ಅಶ್ಲೀಲ ವಿಡಿಯೋ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್​​ ಗಾಂಧಿ, ಪ್ರಜ್ವಲ್​​​​ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಪ್ರಜ್ವಲ್​​​ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​​ ನಾಯಕ ರಾಹುಲ್​​​ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು ಹಾಗೂ ಆರೋಪಿಗಳಿಗೆ ಶಿಕ್ಷೆ ನೀಡಬೇಕು ಎಂದು ಹೇಳಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್​​ ಗಾಂಧಿ, ಪ್ರಜ್ವಲ್​​​​ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ
Follow us
Digi Tech Desk
| Updated By: ಅಕ್ಷಯ್​ ಪಲ್ಲಮಜಲು​​

Updated on:May 04, 2024 | 12:32 PM

ದೆಹಲಿ, ಮೇ.4: ಪ್ರಜ್ವಲ್​​ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​​ ನಾಯಕ ರಾಹುಲ್​​ ಗಾಂಧಿ (Rahul Gandhi) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಪತ್ರ ಬರೆದಿದ್ದಾರೆ. ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು ಈ ಪ್ರಕರಣದದಲ್ಲಿ ಯಾರೇ ಆರೋಪಿಗಳಿದ್ದರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್​​ ಗಾಂಧಿ ಅವರು ಈ ಪತ್ರದಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್​​ ಶಾ ಅವರ ಬಗ್ಗೆಯೂ ಕಿಡಿಕಾರಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಅಮಿತ್​​ ಶಾ ಅವರಿಗೆ ದೇವರಾಜೇಗೌಡ ಮಾಹಿತಿ ನೀಡಿದ್ದರು, ಅವರಿಗೆ ಟಿಕೆಟ್​​​ ನೀಡಿರುವುದು ಆಘಾತದ ವಿಷಯವಾಗಿದೆ. ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಅವರ ಗಮನಕ್ಕೆ ತಂದರೂ ಅವರ ಪರವಾಗಿ ಪ್ರಚಾರ ಮಾಡಿದ್ದು ಮತ್ತೊಂದು ಶಾಕ್ ನನಗೆ ಎಂದು ಹೇಳಿದ್ದಾರೆ.

ಪ್ರಜ್ವಲ್​​​ಗೆ ಭಾರತದಿಂದ ಪರಾರಿಯಾಗಲು ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ ಎಂದು ಹೇಳಿದರು. ಪ್ರಧಾನಿ ಮೋದಿ ಅವರು ಹರಿಯಾಣ ಕುಸ್ತಿಪಟುಗಳು, ಮಣಿಪುರದ ಘಟನೆಗಳಲ್ಲಿ ಮೌನ ವಹಿಸಿದ್ದಾರೆ. ತಾಯಿಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿಯ ಬಂಧನ

ಇನ್ನು ಕರ್ನಾಟಕ ರಾಜ್ಯ ಸರ್ಕಾರ ಎಸ್​​​ಐಟಿ ರಚನೆ ಮಾಡಿದೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ ಭಾರತಕ್ಕೆ ಕರೆ ತರುವ ಮನವಿ‌ ಮಾಡಲಾಗಿದೆ. ಸಂತ್ರಸ್ತರಿಗೆ ರಕ್ಷಣೆ ನೀಡಬೇಕಾಗಿದೆ ಎಂದು ರಾಹುಲ್​​​ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯ ಮಾಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:17 pm, Sat, 4 May 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ