ಭುವನೇಶ್ವರ: ಒಡಿಶಾದ ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ(Odisha Train Accident) ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ. 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಹಿನ್ನೆಲೆ ಒಡಿಶಾ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದೆ. ರಾಜ್ಯದಲ್ಲಿ ಇಂದು (ಜೂ.03) ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ. ಇನ್ನು ಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ.
ಬಹನಾಗಾ ರೈಲು ನಿಲ್ದಾಣದ ಬಳಿ 3 ರೈಲು ಮಾರ್ಗಗಳಿದ್ದವು, ಕೋಲ್ಕತಾದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್ ಲೈವ್ನಲ್ಲಿ ನಿನ್ನೆ (ಜೂ.02) ಸಂಜೆ 7.30ಕ್ಕೆ ಹೊರಟಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, (ರೈಲು ಸಂಖ್ಯೆ 12841) ಒಡಿಶಾದ ಬಹನಗಾ ಬಜಾರ್‌ನಲ್ಲಿರುವ ರೈಲು ನಿಲ್ದಾಣದ ಬಳಿ ಹಳಿ ತಪ್ಪಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಮೊದಲು ಡಿಕ್ಕಿ ಹೊಡೆದಿತ್ತು. ಇದರಿಂದಾಗಿ ಕೋರಮಂಡಲ್ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿ ತಪ್ಪಿ ಮೂರನೇ ರೈಲು ಮಾರ್ಗದ ಮೇಲೂ ಬಿದ್ದಿವೆ.
#WATCH | Latest visuals from the site of the deadly train accident in Odisha’s Balasore. Rescue operations underway
The current death toll stands at 233 pic.twitter.com/H1aMrr3zxR
— ANI (@ANI) June 3, 2023
ಕೆಲ ಸಮಯದ ಬಳಿಕ ಇದೇ ಮಾರ್ಗವಾಗಿ ಇನ್ನೊಂದು ಹಳಿಯಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸಿದ ಬೆಂಗಳೂರು-ಹೌರಾ ಎಕ್ಸಪ್ರೆಸ್ (ರೈಲು ಸಂಖ್ಯೆ 12864) ಸಹ ಹಳಿತಪ್ಪಿದ್ದ ಕೋರಮಂಡಲ್ನ ಬೋಗಿಗಳಿಗೆ ಡಿಕ್ಕಿ ಹೊಡೆದಿದ್ದು, ನಾಲ್ಕು ಬೋಗಿಗಳಿಗೆ ಹಳಿತಪ್ಪಿವೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್ ಶರ್ಮಾ ಹೇಳಿದ್ದಾರೆ.
ರೈಲು ಅಪಘಾತದಲ್ಲಿ ಮರತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಖುದ್ದು ಮಾಹಿತಿ ಪಡೆಯುತ್ತಿದ್ದೇವೆ ಎಂದು ಉಭಯ ನಾಯಕರು ಟ್ವೀಟ್ ಮಾಡಿದ್ದರು.
ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಗೆ ನಾವು ಹೆಚ್ಚಿನ ಆದ್ಯತೆ ನೀಡಿದ್ದೇವೆ. ರೈಲ್ವೆ, NDRF, SDRF ತಂಡದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ತ್ವರಿತಗತಿಯಲ್ಲಿ ರಕ್ಷಣಾ ಕಾರ್ಯ ನಡೆಸಲು ಸೂಚನೆ ನೀಡಿದ್ದೇನೆ. ರೈಲು ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುತ್ತೇವೆ. ಪ್ರಕರಣದ ತನಿಖೆಗಾಗಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದ್ದಾರೆ.
#WATCH | Railways Minister Ashwini Vaishnaw reaches accident spot in #Balasore where three trains collided yesterday claiming the lives of 233 people and injuring around 900#OdishaTrainTragedy pic.twitter.com/sevsPnEd1r
— ANI (@ANI) June 3, 2023
ಸರ್ಕಾರದ ಸಹಾಯವಾಣಿ ಸಂಖ್ಯೆ: 033-26382217, 8972073925, 67822 62286, 9332392339
ಅಪಘಾತದಲ್ಲಿ ಮೃತಪಟ್ಟವರ ಕುಟುಂದವರಿಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದರು. ಅದೇ ರೀತಿ ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ 50,000 ರೂ. ನೀಡಲಾಗುವುದು ಎಂದು ಅವರು ತಿಳಿಸಿದ್ದರು.
Published On - 6:58 am, Sat, 3 June 23