀಕಾರ

OBC Reservation Amendment Bill 2021: ಮೂರನೇ ಎರಡರಷ್ಟು ಬಹುಮತದೊಂದಿಗೆ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದು, ಎರಡೂ ಸದನಗಳಲ್ಲಿ ಒಬಿಸಿ ಸೇರ್ಪಡೆಗೆ ಜಾತಿಗಳನ್ನು ಸೇರಿಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡುವ ಮಸೂದೆ ಅಂಗೀಕಾರವಾದಂತಾಗಿದೆ.

OBC Reservation Bill: ಒಬಿಸಿ ಮೀಸಲಾತಿಗೆ ಜಾತಿಗಳನ್ನು ಸೇರಿಸಲು ರಾಜ್ಯಕ್ಕೆ ಅಧಿಕಾರ; ರಾಜ್ಯಸಭೆಯಲ್ಲೂ ಮಸೂದೆ ಅಂಗೀಕಾರ
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Aug 11, 2021 | 6:36 PM

Share

ನವದೆಹಲಿ: ನಿನ್ನೆ ಲೋಕಸಭೆಯಲ್ಲಿ ಚರ್ಚೆಯಾಗಿ ಅಂಗೀಕಾರವಾಗಿದ್ದ ಸಂವಿಧಾನದ 127ನೇ ತಿದ್ದುಪಡಿ ಮಸೂದೆ ಇಂದು ರಾಜ್ಯಸಭೆಯಲ್ಲಿಯೂ ಅಂಗೀಕಾರವಾಗಿದೆ. ರಾಜ್ಯಸಭಾ ಸದನದಲ್ಲಿ 187 ಮತಗಳ ಬೆಂಬಲದೊಂದಿಗೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ. ಮೂರನೇ ಎರಡರಷ್ಟು ಬಹುಮತದೊಂದಿಗೆ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದು, ಎರಡೂ ಸದನಗಳಲ್ಲಿ ಒಬಿಸಿ ಸೇರ್ಪಡೆಗೆ ಜಾತಿಗಳನ್ನು ಸೇರಿಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡುವ ಮಸೂದೆ ಅಂಗೀಕಾರವಾದಂತಾಗಿದೆ.

ಭಾರತದಲ್ಲಿ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಜಾತಿಗಳನ್ನು ಒಬಿಸಿ (OBC Reservation) ಪಟ್ಟಿಗೆ ಸೇರಿಸುವ ಅಧಿಕಾರವನ್ನು ಆಯಾ ರಾಜ್ಯಗಳಿಗೇ ನೀಡುವ ಮಹತ್ವದ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು (OBC Reservation Amendment Bill 2021) ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಿತ್ತು. ಈ ಮಸೂದೆಯನ್ನು ಪೂರ್ಣ ಪ್ರಮಾಣದಲ್ಲಿ ಬೆಂಬಲಿಸುವುದಾಗಿ 15 ವಿರೋಧ ಪಕ್ಷಗಳು ಕೂಡ ಘೋಷಿಸಿದ್ದವು. ಈ 127ನೇ ಸಂವಿಧಾನ ತಿದ್ದುಪಡಿ ಮಸೂದೆಯ ಬಗ್ಗೆ ನಿನ್ನೆ ಲೋಕಸಭಾ ಕಲಾಪದಲ್ಲಿ ಚರ್ಚೆಗಳು ನಡೆದಿದ್ದು, ಸರ್ವಾನುಮತದಿಂದ ಅಂಗೀಕಾರ ಮಾಡಲಾಗಿತ್ತು. ಇಂದು ಇದೇ ಮಸೂದೆ ರಾಜ್ಯಸಭೆಯಲ್ಲೂ ಮಂಡನೆಯಾಗಿದ್ದು, ರಾಜ್ಯಸಭೆಯಲ್ಲೂ ವಿರೋಧ ಪಕ್ಷಗಳು ಈ ಮಸೂದೆಗೆ ಬೆಂಬಲ ಸೂಚಿಸಿವೆ.

ಸೋಮವಾರ ಲೋಕಸಭಾ ಕಲಾಪದಲ್ಲಿ ಪ್ರಸ್ತಾಪಿಸಲಾಗಿದ್ದ ಈ ಸಂವಿಧಾನ ತಿದ್ದುಪಡಿ ಮಸೂದೆಗೆ ವಿರೋಧ ಪಕ್ಷಗಳು ಕೂಡ ಬೆಂಬಲ ನೀಡಿದ್ದವು. ಹೀಗಾಗಿ, ಸೋಮವಾರ ಲೋಕಸಭಾ ಕಲಾಪದಲ್ಲಿ ಸಂವಿಧಾನದ 127ನೇ ತಿದ್ದುಪಡಿ ಮಸೂದೆ ಮಂಡಿಸಿ ಮಾತನಾಡಿದ್ದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ವೀರೇಂದ್ರ ಕುಮಾರ್‌, ‘ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮದೇ ಆದ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದವರ ಪಟ್ಟಿ ತಯಾರಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡುವ ಕುರಿತು ಸಂವಿಧಾನದ 342ಎ ಮತ್ತು ಅದರ ಜೊತೆಗೆ 338ಬಿ ಹಾಗೂ 366ನೇ ವಿಧಿಗೆ ತಿದ್ದುಪಡಿ ತರುವ ಅಗತ್ಯವಿದೆ’ ಎಂದು ಹೇಳಿದ್ದರು.

ಈ ಹಿಂದೆ ಮಹಾರಾಷ್ಟ್ರದ ಮರಾಠಾ ಮೀಸಲು ಪ್ರಕರಣದ ತೀರ್ಪು ನೀಡುವ ಸಂವಿಧಾನದ 342ಎ ವಿಧಿಯನ್ನು ತನ್ನದೇ ಆದ ರೀತಿಯಲ್ಲಿ ವ್ಯಾಖ್ಯಾನ ಮಾಡಿದ್ದ ಸುಪ್ರೀಂಕೋರ್ಟ್‌, ಒಬಿಸಿ ಪಟ್ಟಿ ಸಿದ್ಧಪಡಿಸುವ ಅಧಿಕಾರ ಕೇವಲ ರಾಷ್ಟ್ರಪತಿಗಳಿಗೆ ಮಾತ್ರ ಇದೆ, ರಾಜ್ಯಗಳಿಗೆ ಈ ಅಧಿಕಾರ ಇಲ್ಲವಾದ್ದರಿಂದ ಮಹಾರಾಷ್ಟ್ರ ಸರ್ಕಾರ ಮರಾಠ ಸಮುದಾಯಕ್ಕೆ ನೀಡಿದ್ದ ಮೀಸಲು ರದ್ದುಪಡಿಸಬೇಕು ಎಂದು ಆದೇಶ ಹೊರಡಿಸಿತ್ತು. ಈ ಪ್ರಕರಣದ ವಿಚಾರಣೆ ವೇಳೆ, 342ಎ ವಿಧಿಯನ್ನು ಕೇವಲ ರಾಷ್ಟ್ರೀಯ ಹಿಂದುಳಿದ ಆಯೋಗದ ರಚನೆಗಾಗಿ ಮಾಡಲಾಗಿದೆ, ಇದರಿಂದ ಒಬಿಸಿ ಪಟ್ಟಿ ರಚಿಸುವ ರಾಜ್ಯಗಳ ಅಧಿಕಾರ ಮೊಟಕುಗೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ವಾದಿಸಿತ್ತು. ಆದರೆ, ಕೇಂದ್ರ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್‌ ಒಪ್ಪಿರಲಿಲ್ಲ. ಹೀಗಾಗಿ, ಸಂವಿಧಾನವನ್ನೇ ತಿದ್ದುಪಡಿ ಮಾಡುವ ಮೂಲಕ ಒಬಿಸಿ ಪಟ್ಟಿಗೆ ಜಾತಿಗಳನ್ನು ಸೇರಿಸುವ ರಾಜ್ಯಗಳ ಅಧಿಕಾರವನ್ನು ಮರಳಿ ರಾಜ್ಯಗಳಿಗೆ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಮಂಡಿಸಿತ್ತು.

ಮುಂಗಾರು ಅಧಿವೇಶನದಲ್ಲಿ ಒಬಿಸಿ ಮೀಸಲಾತಿಗೆ ಜಾತಿಗಳನ್ನು ಸೇರಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೇ ನೀಡಬೇಕೆಂಬ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡನೆ ಮಾಡುತ್ತಿದ್ದಂತೆ ಪಂಚಮಸಾಲಿ ಮಠಾಧೀಶರು ಹಾಗೂ ನಾಯಕರು ತಮ್ಮ ಜಾತಿಯನ್ನು ಒಬಿಸಿ ಪಟ್ಟಿಗೆ ಸೇರಿಸಬೇಕೆಂಬ ಮನವಿಯನ್ನು ಕರ್ನಾಟಕ ಸರ್ಕಾರದ ಮುಂದಿಡಲು ಸಿದ್ಧತೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಪಂಚಮಸಾಲಿ ಲಿಂಗಾಯತರು ಹೇಗೆ ತಮ್ಮನ್ನು ಒಬಿಸಿ ಪಟ್ಟಿಗೆ ಸೇರಿಸಬೇಕೆಂಬ ಒತ್ತಾಯ ಹೇರುತ್ತಿದ್ದಾರೋ ಹಾಗೇ ಹರಿಯಾಣದಲ್ಲಿ ಜಾಠ್, ರಾಜಸ್ಥಾನದಲ್ಲಿ ಗುಜ್, ಮಹಾರಾಷ್ಟ್ರದಲ್ಲಿ ಮರಾಠ, ಗುಜರಾತಿನಲ್ಲಿ ಪಟೇಲ್ ಸಮುದಾಯದವರು ತಮ್ಮ ಜಾತಿಯನ್ನು ಒಬಿಸಿಗೆ ಸೇರಿಸಬೇಕೆಂದು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ತಿದ್ದುಪಡಿ ಮಸೂದೆಯಿಂದ ಈ ಜಾತಿಗಳ ಜೊತೆಗೆ ಇನ್ನಷ್ಟು ಸಮುದಾಯಗಳು ಒಬಿಸಿ ಸೇರ್ಪಡೆಗೆ ಬೇಡಿಕೆಯಿಡುವ ಸಾಧ್ಯತೆಗಳೂ ಇವೆ.

ಇದನ್ನೂ ಓದಿ: OBC Reservation Bill: ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯಕ್ಕೆ ಅಧಿಕಾರ; ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕಾರ

OBC Reservation: ಒಬಿಸಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಲ್ಲಿ ಶೇ. 27ರಷ್ಟು ಮೀಸಲಾತಿ; ಕೇಂದ್ರ ಸರ್ಕಾರ ಘೋಷಣೆ

(OBC Reservation Amendment Bill 2021 passed in Rajya Sabha anonymously OBC Bill Passed in Parliament)

Published On - 6:25 pm, Wed, 11 August 21

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್