Odisha Train Accident: ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್​ ಅಪಘಾತ

ಒಡಿಶಾದ ರೈಲು ಅಪಘಾತ(Train Accident) ದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್​ ಅಪಘಾತಕ್ಕೀಡಾಗಿ, ರೋಗಿಗಳಿಗೆ ಮತ್ತಷ್ಟು ಗಾಯಗಳಾಗಿವೆ.

Odisha Train Accident: ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್​ ಅಪಘಾತ
ಬಸ್ ಅಪಘಾತ
Follow us
ನಯನಾ ರಾಜೀವ್
|

Updated on: Jun 04, 2023 | 8:56 AM

ಒಡಿಶಾದ ರೈಲು ಅಪಘಾತ(Train Accident) ದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್​ ಅಪಘಾತಕ್ಕೀಡಾಗಿ, ರೋಗಿಗಳಿಗೆ ಮತ್ತಷ್ಟು ಗಾಯಗಳಾಗಿವೆ. ಈ ಬಸ್ ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿದ ಮಾಹಿತಿ ಇಲ್ಲ, ಆದರೆ ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ ಜಾಮ್ ಆಗಿತ್ತು. ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಬಂಗಾಳದ ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗುತ್ತಿದೆ. ಈ ಮಧ್ಯೆ, ಮಾರ್ಗಮಧ್ಯೆ ಮೇದಿನಿಪುರ ಬಳಿ ಈ ಬಸ್ ಪಿಕಪ್ ವ್ಯಾನ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯಿಂದಾಗಿ ಬಸ್ಸಿನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ.

ರೈಲು ದುರಂತದ ಸಂತ್ರಸ್ತರನ್ನು ಕರೆದೊಯ್ಯುತ್ತಿದ್ದ ಬಸ್ ಮತ್ತು ವ್ಯಾನ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ಸಿನಲ್ಲಿದ್ದ ಕೆಲವರ ಸ್ಥಿತಿ ಗಂಭೀರವಾಗಿದೆ. ಇನ್ನೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ. ಸಣ್ಣಪುಟ್ಟ ಗಾಯಗೊಂಡವರಿಗೂ ಚಿಕಿತ್ಸೆ ನೀಡಲಾಗಿದೆ.

ಮತ್ತಷ್ಟು ಓದಿ: Odisha Train Accident: ಬಾಲಸೋರ್ ಆಸ್ಪತ್ರೆಗೆ ತೆರಳಿ ಒಡಿಶಾ ರೈಲು ದುರಂತದಲ್ಲಿ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿದ ಪ್ರಧಾನಿ ಮೋದಿ

ಶುಕ್ರವಾರ ಸಂಜೆ ಬೆಂಗಳೂರಿನಿಂದ ಹೊರಟಿದ್ದ ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್‌ ರೈಲು, ಶಾಲಿಮಾರ್ ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್‌ ಮತ್ತು ಗೂಡ್ಸ್ ರೈಲುಗಳ ಮಧ್ಯೆ ಈ ಅಫಘಾತ ಸಂಭವಿಸಿದೆ.

ಒಡಿಶಾದ ಬಾಲಸೋರ್‌ ಜಿಲ್ಲೆಯ ಬಹನಾಗಾ ನಿಲ್ದಾಣದ ಬಳಿ ನಡೆದ ಭೀಕರ ರೈಲು ದುರಂತದಲ್ಲಿ 280ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 850 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಘಟನೆಯ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಆ ಮಾರ್ಗದ 58ಕ್ಕೂ ಹೆಚ್ಚು ರೈಲನ್ನು ರದ್ದು ಮಾಡಲಾಗಿದೆ. ಅಲ್ಲದೆ 81 ರೈಲುಗಳನ್ನು ಮಾರ್ಗ ಬದಲಾವಣೆ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್