Odisha Bus Accident: ಆಯತಪ್ಪಿ ಸೇತುವೆಯಿಂದ ಕೆಳಗೆ ಹಾರಿದ ಬಸ್​, ಇಬ್ಬರು ಸಾವು, ಹಲವರಿಗೆ ಗಾಯ

TV9kannada Web Team

TV9kannada Web Team | Edited By: Rashmi Kallakatta

Updated on: Jan 23, 2023 | 7:43 PM

ಒಡಿಶಾದಲ್ಲಿ ಪ್ರವಾಸಕ್ಕೆ ಹೊರಟಿದ್ದ ಬಸ್ ಆಯತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ದೆಂಕನಲ್​ನಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಮೃತಪಟ್ಟು 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

Odisha Bus Accident: ಆಯತಪ್ಪಿ ಸೇತುವೆಯಿಂದ ಕೆಳಗೆ ಹಾರಿದ ಬಸ್​, ಇಬ್ಬರು ಸಾವು, ಹಲವರಿಗೆ ಗಾಯ
ಶಾಲಾ ಬಸ್, ಪ್ರಾತಿನಿಧಿಕ ಚಿತ್ರ

ಧೆಂಕನಲ್: ಒಡಿಶಾದ (Odisha) ಧೆಂಕನಲ್ ಜಿಲ್ಲೆಯ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಂಚುಬಾಟಿ ಬಳಿ ಸೋಮವಾರ ನಸುಕಿನಲ್ಲಿ ಪ್ರವಾಸಿ ಬಸ್ಸೊಂದು ಸೇತುವೆಯಿಂದ ಕೆಳಗೆ ಬಿದ್ದಿದ್ದು ಈ. ಅಪಘಾತದಲ್ಲಿ (Accident) ಇಬ್ಬರು ಸಾವಿಗೀಡಾಗಿದ್ದಾರೆ. ಏತನ್ಮಧ್ಯೆ, 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಪ್ರಾಥಮಿಕ ವರದಿಗಳ ಪ್ರಕಾರ ನೀಲಮಾಧಬ್ ಎಂಬ ಹೆಸರಿನ ಟೂರಿಸ್ಟ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ರೈಲಿಂಗ್‌ಗೆ ಡಿಕ್ಕಿ ಹೊಡೆದ ನಂತರ ಕೆಳಗೆ ಬಿದ್ದಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ.. ಮೃತರನ್ನು ರೇಣುಬಾಲಾ ಜೆನಾ ಮತ್ತು ಬಿಜಯಲಕ್ಷ್ಮಿ ಸ್ವೈನ್ ಎಂದು ಗುರುತಿಸಲಾಗಿದೆ. ಅವರು ಕೇಂದ್ರಪಾರ ಜಿಲ್ಲೆಯ ಇಚ್ಚಾಪುರ ಗ್ರಾಮದ ನಿವಾಸಿಗಳಾಗಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದರು.. ಸ್ಥಳೀಯ ಗ್ರಾಮಸ್ಥರು ಸಹ ರಕ್ಷಣಾ ಕಾರ್ಯಾಚರಣೆಯಲ್ಲಿ ಪೊಲೀಸರಿಗೆ ಸಹಾಯ ಮಾಡಿದರು. ಗಾಯಗೊಂಡವರನ್ನು ಧೆಂಕನಲ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿ

ಇದನ್ನೂ ಓದಿ: KL Rahul Athiya Shetty Wedding: ಖಂಡಾಲಾದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಕೆಎಲ್ ರಾಹುಲ್- ಅಥಿಯಾ ಶೆಟ್ಟಿ!

ಗಾಯಗೊಂಡಿರುವ 15 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ.. ಅಪಘಾತ ಸಂಭವಿಸಿದಾಗ ವಾಹನದಲ್ಲಿ ಒಟ್ಟು 43 ಮಂದಿ ಪ್ರಯಾಣಿಸುತ್ತಿದ್ದರು. ಇಚ್ಚಾಪುರ ಗ್ರಾಮದಿಂದ ಬೋಲಂಗೀರ್ ಮತ್ತು ಸಂಬಲ್‌ಪುರಕ್ಕೆ ಇವರು ಪಿಕ್ನಿಕ್ ತೆರಳಿದ್ದರು. ಬಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು ಅಪಘಾತದ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada