ಒಡಿಶಾ(Odisha)ದಲ್ಲಿ ಎರಡು ಬಸ್(Bus)ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 10 ಮಂದಿ ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಡಿಶಾದ ಗಂಜಾಮ್ ಜಿಲ್ಲೆಯಲ್ಲಿ ನಡೆದ ಬಸ್ ಅಪಘಾತ ಸಂಭವಿಸಿದೆ, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗಾಯಾಳುಗಳನ್ನು ತಕ್ಷಣವೇ ಬರ್ಹಾಂಪುರದ ಎಂಕೆಸಿಜಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಎರಡು ಬಸ್ಗಳ ನಡುವೆ ಡಿಕ್ಕಿ ಸಂಭವಿಸಿ 10 ಮಂದಿ ಸಾವನ್ನಪ್ಪಿದ್ದಾರೆ, ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ ಎಂದು ಗಂಜಾಂ ಡಿಎಂ ದಿವ್ಯ ಜ್ಯೋತಿ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ