Odisha Accident: ಒಡಿಶಾದಲ್ಲಿ ಭೀಕರ ಅಪಘಾತ, 10 ಮಂದಿ ಸಾವು, ಹಲವರಿಗೆ ಗಂಭೀರ ಗಾಯ
ಒಡಿಶಾ(Odisha)ದಲ್ಲಿ ಎರಡು ಬಸ್(Bus)ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 10 ಮಂದಿ ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಒಡಿಶಾ(Odisha)ದಲ್ಲಿ ಎರಡು ಬಸ್(Bus)ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 10 ಮಂದಿ ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಡಿಶಾದ ಗಂಜಾಮ್ ಜಿಲ್ಲೆಯಲ್ಲಿ ನಡೆದ ಬಸ್ ಅಪಘಾತ ಸಂಭವಿಸಿದೆ, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗಾಯಾಳುಗಳನ್ನು ತಕ್ಷಣವೇ ಬರ್ಹಾಂಪುರದ ಎಂಕೆಸಿಜಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಎರಡು ಬಸ್ಗಳ ನಡುವೆ ಡಿಕ್ಕಿ ಸಂಭವಿಸಿ 10 ಮಂದಿ ಸಾವನ್ನಪ್ಪಿದ್ದಾರೆ, ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ ಎಂದು ಗಂಜಾಂ ಡಿಎಂ ದಿವ್ಯ ಜ್ಯೋತಿ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ